ಅಶ್ಲೀಲ ಪ್ರಶ್ನೆ: ಯೂಟ್ಯೂಬರ್ ರಣವೀರ್ ಸೇರಿ 40 ಮಂದಿ ವಿರುದ್ಧ ಎಫ್‌ಐಆರ್ ದಾಖಲು

Date:

ಮಹಾರಾಷ್ಟ್ರದಲ್ಲಿ ಯೂಟ್ಯೂಬರ್‌ಗಳು ನಡೆಸುವ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ಸ್ಪರ್ಧಿಯೊಬ್ಬರಿಗೆ ಅಶ್ಲೀಲ ಮತ್ತು ಅಸಹ್ಯಕರವಾಗಿ ಪ್ರಶ್ನೆ ಕೇಳಿದ್ದ ಯೂಟ್ಯೂಬರ್ ರಣವೀರ್ ಸೇರಿದಂತೆ 40 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರ ಸೈಬರ್ ಕ್ರೈಮ್ ಘಟಕದ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ರಣವೀರ್‌ ಅಲ್ಲಾಬಾಡಿಯಾ ಸೇರಿದಂತೆ ಹಲವರಿಗೆ ಮಹಿಳಾ ಆಯೋಗವು ಸಮನ್ಸ್‌ ಕೂಡ ಜಾರಿ ಮಾಡಿದೆ.

ಹಾಸ್ಯನಟ ಸಮಯ್ ರೈನಾ ನಡೆಸಿಕೊಡುವ ಕಾರ್ಯಕ್ರಮದಲ್ಲಿ ತೀರ್ಪುಗಾರಾಗಿದ್ದ ರಣವೀರ್ ಅಲ್ಲಾಬಾಡಿಯಾ ಸ್ಪರ್ಧಿಯೊಬ್ಬನಿಗೆ ಅಶ್ಲೀಲವಾಗಿ ಪ್ರಶ್ನೆ ಕೇಳಿದ್ದರು. “ನಿಮ್ಮ ತಂದೆ-ತಾಯಿ ಲೈಂಗಿಕ ಕ್ರಿಯೆ ನಡೆಸುವುದನ್ನು ನೋಡುವ ಮೂಲಕ ದಿನ ದೂಡುತ್ತೀರಾ? ಅಥವಾ ನೀವು ಕೂಡ ಅವರೊಂದಿಗೆ ಸೇರಿಕೊಳ್ಳಲು ಇಚ್ಛಿಸುತ್ತೀರಾ?” ಎಂದು ಹೇಳಿದ್ದರು. ಅವರ ಪ್ರಶ್ನೆಯಿಂದ ಸ್ಪರ್ಧಿ ಮುಜುಗರಕ್ಕೊಳಗಾಗಿ, ತಲೆ ತಗ್ಗಿಸಿ ನಿಂತಿದ್ದರು. ಆದಾಗ್ಯೂ, ಉಳಿದ ತೀರ್ಪುಗಾರರ ರಣವೀರ್ ಪ್ರಶ್ನೆಗೆ ಚಪ್ಪಾಳೆ ತಟ್ಟಿ, ಹಾಸ್ಯ ಮಾಡಿ ರಂಜಿಸಿದ್ದರು.

ಆ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಯೂಟ್ಯೂಬರ್ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ, ಸೈಬರ್ ಕ್ರೈಮ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಅಲ್ಲದೆ, ರಣವೀರ್ ಅಲ್ಲಾಬಾಡಿಯಾ, ಸಮಯ್ ರೈನಾ, ಅಪೂರ್ವ ಮುಖಿಜಾ, ಆಶಿಶ್ ಚಂಚಲಾನಿ, ಜಸ್ಪ್ರೀತ್ ಸಿಂಗ್ ಮತ್ತು ಕಾರ್ಯಕ್ರಮದ ನಿರ್ಮಾಪಕರಿಗೆ ಮಹಿಳಾ ಆಯೋಗವು ಸಮನ್ಸ್ ಜಾರಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂತಹ ಹೇಳಿಕೆಯು ಸಮಾನತೆ ಮತ್ತು ಪರಸ್ಪರ ಗೌರವವನ್ನು ಎತ್ತಿಹಿಡಿಯುವ ಸಮಾಜದ ಮೌಲ್ಯಗಳನ್ನು ಉಲ್ಲಂಘಿಸುತ್ತದೆ. ಆರೋಪಿಗಳು ಫೆಬ್ರವರಿ 17ರಂದು ಖುದ್ದಾಗಿ ಆಯೋಗದ ಮುಂದೆ ವಿಚಾರಣೆಗೆ ಹಾಜರಾಗಬೇಕು” ಎಂದು ಆಯೋಗ ಸೂಚಿಸಿದೆ.

ಈವರೆಗೆ ಕಾರ್ಯಕ್ರಮವು 18 ಸಂಚಿಕೆಗಳಲ್ಲಿ ಪ್ರಸಾರವಾಗಿದ್ದು, ಆ ಎಲ್ಲ ಸಂಚಿಕೆಗಳನ್ನು ಯೂಟ್ಯೂಬ್‌ನಿಂದ ತೆಗೆದುಹಾಕುವಂತೆ ಸೈಬರ್ ಕ್ರೈಮ್ ಘಟಕವು ಸೂಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...