ದನದ ಮಾಂಸ ಸಾಗಿಸುತ್ತಿದ್ದಾರೆಂದು ರೈಲಿನಲ್ಲಿ ವೃದ್ಧನ ಮೇಲೆ ಪುಂಡರಿಂದ ಹಲ್ಲೆ; ವಿಡಿಯೋ ವೈರಲ್

Date:

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಸಮುದಾಯದ ವೃದ್ಧನ ಮೇಲೆ ಪುಂಡರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್‌ ಜಿಲ್ಲೆಯಲ್ಲಿ ನಡೆದಿದೆ. ವೃದ್ಧ ತನ್ನ ಬ್ಯಾಗ್‌ನಲ್ಲಿ ದನದ ಮಾಂಸ ಸಾಗಿಸುತ್ತಿದ್ದಾರೆಂದು ಆರೋಪಿಸಿ ದುಷ್ಕರ್ಮಿಗಳು ವೃದ್ಧನ ಮೇಲೆ ಹಲ್ಲೆ ಮಾಡಿದ್ದಾರೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ದುಷ್ಕರ್ಮಿ ಪುಂಡ ಯುವಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ. ವಿಡಿಯೋದಲ್ಲಿ, ವೃದ್ಧನನ್ನು 12 ಮಂದಿ ದುಷ್ಕರ್ಮಿಗಳು ಸುತ್ತುವರೆದು ಹಲ್ಲೆ ನಡೆಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಘಟನೆ ಸಂಬಂಧ ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

“ನಾವು ವೀಡಿಯೊದಲ್ಲಿರುವ ಆರೋಪಿಗಳನ್ನು ಗುರುತಿಸಿದ್ದೇವೆ. ಆರೋಪಿಗಳ ಬಂಧನಕ್ಕೆ ಶೋಧ ನಡೆಯುತ್ತಿದೆ” ಎಂದು ಪೊಲೀಸರು ಹೇಳಿದ್ದಾರೆ. ಆದರೆ, ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈಲ್ವೇ ಪೊಲೀಸರ ಪ್ರಕಾರ, ಜಲಗಾಂವ್ ಜಿಲ್ಲೆಯ ನಿವಾಸಿ, ಸಂತ್ರಸ್ತ ವೃದ್ಧ ಹಾಜಿ ಅಶ್ರಫ್ ಮುನ್ಯಾರ್ ಅವರು ತನ್ನ ಮಗಳ ಮನೆಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಅವರು ತಮ್ಮ ಬ್ಯಾಗ್‌ನಲ್ಲಿ ಮೇಕೆ ಮಾಂಸವನ್ನು ತೆಗೆದುಕೊಂಡು ಹೋಗುತ್ತಿದ್ದರು. ಆದರೆ, ಅವರು ಮುಸ್ಲಿಂ ಸಮುದಾಯಕ್ಕೆ ಸೇರಿದವರಾದ್ದರಿಂದ ಅವರು ದನದ ಮಾಂಸ ಸಾಗಿಸುತ್ತಿದ್ದಾರೆ ಎಂದು ಭಾವಿಸಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಸಂತ್ರಸ್ತ ವೃದ್ಧ, ‘ಇದು ಮೇಕೆ ಮಾಂಸವೇ ಹೊರತು ದನದ ಮಾಂಸವಲ್ಲ’ ಎಂದು ಹೇಳಿದರೂ, ದಾಳಿಕೋರರ ಗುಂಪು ವೃದ್ಧನ ಮಾತನ್ನು ಕೇಳದೆ ಹಲ್ಲೆ ನಡೆಸಿದೆ.

ಇಂತಹ ಕೃತ್ಯಗಳ ವಿರುದ್ಧಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಮಹಾರಾಷ್ಟ್ರ ಸರ್ಕಾರವನ್ನು ಕಾಂಗ್ರೆಸ್ ಸಂಸದ ಇಮ್ರಾನ್ ಪ್ರತಾಪಘರ್ಹಿ ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...