ಹಸುಗಳನ್ನು ಇಸ್ಕಾನ್ ಮಾರಿದಷ್ಟು ಬೇರಾರು ಮಾರಿಲ್ಲ; ಬಿಜೆಪಿ ಸಂಸದೆ ಆರೋಪಕ್ಕೆ ಇಸ್ಕಾನ್ ಪ್ರತಿಕ್ರಿಯೆ

Date:

ಮಾಂಸ ಮಾರುವವರಿಗೆ ಇಸ್ಕಾನ್ ಮಾರಿರುವಷ್ಟು ಹಸುಗಳನ್ನು ಯಾರೂ ಮಾರಿಲ್ಲ ಎಂದಿರುವ ಬಿಜೆಪಿ ಸಂಸದೆ ಮನೇಕಾ ಗಾಂಧಿ ಅವರ ಹೇಳಿಕೆಗೆ ಇಸ್ಕಾನ್ ಪ್ರತಿಕ್ರಿಯೆ ನೀಡಿದೆ. ಸಂಸದೆಯ ಆರೋಪಗಳು ಆಧಾರ ರಹಿತವೆಂದು ಹೇಳಿದೆ.

ಮನೇಕಾ ಗಾಂಧಿ ಅವರ ಆರೋಪಗಳನ್ನು ಅಲ್ಲಗಳೆದಿರುವ ಇಸ್ಕಾನ್​ನ ರಾಷ್ಟ್ರೀಯ ವಕ್ತಾರ ಯುಧಿಷ್ಠಿರ್ ಗೋವಿಂದ್ ದಾಸ್, “ಗೋವುಗಳು ಹಾಗೂ ಗೂಳಿಗಳ ಸಂರಕ್ಷಣೆಗಾಗಿ ಭಾರತ ಮಾತ್ರವಲ್ಲದೆ ವಿಶ್ವಾದ್ಯಂತ ಕೆಲಸ ಮಾಡುತ್ತಿದೆ. ಹಸುಗಳು ಮತ್ತು ಎತ್ತುಗಳು ಇಸ್ಕಾನ್​ನ ಗೋಶಾಲೆಯಲ್ಲಿ ಬದುಕಿರುವವರೆಗೂ ಇರುತ್ತವೆ. ನಾವು ಒಂದೇ ಒಂದು ಹಸು, ಎತ್ತು ಅಥವಾ ಕರುವನ್ನು ಮಾಂಸ ಮಾರುವವರಿಗೆ ಮಾರುವುದಿಲ್ಲ” ಎಂದು ಹೇಳಿದ್ದಾರೆ.

ಕಳೆದ ತಿಂಗಳು ಸುದ್ದಿವಾಹಿನಿಯೊಂದು ಮನೇಕಾ ಗಾಂಧಿ ಅವರ ಸಂದರ್ಶನ ನಡೆಸಿತ್ತು. ಅದರ ಸಣ್ಣ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ವಿಡಿಯೋದಲ್ಲಿ, “ಈ ದೇಶದಲ್ಲಿ ಅತೀ ದೊಡ್ಡ ಮೋಸಗಾರರು ಎಂದರೆ ಅದು ಇಸ್ಕಾನ್. ಅವರು ಗೋಶಾಲೆಗಳನ್ನು ನಿರ್ಮಿಸುತ್ತಾರೆ. ಅವುಗಳನ್ನು ನಡೆಸಲು ಸರ್ಕಾರದಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆಯುತ್ತಾರೆ. ನಾನು ಇತ್ತೀಚೆಗೆ, ಅವರ ಅನಂತಪುರ ಗೋಶಾಲೆಗೆ ಹೋಗಿದ್ದೆ. ಅಲ್ಲಿ, ಒಂದೇ ಒಂದು ವಯಸ್ಸಾದ ಹಸು ಇರಲಿಲ್ಲ, ಕರುಗಳು ಕೂಡ ಇರಲಿಲ್ಲ. ಹಾಲು ಕೊಡುವ ಹಸುಗಳನ್ನು ಮಾತ್ರ ಇರಿಸಲಾಗಿದೆ” ಎಂದು ಆರೋಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಹೇಳಿಕೆಯ ವಿಡಿಯೋವನ್ನು ಹಂಚಿಕೊಂಡಿದ್ದ ಆರ್‌ಜೆಡಿ ರಾಷ್ಟ್ರೀಯ ಪ್ರಚಾರ ಉಸ್ತುವಾರಿ ಪ್ರಶಾಂತ್ ಕನೋಜಿಯಾ, “ಭಾರತದಲ್ಲಿ ಅತಿ ಹೆಚ್ಚು ಬೋಗಸ್ ಮತ್ತು ಮೋಸ ಮಾಡುವ ಸಂಸ್ಥೆ ಯಾವುದಾದರೂ ಇದ್ದರೆ ಅದು ಇಸ್ಕಾನ್‌ ಎಂದು ನಾನು ಹಲವು ವರ್ಷಗಳಿಂದ ಹೇಳುತ್ತಿದ್ದೇನೆ. ಈಗ ಮನೇಕಾ ಗಾಂಧಿ ಕೂಡ ಅದೇ ಮಾತನಾಡಿದ್ದಾರೆ. ಇಸ್ಕಾನ್‌ನವರು ಬೀದಿಯಲ್ಲಿ ಹರೇ ಕೃಷ್ಣ ಎನ್ನುತ್ತಾರೆ. ಆದರೆ, ಅವರಿಗೆ ಒಳಗೆ ದೊಡ್ಡ ಅಜೆಂಡಾವಿದೆ. ಇಸ್ಕಾನ್ ಕೂಡ ಆಳವಾದ ಜಾತಿವಾದಿ. ದಲಿತರು ಮತ್ತು ಕಪ್ಪು ಬಣ್ಣದ ಜನರನ್ನು ಜೀತದಾಳುಗಳನ್ನಾಗಿ ಮಾಡುವ ಮಾತನಾಡಿದ್ದಾರೆ” ಎಂದು ಟ್ವೀಟ್ ಮಾಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...