ಏ.29ರ ನಂತರ ಕೇಜ್ರಿವಾಲ್ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ ; ನ್ಯಾಯಾಂಗ ಬಂಧನ ಏ.23ರವರೆಗೆ ವಿಸ್ತರಣೆ

Date:

ಅಬಕಾರಿ ನೀತಿ ಪ್ರಕರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಾ.21 ರಂದು ಬಂಧಿಸಿದ್ದ ಕ್ರಮವನ್ನು ಪ್ರಶ್ನಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅರ್ಜಿ ವಿಚಾರಣೆಯನ್ನು ಏ.29ರ ನಂತರ ಪುರಸ್ಕರಿಸುವುದಾಗಿ ಸುಪ್ರೀಂ ಕೋರ್ಟ್ ಸೂಚಿಸಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರ ಅರ್ಜಿಯನ್ನು ದೆಹಲಿ ಹೈಕೋರ್ಟ್ ಏ.09 ರಂದು ವಜಾಗೊಳಿಸಿತ್ತು.

ಎಎಪಿ ಮುಖ್ಯಸ್ಥರ ಬಂಧನವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಏ.29ರಂದು ಆರಂಭವಾಗುವ ವಾರದಲ್ಲಿ ನೋಟಿಸ್ ನೀಡಿ ಹಿಂತಿರುಗಿಸಬಹುದು” ಎಂದು ದ್ವಿಸದಸ್ಯ ನ್ಯಾಯಮೂರ್ತಿಗಳ ಪೀಠವು ಅರ್ಜಿದಾರರಿಗೆ ಸೂಚನೆ ನೀಡಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ

ವಿಚಾರಣೆಯ ಸಂದರ್ಭದಲ್ಲಿ ಕೇಜ್ರಿವಾಲ್ ಪರವಾಗಿ ಕೋರ್ಟ್‌ಗೆ ಹಾಜರಾಗಿದ್ದ ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿ, ಪ್ರಕರಣದಲ್ಲಿ ಆಯ್ದೆ ಸೋರಿಕೆಗಳಿರುವ ಕಾರಣ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಗನೆ ದಿನಾಂಕವನ್ನು ನಿಗದಿ ಮಾಡಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಕೋರ್ಟ್‌ಗೆ ಮನವರಿಕೆ ಮಾಡಿಕೊಂಡರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ನಾವು ನಿಮಗೆ ಬೇಗನೆ ದಿನಾಂಕವನ್ನು ನೀಡುತ್ತೇವೆ. ಆದರೆ ನೀವು ಸೂಚಿಸಿದ ದಿನಾಂಕವನ್ನು ನೀಡಲು ಸಾಧ್ಯವಿಲ್ಲ ಎಂದರು.

ಕೋರ್ಟ್‌ಗೆ ಮತ್ತೆ ಮಾಹಿತಿ ನೀಡಿದ ಸಿಂಘ್ವಿ, 15 ಹೇಳಿಕೆಗಳಿದ್ದರೂ ಜಾರಿ ನಿರ್ದೇಶನಾಲಯದ ಚಾರ್ಜ್‌ಶೀಟ್‌ನಲ್ಲಿ ಕೇಜ್ರಿವಾಲ್‌ ಅವರ ಹೆಸರಿಲ್ಲ ಎಂದು ತಿಳಿಸಿದರು.

ಈ ನಡುವೆ ದೆಹಲಿ ಹೈಕೋರ್ಟ್ ಕೇಜ್ರಿವಾಲ್ ನ್ಯಾಯಾಂಗ ಬಂಧನದ ಅವಧಿಯನ್ನು ಏ.23ರವರೆಗೂ ವಿಸ್ತರಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...