ಇಂಜಿನಿಯರ್ ನಿವಾಸದ ಮೇಲೆ ಅಧಿಕಾರಿಗಳ ದಾಳಿ; ಫ್ಲ್ಯಾಟ್‌ನಿಂದ 500 ರೂ. ನೋಟುಗಳ ಸುರಿಮಳೆ

Date:

ವಿಚಕ್ಷಣಾ ಇಲಾಖೆಯ ಅಧಿಕಾರಿಗಳು ದಾಳಿಗೆ ಹದರಿ ಇಂಜಿನಿಯೊಬ್ಬರು ತಾವು ವಾಸಿಸುತ್ತಿರುವ ಫ್ಲ್ಯಾಟ್‌ನಿಂದ 500 ರೂ. ನೋಟುಗಳ ಕಂತೆಗಳನ್ನು ಸುರಿದಿರುವ ಘಟನೆ ಒಡಿಶಾದಲ್ಲಿ ನಡೆದಿದೆ.

ಒಡಿಶಾದ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಇಂಜಿನಿಯರ್‌ ಬೈಕುಂಠ ನಾಥ್ ಸಾರಂಗಿ ಎಂಬವರ ಫ್ಲ್ಯಾಟ್‌ ಮೇಲೆ ಒಡಿಶಾ ವಿಚಕ್ಷಣಾ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಧಿಕಾರಿಗಳು ತಮ್ಮ ಫ್ಲ್ಯಾಟ್‌ಗೆ ಬರುತ್ತಿರುವುದನ್ನು ಕಂಡ ಇಂಜಿನಿಯರ್ ನೋಟುಗಳ ಕಂತೆಯನ್ನು ತಮ್ಮ ಫ್ಲ್ಯಾಟ್‌ನಿಂದ ಹೊರಗೆ ಸುರಿದಿದ್ದಾರೆ.

ಸಾರಂಗಿ ಅವರು ತಮ್ಮ ಆದಾಯಕ್ಕೂ ಮೀರಿದ ಸಂಪತ್ತನ್ನು ಹೊಂದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಾರಂಗಿ ಅವರಿಗೆ ಸಂಬಂಧಿಸಿದ ನಿವಾಸಿಗಳು ಮತ್ತು ಇತರ ಏಳು ಸ್ಥಳಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಸುಮಾರು 2.1 ಕೋಟಿ ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಚಕ್ಷಣಾ ಅಧಿಕಾರಿಗಳು ತನ್ನ ಫ್ಲ್ಯಾಟ್‌ಗೆ ಧಾವಿಸುತ್ತಿರುವುದನ್ನು ಗಮನಿಸಿದ ಸಾರಂಗಿ, 500 ರೂ. ಮುಖಬೆಲೆಯ ನೋಟುಗಳ ಕಂತೆಗಳನ್ನು ಕಿಟಕಿಯಿಂದ ಹೊರಹಾಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಶಕ್ಕೆ ಪಡೆದ 2.1 ಕೋಟಿ ರೂ. ಹಣದಲ್ಲಿ 1 ಕೋಟಿ ರೂ. ನಗದು ಸಾರಂಗಿ ಅವರ ಭುವನೇಶ್ವರ ಫ್ಲ್ಯಾಟ್‌ನಲ್ಲಿ ಪತ್ತೆಯಾಗಿದೆ. ಉಳಿದ 1.1 ಕೋಟಿ ರೂ. ಹಣವನ್ನು ಅಂಗುಲ್‌ನಲ್ಲಿರುವ ಸಾರಂಗಿ ಅವರ ಮತ್ತೊಂದು ನಿವಾಸದಿಂದ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...