ಜಾರ್ಖಂಡ್‌ | ಕೂಲಿ ಕೇಳಿದ್ದೇ ಅಪರಾಧವಾಯಿತೇ? ದಲಿತ ಮಹಿಳೆ ಮೇಲೆ ಅಮಾನುಷ ಹಲ್ಲೆ ಅಕ್ಷಮ್ಯ

Date:

ಕಳೆದ 11 ವರ್ಷಗಳ (2014-2025) ಅವಧಿಯನ್ನು ಅವಲೋಕಿಸಿದರೆ, ದೇಶಾದ್ಯಂತ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಆತಂಕಕಾರಿ ಏರಿಕೆ ಕಂಡುಬಂದಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಅಂಕಿಅಂಶಗಳ ಪ್ರಕಾರ, 2014ರಿಂದ ಇಲ್ಲಿಯವರೆಗೆ ಪರಿಶಿಷ್ಟ ಜಾತಿಗಳ (SC) ಮೇಲಿನ ಅಪರಾಧ ಪ್ರಕರಣಗಳು ಸುಮಾರು ಶೇ. 35ಕ್ಕೂ ಹೆಚ್ಚು ಏರಿಕೆಯಾಗಿದೆ

ಹೊಟ್ಟೆಪಾಡಿಗಾಗಿ ದುಡಿಯುವುದು ಪ್ರತಿಯೊಬ್ಬರ ಹಕ್ಕು, ಆದರೆ ಮಾಡಿದ ಕೆಲಸಕ್ಕೆ ಕೂಲಿ ಕೇಳಿದ್ದೇ ಅಪರಾಧವೆಂಬಂತೆ ದಲಿತ ಮಹಿಳೆಯೊಬ್ಬರ ಮೇಲೆ ಅಂಗಡಿ ಮಾಲೀಕ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿರುವ ಆಘಾತಕಾರಿ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ. ಈ ಘಟನೆಯು ದೇಶದಲ್ಲಿ ಇನ್ನೂ ಜೀವಂತವಾಗಿರುವ ಉಳಿಗಮಾನ್ಯ ಪದ್ಧತಿ ಮತ್ತು ದಲಿತರ ಮೇಲಿನ ದೌರ್ಜನ್ಯದ ಕರಾಳ ಮುಖವನ್ನು ಮತ್ತೊಮ್ಮೆ ಅನಾವರಣಗೊಳಿಸಿದೆ.

ಜಾರ್ಖಂಡ್‌ನ ಪಲಮು ಜಿಲ್ಲೆಯ ಮೇದಿನಿನಗರದ ಸಮೀಪದ ಮಾರುಕಟ್ಟೆಯೊಂದರಲ್ಲಿ ಈ ಅಮಾನವೀಯ ಕೃತ್ಯ ಜರುಗಿದ್ದು, ಸಂತ್ರಸ್ತ ಮಹಿಳೆಯು ಜೀವನ ನಿರ್ವಹಣೆಗಾಗಿ ಅಂಗಡಿಗಳ ಮುಂಭಾಗ ಕಸ ಗುಡಿಸುವ ಕೆಲಸ ಮಾಡುತ್ತಿದ್ದರು. ಎಂದಿನಂತೆ ಅಂಗಡಿಯ ಮುಂಭಾಗ ಸ್ವಚ್ಛಗೊಳಿಸಿದ ಬಳಿಕ, ತನಗೆ ಸಲ್ಲಬೇಕಾದ ಅಲ್ಪ ಮೊತ್ತದ ಕೂಲಿಯನ್ನು ಅಂಗಡಿ ಮಾಲೀಕನ ಬಳಿ ಕೇಳಿದಾಗ, ಕೂಲಿ ನಿಡುವ ಬದಲು ಆಕ್ರೋಶಗೊಂಡ ಅಂಗಡಿ ಮಾಲೀಕ, ಸಾರ್ವಜನಿಕರ ಮುಂದೆಯೇ ಮಹಿಳೆಯ ಕೂದಲನ್ನು ಹಿಡಿದು ಎಳೆದಾಡಿದ್ದಲ್ಲದೆ, ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಕೇವಲ ಹಲ್ಲೆ ಮಾಡಿದ್ದಲ್ಲದೆ, ಮಹಿಳೆಯ ಜಾತಿಯನ್ನು ಪ್ರಸ್ತಾಪಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂಬುದು ದೂರಿನಲ್ಲಿ ಉಲ್ಲೇಖವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದ್ದರೂ, ಇಂತಹ ಘಟನೆಗಳು ಜಾರ್ಝಂಡ್‌ನಲ್ಲಿ ಹೊಸದೇನಲ್ಲ. ಇತ್ತೀಚಿನ ದಿನಗಳಲ್ಲಿ ನೀರು ಮುಟ್ಟಿದ್ದಕ್ಕೆ ಅಥವಾ ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತರ ಮೇಲೆ ಹಲ್ಲೆ ನಡೆದ ವರದಿಗಳು ಅಲ್ಲಿನ ಗ್ರಾಮೀಣ ಭಾಗಗಳಿಂದ  ಹೆಚ್ಚಾಗುತ್ತಲೇ ಇವೆ.

ಕೂಲಿ ಕೇಳುವುದು, ಭೂಮಿಯ ಹಕ್ಕು ಕೇಳುವುದು ಅಥವಾ ಮೇಲ್ಜಾತಿಯವರ ಕಣ್ಣಲ್ಲಿ ಕಣ್ಣಿಟ್ಟು ಮಾತನಾಡುವುದು ಅಲ್ಲಿನ ಕೆಲವು ಪ್ರಬಲ ವರ್ಗಗಳಿಗೆ ಇಂದಿಗೂ ಸಹಿಸಲಾಗದ ಸಂಗತಿಯಾಗಿದೆ. ಈ ನಿರ್ದಿಷ್ಟ ಘಟನೆಯಲ್ಲಿಯೂ ಸಹ, ತಾನು ದುಡಿದ ಹಣವನ್ನು ಕೇಳುವ ಧೈರ್ಯ ಆ ಮಹಿಳೆ ತೋರಿದ್ದೇ ಆಕೆಯ ಮೇಲಿನ ಹಲ್ಲೆಗೆ ಪ್ರಮುಖ ಕಾರಣವಾಯಿತು ಎಂಬುದು ಸಾಮಾಜಿಕ ವ್ಯವಸ್ಥೆಯ ಅಣಕವಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯ ಪೊಲೀಸ್ ವ್ಯವಸ್ಥೆ ಕೆಡಲು ಕಾರಣರಾರು?

ಕಳೆದ 11 ವರ್ಷಗಳ (2014-2025) ಅವಧಿಯನ್ನು ಅವಲೋಕಿಸಿದರೆ, ದೇಶಾದ್ಯಂತ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಆತಂಕಕಾರಿ ಏರಿಕೆ ಕಂಡುಬಂದಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಅಂಕಿಅಂಶಗಳ ಪ್ರಕಾರ, 2014ರಿಂದ ಇಲ್ಲಿಯವರೆಗೆ ಪರಿಶಿಷ್ಟ ಜಾತಿಗಳ (SC) ಮೇಲಿನ ಅಪರಾಧ ಪ್ರಕರಣಗಳು ಸುಮಾರು ಶೇ. 35ಕ್ಕೂ ಹೆಚ್ಚು ಏರಿಕೆಯಾಗಿದೆ. ವಾರ್ಷಿಕವಾಗಿ ಸರಾಸರಿ 50,000ಕ್ಕೂ ಹೆಚ್ಚು ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತಿವೆ. ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದರೂ, ಆರೋಪಿಗಳಿಗೆ ಶಿಕ್ಷೆಯಾಗುವ ಪ್ರಮಾಣ ತೀರಾ ಕಡಿಮೆಯಿದೆ.

ಸಾಕ್ಷ್ಯಾಧಾರಗಳ ಕೊರತೆ ಮತ್ತು ಸಾಮಾಜಿಕ ಒತ್ತಡದಿಂದಾಗಿ ಶೇ. 50ರಷ್ಟು ಪ್ರಕರಣಗಳಲ್ಲಿ ರಾಜಿ ಮಾಡಿಕೊಳ್ಳಲಾಗುತ್ತದೆ ಅಥವಾ ಸಾಕ್ಷ್ಯಾಧಾರಗಳಿಲ್ಲದೆ ಬಿದ್ದು ಹೋಗುತ್ತವೆ. ಅದರಲ್ಲೂ ಜಾರ್ಖಂಡ್‌ನಲ್ಲಿ ಆಳವಾಗಿ ಬೇರೂರಿರುವ ಊಳಿಗಮಾನ್ಯ ಮನಸ್ಥಿತಿಯಿಂದಾಗಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯಗಳು, ಅಂದರೆ ಅತ್ಯಾಚಾರ, ವಿವಸ್ತ್ರಗೊಳಿಸುವುದು, ಸೇರಿದಂತೆ ದೌರ್ಜನ್ಯ ನಡೆಸುವ ಪ್ರಕರಣಗಳು ಹೆಚ್ಚಾಗಿವೆ.

ಇತ್ತೀಚಿನ ವರ್ಷಗಳಲ್ಲಿ ದೌರ್ಜನ್ಯದ ಸ್ವರೂಪವೂ ಬದಲಾಗಿದ್ದು, ಹಿಂದೆ ದೈಹಿಕ ಹಲ್ಲೆಗಳು ಮಾತ್ರ ನಡೆಯುತ್ತಿದ್ದವು, ಆದರೆ ಈಗ ಸಾಮಾಜಿಕ ಜಾಲತಾಣಗಳ ಯುಗದಲ್ಲಿ, ಹಲ್ಲೆ ಮಾಡಿ ಅದನ್ನು ವಿಡಿಯೋ ಮಾಡಿ ಹರಿಬಿಡುವ ವಿಕೃತ ಪ್ರವೃತ್ತಿ ಹೆಚ್ಚುತ್ತಿದೆ. ಇದು ಸಂತ್ರಸ್ತರನ್ನು ಕೇವಲ ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಕುಗ್ಗಿಸುವ ಮತ್ತು ಸಾರ್ವಜನಿಕವಾಗಿ ಅವಮಾನಿಸುವ ಕುತಂತ್ರವಾಗಿದೆ.

ರಾಜಸ್ಥಾನ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಜಾರ್ಖಂಡ್ ರಾಜ್ಯಗಳಲ್ಲಿ ದಲಿತರ ಮೇಲೆ ಮೀಸೆ ಬಿಟ್ಟಿದ್ದಕ್ಕೆ ಹಲ್ಲೆ, ಮದುವೆಯಲ್ಲಿ ಕುದುರೆ ಏರಿದ್ದಕ್ಕೆ ಬಹಿಷ್ಕಾರದಂತಹ ಘಟನೆಗಳು ಕಳೆದ ಒಂದು ದಶಕದಲ್ಲಿ ಸಂವಿಧಾನದ ಆಶಯಗಳಿಗೆ ಸವಾಲಾಗಿ ಪರಿಣಮಿಸಿವೆ. ಜಾರ್ಖಂಡ್‌ನ ಈ ಇತ್ತೀಚಿನ ಘಟನೆಯು ಕೇವಲ ಒಬ್ಬ ಮಹಿಳೆಯ ಮೇಲಿನ ಹಲ್ಲೆಯಲ್ಲ, ಇದು ಇಡೀ ವ್ಯವಸ್ಥೆಯ ಮೇಲಿನ ಕಪ್ಪುಚುಕ್ಕೆ. ಕಾನೂನುಗಳು ಎಷ್ಟೇ ಕಠಿಣವಾಗಿದ್ದರೂ, ಸಮಾಜದ ಮನಸ್ಥಿತಿ ಬದಲಾಗದ ಹೊರತು, ಅಂಗಡಿ ಮುಂಭಾಗ ಕಸ ಗುಡಿಸುವ ತಾಯಂದಿರು ತಮ್ಮ ಹಕ್ಕಿನ ಕೂಲಿ ಕೇಳಲು ಭಯಪಡುವ ಸ್ಥಿತಿ ಬದಲಾಗದು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...