ಏಕರೂಪ ನಾಗರಿಕ ಸಂಹಿತೆ ಜಾರಿಗೆ ವಿರೋಧವಿಲ್ಲ, ಆದರೆ ಬೆಂಬಲಿಸುವುದಿಲ್ಲ: ಮಾಯಾವತಿ

Date:

  • ಏಕರೂಪ ನಾಗರಿಕ ಸಂಹಿತೆ ಮಸೂದೆ ಕುರಿತು ಜುಲೈ 3ಕ್ಕೆ ಚರ್ಚಿಸಲಿರುವ ಸ್ಥಾಯಿ ಸಮಿತಿ
  • ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರದಿಂದ ಯುಸಿಸಿ ಮಸೂದೆ ಮಂಡನೆ ಸಾಧ್ಯತೆ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಮ್ಮ ಪಕ್ಷದ ವಿರೋಧವಿಲ್ಲ, ಆದರೆ, ಅದನ್ನು ಜಾರಿಗೆ ತರುತ್ತಿರುವ ವಿಧಾನವನ್ನು ತಾವು ಬೆಂಬಲಿಸುವುದಿಲ್ಲ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಭಾನುವಾರ (ಜುಲೈ 2) ಹೇಳಿದ್ದಾರೆ.

“ನಮ್ಮ ಪಕ್ಷ ಯುಸಿಸಿ ಅನುಷ್ಠಾನಕ್ಕೆ ವಿರುದ್ಧವಾಗಿಲ್ಲ. ಆದರೆ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಬಿಜೆಪಿ ಪ್ರಯತ್ನಿಸುತ್ತಿರುವ ವಿಧಾನವನ್ನು ನಾವು ಬೆಂಬಲಿಸುವುದಿಲ್ಲ. ವಿಷಯವನ್ನು ರಾಜಕೀಯಗೊಳಿಸುವುದು ಮತ್ತು ದೇಶದಲ್ಲಿ ಯುಸಿಸಿಯನ್ನು ಬಲವಂತವಾಗಿ ಜಾರಿಗೊಳಿಸುವುದು ಸರಿಯಲ್ಲ” ಎಂದು ಮಾಯಾವತಿ ಸುದ್ದಿಗಾರರಿಗೆ ತಿಳಿಸಿದರು.

“ಏಕರೂಪ ನಾಗರಿಕ ಸಂಹಿತೆ ಬಗ್ಗೆ ಈಗಾಗಲೇ ಸಂವಿಧಾನದಲ್ಲಿ ಉಲ್ಲೇಖಿಸಲಾಗಿದೆ. ಬಲವಂತವಾಗಿ ಈ ನೀತಿ ಜಾರಿಗೊಳಿಸುವುದನ್ನು ಸಂವಿಧಾನ ಬೆಂಬಲಿಸುವುದಿಲ್ಲ. ಈ ನಿಟ್ಟಿನಲ್ಲಿ ಬಿಜೆಪಿಯು ಎಲ್ಲ ದಿಕ್ಕುಗಳಿಂದ ಯುಸಿಸಿಯನ್ನು ಅವಲೋಕಿಸಬೇಕಿದೆ” ಎಂದು ಮಾಯಾವತಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯುಸಿಸಿಗೆ ಸಂಬಂಧಿಸಿದ ಎಲ್ಲ ಆಯಾಮಗಳನ್ನು ಬಿಜೆಪಿ ಪರಿಗಣಿಸಬೇಕು. ಪ್ರತಿಯೊಂದು ಸಂದರ್ಭದಲ್ಲೂ ಒಂದೇ ಕಾನೂನು ಎಲ್ಲ ಧರ್ಮದ ಜನರಿಗೆ ಅನ್ವಯಿಸಿದರೆ, ಅದು ದೇಶವನ್ನು ಬಲಪಡಿಸುತ್ತದೆ” ಎಂದು ಮಾಯಾವತಿ ಉಲ್ಲೇಖಿಸಿದರು.

ಏಕರೂಪ ನಾಗರಿಕ ಸಂಹಿತೆಯ ಕುರಿತು ಸಂಸದೀಯ ಸ್ಥಾಯಿ ಸಮಿತಿ ಜುಲೈ 3 ರಂದು ಚರ್ಚೆ ನಡೆಸುವ ಮುನ್ನವೇ ಮಾಯಾವತಿ ಯುಸಿಸಿ ಕುರಿತು ಹೇಳಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಧ್ಯಪ್ರದೇಶ | ಸಮ್ಮತಿಯ ಸೆಕ್ಸ್‌ನಲ್ಲಿ ಮಹಿಳೆಯರ ವಯೋಮಿತಿ 16ಕ್ಕೆ ಇಳಿಸಲು ಹೈಕೋರ್ಟ್‌ ಕೇಂದ್ರಕ್ಕೆ ಮನವಿ

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...