ನವರಾತ್ರಿ | ಮಧ್ಯಪ್ರದೇಶದ ಪಟ್ಟಣದಲ್ಲಿ ಮಾಂಸಾಹಾರ ನಿಷೇಧ; ಆದೇಶ ಉಲ್ಲಂಘಿಸಿದರೆ ಪರವಾನಗಿ ರದ್ದು

Date:

ಭಾನುವಾರದಿಂದ ಪ್ರಾರಂಭವಾಗುವ ಒಂಬತ್ತು ದಿನಗಳ ನವರಾತ್ರಿ ಉತ್ಸವದ ಸಂದರ್ಭದಲ್ಲಿ ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದ ಮೈಹಾರ್ ಪಟ್ಟಣದಲ್ಲಿ ಎಲ್ಲಾ ಮಾಂಸಾಹಾರಿ ಆಹಾರಗಳನ್ನು ಅಧಿಕಾರಿಗಳು ನಿಷೇಧಿಸಿದ್ದಾರೆ.

ಮೈಹಾರ್‌ನಲ್ಲಿ ಶಾರದಾ ಮಂದಿರವಿದ್ದು ವಾರ್ಷಿಕ ಒಂಬತ್ತು ದಿನಗಳ ‘ಮಾತೆ ಶಾರದಾ ಚೈತ್ರ ನವರಾತ್ರಿ ಜಾತ್ರೆ’ ನಡೆಯಲಿದೆ. ಸಾವಿರಾರು ಭಕ್ತರು ಪಟ್ಟಣಕ್ಕೆ ಭೇಟಿ ನೀಡುತ್ತಾರೆ. ಈ ಒಂಬತ್ತು ದಿನವೂ ಮಾಂಸಾಹಾರ ನಿಷೇಧಿಸಲಾಗಿದೆ.

ಇದನ್ನು ಓದಿದ್ದೀರಾ? ಮಾಂಸಾಹಾರ ಸೇವಿಸಿದ್ದ ವಿಪಕ್ಷ ನಾಯಕರನ್ನು ಮೊಘಲರಿಗೆ ಹೋಲಿಸಿದ ಪ್ರಧಾನಿ; ಕಾಂಗ್ರೆಸ್, ಆರ್‌ಜೆಡಿ ತಿರುಗೇಟು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಲ್ಲದೆ, ಚೈತಿ ಚಂದ್ (ಮಾರ್ಚ್ 30), ರಾಮ ನವಮಿ (ಏಪ್ರಿಲ್ 6), ಮಹಾವೀರ ಜಯಂತಿ (ಏಪ್ರಿಲ್ 10) ಮತ್ತು ಬುದ್ಧ ಪೂರ್ಣಿಮಾ (ಮೇ 12) ಹಬ್ಬಗಳಂದು ಭೋಪಾಲ್ ಮತ್ತು ಇಂದೋರ್‌ನಲ್ಲಿ ಮಾಂಸದ ಅಂಗಡಿಗಳನ್ನು ಮುಚ್ಚಲಾಗುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡು ನಗರಗಳಲ್ಲಿ ಮಾಂಸಾಹಾರ ನಿಷೇಧ ಜಾರಿಗೊಳಿಸಲಾಗಿದ್ದು, ಆದೇಶ ಉಲ್ಲಂಘಿಸಿದರೆ ಅಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಪುರಸಭೆ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಈ ಹಿಂದೆ ಲೋಕೋಪಯೋಗಿ ಇಲಾಖೆ ಸಚಿವ ರಾಕೇಶ್ ಸಿಂಗ್ ಸೇರಿದಂತೆ ಹಲವು ಬಿಜೆಪಿ ಶಾಸಕರು ನವರಾತ್ರಿಯ ಸಮಯದಲ್ಲಿ ರಾಜ್ಯದಲ್ಲಿ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಬೇಕೆಂದು ಒತ್ತಾಯಿಸಿದ್ದರು.

ಇದನ್ನು ಓದಿದ್ದೀರಾ? ರಾಯಚೂರು | ಬಾಡೂಟ ಸೇವಿಸಿ 20 ಮಂದಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಈ ನಡುವೆ ಏಪ್ರಿಲ್ 1ರಿಂದ ರಾಜ್ಯಾದ್ಯಂತ ಮೈಹಾರ್ ಸೇರಿದಂತೆ 17 ಪಟ್ಟಣಗಳಲ್ಲಿ ಮದ್ಯದ ಅಂಗಡಿಗಳನ್ನು ಶಾಶ್ವತವಾಗಿ ಮುಚ್ಚಲಾಗುವುದು ಎಂದು ಸರ್ಕಾರ ಈಗಾಗಲೇ ಘೋಷಿಸಿದೆ.

ಕೆಲವು ಹಬ್ಬಗಳ ಸಂದರ್ಭದಲ್ಲಿ ಬಹುತೇಕ ಜನರು ಮಾಂಸಾಹಾರ ಸೇವಿಸಿದ ಕಾರಣ ಹೆಚ್ಚು ವ್ಯಾಪಾರ ನಡೆಯದೆಂದು ಮಾಂಸದಂಗಡಿಗಳನ್ನು ಮುಚ್ಚುವುದು ರೂಢಿಯಾಗಿತ್ತು. ಆದರೆ ಇತ್ತೀಚೆಗೆ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಧಾರ್ಮಿಕ ನಂಬಿಕೆ ಹೆಸರಲ್ಲಿ ಹೇರಿಕೆಯಾಗಿ ಮಾಡಲಾಗುತ್ತಿದೆ. ಪರವಾನಗಿ ರದ್ದು ಪಡಿಸುವಂತಹ ಕ್ರಮವನ್ನು ಕೈಗೊಳ್ಳಲಾಗುತ್ತಿದೆ. ಈ ವಿಚಾರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಧಾರ್ಮಿಕ ನಂಬಿಕೆಗೆ ಗೌರವ ನೀಡಬೇಕು ಎನ್ನುವವರು ಕೆಲವರಿದ್ದರೆ, ಇನ್ನೂ ಕೆಲವರು ತಮ್ಮ ನಂಬಿಕೆಯನ್ನು ಎಲ್ಲರ ಮೇಲೆ ಹೇರುವುದು ಸರಿಯಲ್ಲ ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...