ಹಿಮಾಚಲ ಪ್ರದೇಶ | ವಿಧಾನಸಭೆಯಿಂದ 15 ಬಿಜೆಪಿ ಶಾಸಕರ ಅಮಾನತು; ಕಾಂಗ್ರೆಸ್‌ನ ಸಚಿವ ರಾಜೀನಾಮೆ

Date:

ಹಿಮಾಚಲ ಪ್ರದೇಶ ಸುಖ್ವಿಂದರ್ ಸಿಂಗ್‌ ಸುಖು ನೇತೃತ್ವದ ಕಾಂಗ್ರೆಸ್ ಸರ್ಕಾರ ಬೀಳಿಸಲು ಅವಿಶ್ವಾಸ ನಿರ್ಣಯ ಮಂಡಿಸಲು ತಯಾರಿ ನಡೆಸುತ್ತಿರುವ ಬಿಜೆಪಿಯ ಬೆಳವಣಿಗೆ ನಡುವೆ ಇಂದು ವಿಧಾನಸಭೆಯಿಂದ 15 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಲಾದೆ.

ಹಿಮಾಚಲ ಪ್ರದೇಶದ ಸಚಿವ ವಿಕ್ರಮಾದಿತ್ಯ ಸಿಂಗ್ ರಾಜೀನಾಮೆ ನೀಡಿದ ನಂತರ ಈ ಬೆಳವಣಿಗೆ ನಡೆದಿದೆ. ವಿಕ್ರಮಾದಿತ್ಯ ಸಿಂಗ್ ಅವರು ಕಾಂಗ್ರೆಸ್‌ನ ಹಿರಿಯ ನಾಯಕ ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪುತ್ರ.

ವಿಧಾನಸಭೆಯಲ್ಲಿ ಗದ್ದಲ ಉಂಟು ಮಾಡಿದ್ದಕ್ಕೆ ಮಾಜಿ ಸಿಎಂ ವಿಪಕ್ಷ ನಾಯಕ ಜೈರಾಮ್ ಠಾಕೂರ್‌ ಸೇರಿದಂತೆ 15 ಶಾಸಕರನ್ನು ಅಮಾನತುಗೊಳಿಸಲಾಗಿದೆ. ವಿಧಾನಸಭೆಯ ಸ್ಪೀಕರ್ ಕುಲ್‌ದೀಪ್‌ ಸಿಂಗ್‌ ಪಟಾನಿಯಾ ಅವರು ಅಮಾನತುಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜ್ಯಸಭಾ ಚುನಾವಣೆ | ಹಿಮಾಚಲದಲ್ಲಿ ಬಿಜೆಪಿ ಗೆಲುವು; ‘ಕಾಂಗ್ರೆಸ್‌ ಸರ್ಕಾರಕ್ಕೆ ಜನಾದೇಶವಿಲ್ಲ’; ರಾಜ್ಯಪಾಲರನ್ನು ಭೇಟಿ ಮಾಡಿದ ಬಿಜೆಪಿ

ನಿನ್ನೆ(ಫೆ.27) ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಅಭಿಷೇಕ್ ಮನು ಸಿಂಘ್ವಿ ಅವರನ್ನು ಬಿಜೆಪಿ ಅಭ್ಯರ್ಥಿ ಸೋಲಿಸಿದ್ದರು. ಬಿಜೆಪಿ ಅಭ್ಯರ್ಥಿ ಹರ್ಷ್‌ ಮಹಾಜನ್‌ ಗೆಲುವಿನಲ್ಲಿ ಕಾಂಗ್ರೆಸ್‌ನ 6 ಶಾಸಕರ ಅಡ್ಡ ಮತದಾನ ಪ್ರಮುಖ ಕಾರಣವಾಗಿತ್ತು. ಉಭಯ ಪಕ್ಷಗಳ ಅಭ್ಯರ್ಥಿಗಳು ತಲಾ 34 ಮತಗಳನ್ನು ಪಡೆದಾಗ ಚುನಾವಣಾ ಅಧಿಕಾರಿ ಚೀಟಿ ಎತ್ತುವುದರ ಮೂಲಕ ವಿಜೇತ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಿದರು.

ಅಪೃಪ್ತ 6 ಶಾಸಕರನ್ನು ಸಮಾಧಾನ ಪಡಿಸಿ ಭಿನ್ನಮತವನ್ನು ಸರಿಪಡಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ನ ಹಿರಿಯ ನಾಯಕರಾದ ಭೂಪೇಂದರ್‌ ಸಿಂಗ್‌ ಹೂಡ ಹಾಗೂ ಡಿ ಕೆ ಶಿವಕುಮಾರ್‌ ಅವರನ್ನು ನೇಮಿಸಿದ್ದಾರೆ.

ಸಚಿವ ಸ್ತಾನಕ್ಕೆ ರಾಜೀನಾಮೆ ನೀಡಿದ ನಂತರ ಮಾತನಾಡಿದ ವಿಕ್ರಮಾದಿತ್ಯ ಸಿಂಗ್, “ಪ್ರಸ್ತುತ ವಿದ್ಯಮಾನಗಳ ಬಗ್ಗೆ ನಾನು ಮಾತನಾಡಲು ಬಯಸುತ್ತೇನೆ.ಸರ್ಕಾರದ ಭಾಗವಾಗಿ ಮುಂದುವರಿಯಲು ನನಗೆ ಸರಿಯನಿಸುತ್ತಿಲ್ಲ. ಹಾಗಾಗಿ ನಾನು ನನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ.ನಾನು ನನ್ನ ಜನರೊಂದಿಗೆ ಸಮಾಲೋಚನೆ ನಡೆಸಿದ ನಂತರ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇನೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...