ಪ್ರಧಾನಿ ಹುದ್ದೆಗೆ ಸ್ಪರ್ಧಿಸಿದರೆ ಬೆಂಬಲಿಸುವ ‘ಆಫರ್’ ಬಂದಿತ್ತು, ನಿರಾಕರಿಸಿದ್ದೆ: ನಿತಿನ್ ಗಡ್ಕರಿ

Date:

“ರಾಜಕೀಯ ನಾಯಕರೊಬ್ಬರು ನನಗೆ ಪ್ರಧಾನಿ ಹುದ್ದೆಯ ಆಫರ್ ನೀಡಿದ್ದರು. ಪ್ರಧಾನಿ ಹುದ್ದೆಯ ರೇಸ್‌ಗೆ ನಾನು ಪ್ರವೇಶ ಮಾಡಿದರೆ ಬೆಂಬಲಿಸುವುದಾಗಿ ಹೇಳಿದ್ದರು. ಆದರೆ ನಾನು ಈ ಪ್ರಸ್ತಾಪವನ್ನು ನಿರಾಕರಿಸಿದೆ. ನಾನು ಪ್ರಧಾನಿಯಾಗುವಂತಹ ಬಯಕೆಯನ್ನು ಹೊಂದಿಲ್ಲ” ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ನಾಗ್ಪುರದಲ್ಲಿ ನಡೆದ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ನಿತಿನ್ ಗಡ್ಕರಿ ಅವರು, “ನನಗೆ ಒಂದು ಘಟನೆ ನೆನಪಿದೆ. ಆದರೆ ನಾನು ಯಾರ ಹೆಸರನ್ನೂ ಹೇಳುವುದಿಲ್ಲ. ಆ ವ್ಯಕ್ತಿ, ‘ನೀವು ಪ್ರಧಾನಿಯಾಗಲು ಬಯಸಿದರೆ, ನಾವು ನಿಮ್ಮನ್ನು ಬೆಂಬಲಿಸುತ್ತೇವೆ’ ಎಂದು ಹೇಳಿದರು” ಎಂದು ತಿಳಿಸಿದ್ದಾರೆ.

ಪ್ರಧಾನಿಯಾಗುವುದು ತನ್ನ ಜೀವನದ ಗುರಿಯಲ್ಲ ಎಂದು ಒತ್ತಿ ಹೇಳಿದ ಗಡ್ಕರಿ, “ನಾನು ಆ ವ್ಯಕ್ತಿಯನ್ನು ನೀವು ನನ್ನನ್ನು ಏಕೆ ಬೆಂಬಲಿಸುತ್ತೀರಿ? ನಾನು ನಿಮ್ಮ ಬೆಂಬಲ ಏಕೆ ಪಡೆಯಬೇಕು ಎಂದು ಪ್ರಶ್ನಿಸಿದೆ. ಪ್ರಧಾನಿಯಾಗುವುದು ನನ್ನ ಜೀವನದ ಗುರಿಯಲ್ಲ, ನಾನು ನನ್ನ ನಂಬಿಕೆಗಳಿಗೆ ಮತ್ತು ನನ್ನ ಸಂಘಟನೆಗೆ ನಿಷ್ಠನಾಗಿದ್ದೇನೆ. ನಾನು ಯಾವುದೇ ಹುದ್ದೆಗೆ ರಾಜಿ ಮಾಡಿಕೊಳ್ಳುವುದಿಲ್ಲ. ಏಕೆಂದರೆ ನನಗೆ ನನ್ನ ನಂಬಿಕೆಗಳು ಅತೀ ಮುಖ್ಯ ಎಂದು ತಿಳಿಸಿದೆ” ಎಂದು ಗಡ್ಕರಿ ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ನಿತಿನ್ ಗಡ್ಕರಿ ಭೇಟಿ ಮಾಡಿದ ಬೊಮ್ಮಾಯಿ; ಇಳಕಲ್-ಕಾರವಾರ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿ ಮಾಡಲು ಮನವಿ

2024 ಮತ್ತು 2019ರ ಲೋಕಸಭಾ ಚುನಾವಣೆಗಳೆರಡರಲ್ಲೂ ಸಂಭಾವ್ಯ ಪ್ರಧಾನಿ ಅಭ್ಯರ್ಥಿಯಾಗಿ ನಿತಿನ್ ಗಡ್ಕರಿ ಹೆಸರು ಕೇಳಿಬಂದಿತ್ತು. ಮಾಧ್ಯಮ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯ ಪ್ರಕಾರ ನರೇಂದ್ರ ಮೋದಿಯ ಹೊರತಾಗಿ ದೇಶದಲ್ಲಿ ಪ್ರಧಾನಿಯಾಗಲು ಸೂಕ್ತ ವ್ಯಕ್ತಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಎರಡನೇ ಸ್ಥಾನದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಮೂರನೇ ಸ್ಥಾನದಲ್ಲಿ ನಿತಿನ್ ಗಡ್ಕರಿ ಇದ್ದಾರೆ.

2019ರಲ್ಲಿ ಈ ಚರ್ಚೆಗಳು ಕಾಣಿಸಿಕೊಂಡಾಗ, ಗಡ್ಕರಿ “ಭಾರತವು ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ಕೈಯಲ್ಲಿದೆ” ಎಂದು ಹೇಳಿ ನುಣುಚಿಕೊಂಡಿದ್ದರು. “ನಾವೆಲ್ಲರೂ ಅವರ (ಪ್ರಧಾನಿ ಮೋದಿ) ಹಿಂದೆ ಇದ್ದೇವೆ. ಅವರ ದೂರದೃಷ್ಟಿಯನ್ನು ಸಾಧಿಸಲು ಕಾರ್ಯನಿರ್ವಹಿಸುವ ಕಾರ್ಯಕರ್ತರಲ್ಲಿ ನಾನೂ ಕೂಡಾ ಒಬ್ಬ. ನಾನು ಪ್ರಧಾನಿಯಾಗುವ ಪ್ರಶ್ನೆ ಎಲ್ಲಿಂದ ಬರುತ್ತದೆ? ನಾನು ಪ್ರಧಾನಿಯಾಗುವ ಸ್ಪರ್ಧೆಯಲ್ಲಿ ಇಲ್ಲ. ನಾನು ಆ ಕನಸು ಕಾಣುತ್ತಿಲ್ಲ” ಎಂದು 2019ರ ಮಾರ್ಚ್‌ನಲ್ಲಿ ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...