ರಾಮಾಯಣ ಪಾತ್ರದ ವೇಳೆ ವೇದಿಕೆಯಲ್ಲೇ ಜೀವಂತ ಹಂದಿಯ ಕೊಂದು ಮಾಂಸ ಸೇವಿಸಿದ ಕಲಾವಿದ

Date:

ರಾಮಾಯಣ ನಾಟಕದಲ್ಲಿ ರಾಕ್ಷಸನ ಪಾತ್ರವನ್ನು ಮಾಡಿದ ರಂಗಭೂಮಿ ಕಲಾವಿದನೊಬ್ಬ ವೇದಿಕೆಯ ಮೇಲೆ ಜೀವಂತ ಹಂದಿಯ ಹೊಟ್ಟೆಯನ್ನು ಬಗೆದು ಮಾಂಸವನ್ನು ಕಿತ್ತು ತಿಂದಿರುವ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ.

ಈ ಸಂಬಂಧ ಕಲಾವಿದನ ಪಾತ್ರ ಮಾಡಿದ್ದ 45 ವರ್ಷದ ಬಿಂಬಾಧರ ಗೌಡ ಹಾಗೂ ಆಯೋಜಕರೊಬ್ಬರನ್ನು ಬಂಧಿಸಲಾಗಿದೆ. ನವೆಂಬರ್ 24 ರಂದು ಹಿಂಜಿಲಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಲಾಬ್ ಗ್ರಾಮದಲ್ಲಿ ನಡೆದ ನಡೆದ ರಾಮಾಯಣ ನಾಟಕದಲ್ಲಿ ಈ ಘಟನೆ ನಡೆದಿದೆ.

ಕಂಜಿಯಾನಲ್ ಯಾತ್ರೆಯ ಸಂದರ್ಭದಲ್ಲಿ ಗ್ರಾಮಸ್ಥರ ಗುಂಪೊಂದು ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು.
ನಾಟಕ ನೋಡಲು ಬಂದಿದ್ದ ಪ್ರೇಕ್ಷಕರನ್ನು ರಂಜಿಸುವ ನಿಟ್ಟಿನಲ್ಲಿ ವೇದಿಕೆಯಲ್ಲಿ ಜೀವಂತ ಹಾವು ಹಾಗೂ ಹಂದಿಯನ್ನು
ಪ್ರದರ್ಶಿಸಲಾಗಿತ್ತು. ಈ ವೇಳೆ ರಾಕ್ಷಸನ ಪಾತ್ರವನ್ನು ಮಾಡುತ್ತಿದ್ದ ಕಲಾವಿದ ಜೀವಂತ ಹಂದಿಯ ಹೊಟ್ಟೆಯನ್ನು ಚಾಕುವಿನಿಂದ ಸೀಳಿ, ಹಸಿ ಮಾಂಸವನ್ನು ಪ್ರೇಕ್ಷಕರ ಮುಂದೆಯೇ ವೇದಿಕೆಯಲ್ಲಿ ಸೇವಿಸಿದ್ದಾನೆ. ಹಂದಿಯನ್ನು ಹಗ್ಗದಿಂದ ಕಟ್ಟಿ ಇಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಬ್ಬರು ಕರೆ ಕೊಡುವುದು, ಇನ್ನೊಬ್ಬರು ಗೇಲಿ ಮಾಡುವುದು, ಏನಿದು ಮಕ್ಕಳಾಟ?

ಈ ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಆಡಳಿತಾರೂಢ ಬಿಜೆಪಿ ಸದಸ್ಯರಾದ
ಬಾಬು ಸಿಂಗ್ ಮತ್ತು ಸನಾತನ ಬಿಜುಲಿ ಅವರು ವಿಧಾನಸಭೆಯಲ್ಲಿ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಇನ್ನೊಂದು ಕಡೆ ಪ್ರಾಣಿದಯಾ ಸಂಘದವರು ಕಲಾವಿದರ ಬಂಧನಕ್ಕೆ ಆಗ್ರಹಿಸಿದ್ದಾರೆ.

ಪರಿಣಾಮ ಪ್ರಾಣಿಗಳ ಮೇಲಿನ ಕ್ರೌರ್ಯ ಮತ್ತು ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಮಾಡಿದ್ದಕ್ಕಾಗಿ ಸಂಬಂಧಪಟ್ಟ ಪೊಲೀಸರು ಕಲಾವಿದನನ್ನು ಬಂಧಿಸಿದ್ದಾರೆ. ”ನಾವು ಥಿಯೇಟರ್‌ನಲ್ಲಿ ಹಾವುಗಳನ್ನು ಪ್ರದರ್ಶಿಸಿದ ವ್ಯಕ್ತಿಗಳನ್ನು ಸಹ ಹುಡುಕುತ್ತಿದ್ದೇವೆ. ಅವರನ್ನೂ ಶೀಘ್ರದಲ್ಲೇ ಬಂಧಿಸಲಾಗುವುದು” ಎಂದು ಬರ್ಹಾಂಪುರ ವಿಭಾಗೀಯ ಅರಣ್ಯ ಅಧಿಕಾರಿ ಸನ್ನಿ ಖೋಕರ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...