ಮಹಿಳೆಯ ತಲೆ ಇಲ್ಲದ ಮೃತದೇಹ ಪತ್ತೆ; ಎರಡು ಗ್ರಾಮಗಳ ನಡುವೆ ಹಿಂಸಾಚಾರ

Date:

ಮಹಿಳೆಯೊಬ್ಬರ ತಲೆ ಇಲ್ಲದ ಮೃತದೇಹ ಪತ್ತೆಯಾಗಿರುವ ಘಟನೆ‌ ಒಡಿಶಾದ ಮಲಕನಗಿರಿ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯ ಮೃತದೇಹ ಪತ್ತೆಯಾದ ಬಳಿಕ, ಜಿಲ್ಲೆಯ ಎರಡು ಗ್ರಾಮಗಳ ನಡುವೆ ಹಿಂಸಾತ್ಮಕ ಘರ್ಷಣೆ ಭುಗಿಲೆದ್ದಿದೆ. ಹಿಂಸಾಚಾರವನ್ನು ತಡೆಯಲು ಪೊಲೀಸ್ ಪಡೆಗಳನ್ನಜ ನಿಯೋಜನೆ ಮಾಡಲಾಗಿದ್ದು, ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಮೃತ ಮಹಿಳೆಯನ್ನು ಜಿಲ್ಲೆಯ ರಾಖೇಲ್‌ಗುಡ ಗ್ರಾಮದ ಬುಡಕಟ್ಟು ಸಮುದಾಯದ ಲೇಕ್ ಪಡಿಯಾಮಿ ಎಂದು ಗುರುತಿಸಲಾಗಿದೆ. ಆಕೆಯ ಸಾವಿಗೆ MV-26 ಗ್ರಾಮದವರು ಕಾರಣವೆಂದು ರಾಖೇಲ್‌ಗುಡ ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮದ ನೂರಾರು ಬುಡಕಟ್ಟು ಪುರುಷರು ಮತ್ತು ಮಹಿಳೆಯರು ಶಸ್ತ್ರಾಸ್ತ್ರಗಳನ್ನು ಹಿಡಿದು MV-26 ಗ್ರಾಮಕ್ಕೆ ನುಗ್ಗಿ, ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಗ್ರಾಮಕ್ಕೆ ವೈಜ್ಞಾನಿಕ ತಂಡ, ಸ್ನಿಫರ್-ಡಾಗ್ ಸ್ಕ್ವಾಡ್ ಹಾಗೂ ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯ ಪಡೆಗಳು ಧಾವಿಸಿದ್ದು, ನಾಪತ್ತೆಯಾಗಿರುವ ಮಹಿಳೆಯ ರುಂಡವನ್ನು ಪತ್ತೆಹಚ್ಚಲು ಶೋಧ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆಯ ಸಾವು (ಕೊಲೆ) ಎರಡು ಗ್ರಾಮಗಳ ನಡುವಿನ ಹಿಂಸಾಚಾರಕ್ಕೆ ಕಾರಣವಾಗಿದ್ದು, ನಾಲ್ಕು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಸುಮಾರು 163 ಮನೆಗಳಿಗೆ ಹಾನಿಯಾಗಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ‌ ತರಲು ಎರಡೂ ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಉಭಯ ಗ್ರಾಮಗಳ ನಡುವೆ ಅಧಿಕಾರಿಗಳು ಸಂಧಾನ ಸಭೆ ನಡೆಸಿದ್ದಾರೆ. ಮೃತ ಮಹಿಳೆಯ ಮಗನಿಗೆ 30,000 ರೂ. ಪರಿಹಾರ ನೀಡಲಾಗಿದೆ. ಮುಖ್ಯಮಂತ್ರಿ ನಿಧಿಯಿಂದ 4 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...