ರೈಲು ದುರಂತ : ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಒಡಿಶಾ ಸರ್ಕಾರ

Date:

ರೈಲು ದುರಂತಕ್ಕೆ 288 ಮಂದಿ ಪ್ರಯಾಣಿಕರು ಬಲಿ

ತಲಾ 10 ಲಕ್ಷ ಪರಿಹಾರ ಘೋಷಿಸಿರುವ ರೈಲ್ವೆ ಸಚಿವಾಲಯ

ಒಡಿಶಾದ ಬಾಲಸೋರ್‌ನಲ್ಲಿ ನಡೆದ ರೈಲು ದುರಂತ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಈ ಭೀಕರ ಅಪಘಾತದಲ್ಲಿ 288 ಮಂದಿ ಪ್ರಯಾಣಿಕರು ಮೃತ ಪಟ್ಟಿದ್ದು, ಸಾವಿರಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಮೃತ ಪಟ್ಟವರ ಕುಟುಂಬಗಳಿಗೆ ಮತ್ತು ಗಾಯಗೊಂಡವರಿಗೆ ಒಡಿಶಾ ಸರ್ಕಾರ ಪರಿಹಾರ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾನುವಾರ ಭುವನೇಶ್ವರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌, ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿರುವ ಪ್ರತಿ ವ್ಯಕ್ತಿಗಳ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ಪರಿಹಾರ ಘೋಷಿಸಿದ್ದು, ತೀವ್ರವಾಗಿ ಗಾಯಗೊಂಡಿರುವವರಿಗೆ ತಲಾ ಒಂದು ಲಕ್ಷ ಪರಿಹಾರ ನೀಡುವುದಾಗಿ” ತಿಳಿಸಿದ್ದಾರೆ.

ರೈಲ್ವೆ ಸಚಿವಾಲಯ ಕೂಡ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ ಮಾಡಿದ್ದು, ತೀವ್ರವಾಗಿ ಗಾಯಗೊಂಡಿರುವ ಪ್ರತಿ ವ್ಯಕ್ತಿಗೆ 2 ಲಕ್ಷ ಮತ್ತು ಸಣ್ಣ ಪುಟ್ಟ ಗಾಯ ಆಗಿರುವವರಿಗೆ ತಲಾ 50 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿತ್ತು.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಅಪಘಾತದಲ್ಲಿ ಮೃತಪಟ್ಟ ತಮ್ಮ ರಾಜ್ಯದ ವ್ಯಕ್ತಿಗಳ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಭಾನುವಾರ ರೈಲು ಅಪಘಾತವಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಅವರು ಬಳಿಕ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದರು. ತೀವ್ರವಾಗಿ ಗಾಯಗೊಂಡವರಿಗೆ ತಲಾ 1 ಲಕ್ಷ ಮತ್ತು ಸಣ್ಣ ಪುಟ್ಟ ಗಾಯ ಆಗಿರುವವರಿಗೆ ತಲಾ 50 ಸಾವಿರ ನೀಡುವುದಾಗಿ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...