ಮಾಲೆಗಾಂವ್ ಸ್ಫೋಟ ಪ್ರಕರಣ: ಪ್ರಜ್ಞಾ ಸಿಂಗ್ ಠಾಕೂರ್, ಕರ್ನಲ್ ಪುರೋಹಿತ್ ಸೇರಿ ಎಲ್ಲ ಆರೋಪಿಗಳು ಖುಲಾಸೆ

Date:

2008ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಎಲ್ಲ 7 ಆರೋಪಿಗಳನ್ನು ಎನ್ಐಎ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ. 2008ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದ 17 ವರ್ಷಗಳ ನಂತರ ಮುಂಬೈನ ವಿಶೇಷ ಎನ್ಐಎ ನ್ಯಾಯಾಲಯವು ಗುರುವಾರ ತೀರ್ಪು ಪ್ರಕಟಿಸಿದೆ.

ಪುರೋಹಿತ್ ಆರ್‌ಡಿಎಕ್ಸ್‌ ತಂದಿರುವುದಕ್ಕೆ ಯಾವುದೇ ಸಾಕ್ಷಿಯಿಲ್ಲ, ಪಿತೂರಿ ಬಗ್ಗೆಯೂ ಯಾವುದೇ ಸಾಕ್ಷಿಯಿಲ್ಲ. ಪ್ರಾಸಿಕ್ಯೂಷನ್ ಆರೋಪವನ್ನು ಸಾಬೀತುಪಡಿಸುವಲ್ಲಿ ವಿಫಲವಾಗಿದೆ ಎಂದು ನ್ಯಾಯಾಲಯ ತೀರ್ಪು ನೀಡುವ ವೇಳೆ ಹೇಳಿದೆ.

2008ರ ಸೆಪ್ಟೆಂಬರ್ 29ರ ರಾತ್ರಿ ಮಾಲೆಗಾಂವ್‌ನ ಭಿಕ್ಕು ಚೌಕ್ ಬಳಿ ನಡೆದ ಸ್ಫೋಟದಲ್ಲಿ ಆರು ಜನರು ಮೃತಪಟ್ಟಿದ್ದರು. ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಜನದಟ್ಟಣೆಯ ಪ್ರದೇಶದಲ್ಲಿ ಮೋಟಾರ್‌ ಸೈಕಲ್‌ಗೆ ಐಇಡಿ ಅಳವಡಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಾನವೀಯತೆಯ ಪಸೆ ಉಳಿದಿದೆಯೇ ತುಸುವಾದರೂ?

ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್ ಮತ್ತು ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ (ನಿವೃತ್ತ) ಸೇರಿದಂತೆ ಏಳು ಜನರು ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯವು ಏಪ್ರಿಲ್ 19 ರಂದು ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಆರಂಭದಲ್ಲಿ, ಎಲ್ಲಾ ಏಳು ಆರೋಪಿಗಳು ಮೇ 8 ರಂದು ತೀರ್ಪಿಗೆ ಹಾಜರಾಗುವಂತೆ ಸೂಚಿಸಲಾಗಿತ್ತು ಆದರೆ ನಂತರ ತೀರ್ಪನ್ನು ಜುಲೈ 31 ಕ್ಕೆ ಮುಂದೂಡಲಾಯಿತು.

ಆರಂಭದಲ್ಲಿ ಈ ಪ್ರಕರಣದ ತನಿಖೆಯನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ವಿಶೇಷ ಇನ್ಸ್‌ಪೆಕ್ಟರ್ ಜನರಲ್ ಹೇಮಂತ್ ಕರ್ಕರೆ ನಿರ್ವಹಿಸುತ್ತಿದ್ದರು, ನಂತರ ಅವರು 26/11 ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದರು. ಈ ಪ್ರಕರಣದಲ್ಲಿ ಎಟಿಎಸ್ 2009 ರಲ್ಲಿ ತನ್ನ ಆರೋಪಪಟ್ಟಿಯನ್ನು ಸಲ್ಲಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...