ಶಾಲೆಗೆ ‘ಮಾಂಸಾಹಾರ’ ತಂದಿದ್ದಕ್ಕೆ ನರ್ಸರಿ ವಿದ್ಯಾರ್ಥಿ ಅಮಾನತು; ಕೋಮುವಾದಿ ಪ್ರಾಂಶುಪಾಲರ ವಿರುದ್ಧ ಆಕ್ರೋಶ

Date:

ಮಧ್ಯಾಹ್ನದ ಊಟಕ್ಕಾಗಿ ಶಾಲೆಗೆ ತನ್ನ ಟಿಫಿನ್ ಬಾಕ್ಸ್‌ನಲ್ಲಿ ಮಾಂಸಾಹಾರ ತಂದಿದ್ದಕ್ಕಾಗಿ ನರ್ಸರಿ ವಿದ್ಯಾರ್ಥಿಯನ್ನು ಶಾಲೆಯ ಪ್ರಾಂಶುಪಾಲರು ಅಮಾನತು ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಅಮ್ರೋಹಾದಲ್ಲಿರುವ ಖಾಸಗಿ ನರ್ಸರಿ ಶಾಲೆಯಲ್ಲಿ ಘಟನೆ ನಡೆದಿದೆ. ಮಾಂಸಾಹಾರ ತಂದಿದ್ದಕ್ಕಾಗಿ ವಿದ್ಯಾರ್ಥಿಯನ್ನು ಪ್ರಾಂಶುಪಾಲ ನಿಂದಿಸಿ, ಅಮಾನತು ಮಾಡಿರುವ ದೃಶ್ಯವನ್ನು ವಿದ್ಯಾರ್ಥಿಯ ತಾಯಿ ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬಳಿಕ, ಘಟನೆ ಬೆಳಕಿಗೆ ಬಂದಿದೆ.

ವಿಡಿಯೋದಲ್ಲಿ ಪ್ರಾಂಶುಪಾಲರು ಮತ್ತು ವಿದ್ಯಾರ್ಥಿಯ ತಾಯಿ ನಡುವೆ ತೀವ್ರ ವಾಗ್ವಾದ ನಡೆದಿದೆ. “ನಮ್ಮ ದೇವಸ್ಥಾನಗಳಿಗೆ ಅಪಚಾರ ಮಾಡಿ, ಶಾಲೆಗೆ ಮಾಂಸಾಹಾರ ತರುವ ಇಂತಹ ಮಕ್ಕಳಿಗೆ ನೈತಿಕತೆಯನ್ನು ಕಲಿಸಲು ನಾವು ಬಯಸುವುದಿಲ್ಲ” ಎಂದು ಪ್ರಾಂಶುಪಾಲರು ತಾಯಿಗೆ ಹೇಳುವುದು ವಿಡಿಯೋದಲ್ಲಿ ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಲ್ಲರಿಗೂ ಮಾಂಸಾಹಾರ ತಿನ್ನಿಸಿ, ಅವರನ್ನು ಇಸ್ಲಾಂಗೆ ಮತಾಂತರಿಸುವ ಬಗ್ಗೆ ವಿದ್ಯಾರ್ಥಿ ಮಾತನಾಡಿದ್ದಾನೆ” ಎಂದು ಪ್ರಾಂಶುಪಾಲ ಆರೋಪಿಸಿದ್ದಾರೆ. ಅವರ ಆರೋಪವನ್ನು ವಿದ್ಯಾರ್ಥಿಯ ತಾಯಿ ನಿರಾಕರಿಸಿದ್ದಾರೆ.

“ತನ್ನ ಮಗನಿಗೆ 7 ವರ್ಷ. ಆತ ಮತಾಂತರದಂತಹ ಗಂಭೀರ ವಿಚಾರಗಳ ಬಗ್ಗೆ ಮಾತನಾಡಲು ಸಾಧ್ಯವಿಲ್ಲ” ಎಂದು ತಾಯಿ ಹೇಳಿದ್ದಾರೆ. ಅದಕ್ಕೆ, ಪ್ರಾಂಶುಪಾಲರು “ಮಗು ಮನೆಯಲ್ಲಿ ಎಲ್ಲವನ್ನೂ ಕಲಿಯುತ್ತದೆ. ಅವರ ಪೋಷಕರು ಎಲ್ಲವನ್ನೂ ಕಲಿಸುತ್ತಾರೆ” ಎಂದು ಕೋಮುದ್ವೇಷದಿಂದ ಪ್ರಚೋದನಾಕಾರಿಯಾಗಿ ಮಾತನಾಡಿದ್ದಾರೆ.

ಇತರ ವಿದ್ಯಾರ್ಥಿಗಳ ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದು, ಶಾಲೆಯ ರಿಜಿಸ್ಟರ್‌ನಿಂದ ವಿದ್ಯಾರ್ಥಿಯ ಹೆಸರನ್ನು ತೆಗೆದುಹಾಕಲಾಗಿದೆ ಎಂದು ಪ್ರಾಂಶುಪಾಲರು ಹೇಳಿದ್ದಾರೆ.

ಸುಮಾರು 7 ನಿಮಿಷಗಳ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅಮ್ರೋಹಾ ಪೊಲೀಸರು, “ಜಿಲ್ಲಾ ಶಾಲಾ ಇನ್ಸ್‌ಪೆಕ್ಟರ್ (ಡಿಐಎಸ್) ಕ್ರಮ ಕೈಗೊಳ್ಳಲಿದ್ದಾರೆ. ಈ ವಿಷಯದ ಬಗ್ಗೆ ತನಿಖೆ ನಡೆಸಿ, ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ತನಿಖೆಗಾಗಿ ಮೂರು ಸದಸ್ಯರ ವಿಚಾರಣಾ ಸಮಿತಿಯನ್ನು ರಚಿಸಲಾಗಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...