ಕುನಾಲ್ ಕಾಮ್ರಾ ವಿಡಿಯೋ ಹಂಚಿಕೊಂಡವರ ವಿರುದ್ಧ ಪ್ರತೀಕಾರದ ಕ್ರಮ ಕೈಗೊಂಡಿಲ್ಲ: ಬಾಂಬೆ ಹೈಕೋರ್ಟ್‌

Date:

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರನ್ನು ಟೀಕಿಸಿದ ಸ್ಟಾಂಡ್‌ಅಪ್ ಕಾಮೆಡಿಯನ್ ಕುನಾಲ್ ಕಾಮ್ರಾ ಅವರ ವಿಡಿಯೋವನ್ನು ಮರು ಹಂಚಿದ, ಅಪ್‌ಲೋಡ್ ಮಾಡಿದ ಕಾರಣಕ್ಕೆ ಯಾವುದೇ ವ್ಯಕ್ತಿಯ ವಿರುದ್ಧ ಪ್ರತೀಕಾರದ ಕ್ರಮ ಕೈಗೊಂಡಿಲ್ಲ ಎಂದು ಬಾಂಬೆ ಹೈಕೋರ್ಟ್ ಬುಧವಾರ ಹೇಳಿದೆ.

ಇತ್ತೀಚೆಗೆ ಕುನಾಲ್ ಕಾಮ್ರಾ ಕಾರ್ಯಕ್ರಮವೊಂದರಲ್ಲಿ ಏಕನಾಥ್ ಶಿಂದೆ ಅವರನ್ನು ತನ್ನ ಪಕ್ಷವನ್ನೇ ಇಬ್ಭಾಗ ಮಾಡಿದ ದ್ರೋಹಿ ಎಂದು ಹೇಳಿದ್ದರು. ಹಾಸ್ಯ ಕಾರ್ಯಕ್ರಮದಲ್ಲಿ ಎಲ್ಲಿಯೂ ಶಿಂದೆ ಹೆಸರನ್ನು ಉಲ್ಲೇಖಿಸದ ಕಾಮ್ರಾ ‘ಥಾಣೆಯ ನಾಯಕ’ ಎಂದಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಶಿವಸೇನೆ ಕಾರ್ಯಕರ್ತರು ಕಾರ್ಯಕ್ರಮ ನಡೆದ ಹೋಟೆಲ್‌ನ ಮೇಲೆ ದಾಳಿ ನಡೆಸಿದ್ದರು.

ಇದನ್ನು ಓದಿದ್ದೀರಾ? ಶಿಂದೆ ಟೀಕೆ ಪ್ರಕರಣ | ಎಫ್‌ಐಆರ್ ರದ್ದು ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವಸೇನೆ ನಾಯಕರುಗಳು ಕಾಮ್ರಾಗೆ ಜೀವ ಬೆದರಿಕೆ ಹಾಕಿದ್ದರು. ಇವೆಲ್ಲವುದರ ನಡುವೆ ಕಾಮ್ರಾ ವಿರುದ್ಧ ಹಲವು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಸದ್ಯ ತನ್ನ ವಿರುದ್ಧ ದಾಖಲಾದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ, ಇದು ವಾಕ್‌ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಆರೋಪಿಸಿ ಕುನಾಲ್ ಕಾಮ್ರಾ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ನಡುವೆ ಹೋಟೆಲ್‌ ಅಕ್ರಮವಾಗಿದೆ ಎಂದು ಆರೋಪಿಸಿ ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಕೂಡ ಹ್ಯಾಬಿಟ್ಯಾಟ್‌ ಸ್ಟುಡಿಯೋ ಕಟ್ಟಡವನ್ನು ನೆಲಸಮ ಮಾಡಿದೆ.

ಕಾಮ್ರಾ ಮತ್ತು ಹಾಸ್ಯ ಕಾರ್ಯಕ್ರಮ ಚಿತ್ರೀಕರಿಸಿದ ಮುಂಬೈ ಹೋಟೆಲ್ ವಿರುದ್ಧ ಸರ್ಕಾರ ಕೈಗೊಂಡಿರುವ ಕ್ರಮವನ್ನು ಪ್ರಶ್ನಿಸಿ 25 ವರ್ಷದ ಕಾನೂನು ವಿದ್ಯಾರ್ಥಿಯೊಬ್ಬರು ಪಿಐಎಲ್‌ ಸಲ್ಲಿಸಿದ್ದು, ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಎಂ.ಎಸ್ ಕಾರ್ಣಿಕ್ ಅವರ ಪೀಠವು ನಿರಾಕರಿಸಿದೆ.

“ತೊಂದರೆಗೆ ಒಳಗಾದ ವ್ಯಕ್ತಿ (ಕುನಾಲ್ ಕಾಮ್ರಾ) ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಿದ್ದಾರೆ. ಅವರು ಬಡವರಲ್ಲ ಅಥವಾ ಅನಕ್ಷರಸ್ಥರಲ್ಲ. ನೀವು (ಪ್ರಸ್ತುತ ಪಿಐಎಲ್ ಅರ್ಜಿದಾರರು) ಅವರ ಪರವಾಗಿ ಏಕೆ ಹೋರಾಡುತ್ತಿದ್ದೀರಿ? ಅವರು ಪರಿಹಾರಕ್ಕಾಗಿ ಕ್ರಮ ಕೈಗೊಂಡಿದ್ದಾರೆ” ಎಂದು ಹೈಕೋರ್ಟ್ ಹೇಳಿದೆ.

ಕಾನೂನು ವಿದ್ಯಾರ್ಥಿ ಹರ್ಷವರ್ಧನ್ ಖಾಂಡೇಕರ್ ಸಲ್ಲಿಸಿದ ಪಿಐಎಲ್ ಅನ್ನು ವಿಚಾರಣೆ ನಡೆಸಲು ನಿರಾಕರಿಸಿದ ಹೈಕೋರ್ಟ್, ‘ಪ್ರತೀಕಾರಾತ್ಮಕ’ ಕ್ರಮ ಕೈಗೊಂಡಿರುವ ಯಾವುದೇ ನಿದರ್ಶನಗಳಿಲ್ಲ ಎಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...