ಆಸ್ಪತ್ರೆಯಿಂದ ಮನೆಗೆ ತೆರಳುತ್ತಿದ್ದ ನರ್ಸ್‌ ಮೇಲೆ ಅತ್ಯಾಚಾರ – ಕೊಲೆ; ಆರೋಪಿ ಬಂಧನ

Date:

ಕೋಲ್ಕತ್ತಾದಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ಕ್ರೂರ ಘಟನೆಯು ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕೃತ್ಯದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಇದೇ ಹೊತ್ತಿನಲ್ಲಿ ಮತ್ತೊಂದು ಅತ್ಯಾಚಾರ ಮತ್ತು ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಉತ್ತರಾಖಂಡದಲ್ಲಿ ನಾಪತ್ತೆಯಾಗಿದ್ದ 33 ವರ್ಷದ ನರ್ಸ್‌ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ಆರೋಪದ ಮೇಲೆ ಆರೋಪಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಉತ್ತರಾಖಂಡದ ಉಧಮ್ ಸಿಂಗ್ ನಗರ ಜಿಲ್ಲೆಯ ರುದ್ರಪುರದಲ್ಲಿ ಜುಲೈ 30ರಂದು ನರ್ಸ್‌ ನಾಪತ್ತೆಯಾಗಿದ್ದರು. ಅವರು ಗದರ್‌ಪುರದ ಇಸ್ಲಾಂನಗರದಲ್ಲಿ ವಾಸಿಸುತ್ತಿದ್ದರು. ನೈನಿತಾಲ್‌ನ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ ಆಗಿ ಕೆಲಸ ಮಾಡುತ್ತಿದ್ದರು. ಅವರು ನಾಪತ್ತೆಯಾಗಿದ್ದರೆಂದು ಜುಲೈ 31ರಂದು ಆಕೆಯ ಸಹೋದರಿ ರುದ್ರುಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದ ಪೊಲೀಸರು ಆಕೆಗಾಗಿ ಹುಡುಕಾಟ ನಡೆಸುತ್ತಿದ್ದರು. ಉತ್ತರ ಪ್ರದೇಶದ ದಿಬ್ಬಿಬಾ ಪ್ರದೇಶದ ನಿರ್ಜನ ಪ್ರದೇಶದಲ್ಲಿ ಆಕೆಯ ಮೃತದೇಹ ಪತ್ತೆಯಾಗಿತ್ತು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿದೆ ಎಂದು ವರದಿಯಲ್ಲಿ ಕಂಡುಬಂತಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅತ್ಯಾಚಾರ-ಕೊಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ರಾಜಸ್ಥಾನದ ಜೋಧ್‌ಪುರ ಮೂಲದ ಆರೋಪಿ ಧರ್ಮೇಂದ್ರ ಎಂಬಾತನನ್ನು ಬಂಧಿಸಿದ್ದಾರೆ. ಆತ, ಉತ್ತರ ಪ್ರದೇಶದ ಬರೇಲಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ.

ಆರೋಪಿ ಧರ್ಮೇಂದ್ರ ಸಂತ್ರಸ್ತೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ, ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದು, ಚಿನ್ನಾಭರಣೆಗಳನ್ನು ದೋಚಿ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.

ಆರೋಪಿಯು ಸಂತ್ರಸ್ತೆ ಮೊಬೈಲ್‌ಅನ್ನೂ ಕದ್ದಿದ್ದು, ಮೊಬೈಲ್ ನೆಟ್‌ವರ್ಕ್‌ ಮೂಲಕ ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆರೋಪಿಯನ್ನು ಬಂಧಿಸಿ, ವಿಚಾರಣೆ ಒಳಪಡಿಸಿದ್ದು, ಆರೋಪಿಯು ದರೋಡೆ ನಡೆಸಲು ಕಾಶಿಪುರ ರಸ್ತೆಯ ಬಸುಂಧರಾ ಅಪಾರ್ಟ್‌ಮೆಂಟ್‌ನೊಳಗೆ ಹೋಗುತ್ತಿದ್ದಾಗ ನರ್ಸ್‌ ಮೇಲೆ ಹಲ್ಲೆ ನಡೆಸಿ, ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರವೆಸಗಿ, ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...