ರೈತರ ಪ್ರತಿಭಟನೆಗೆ ಒಲಿಂಪಿಕ್ ಕುಸ್ತಿಪಟು ವಿನೇಶ್ ಫೋಗಟ್ ಬೆಂಬಲ

Date:

ಹರಿಯಾಣದಲ್ಲಿ ಮುಂದಿನ ತಿಂಗಳು (ಅಕ್ಟೋಬರ್) ವಿಧಾನಸಭಾ ಚುನಾವಣೆ ನಡೆಯಲಿದೆ. ಕಳೆದ 200 ದಿನಗಳಿಂದ ರೈತರು ಎಂಎಸ್‌ಪಿ ಜಾರಿಗಾಗಿ ಒತ್ತಾಯಿಸಿ ಪಂಚಾಜ್ ಮತ್ತು ಹರಿಯಾಣ ನಡುವಿನ ಶಂಭು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾನಿರತ ರೈತರನ್ನು ಒಲಿಂಪಿಕ್ ಕುಸ್ತಿಪಟು ವಿನೇಶ್ ಫೋಗಟ್ ಭೇಟಿ ಮಾಡಿದ್ದಾರೆ. ರೈತ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. “ನಿಮ್ಮ ಮಗಳು, ನಿಮ್ಮೊಂದಿಗಿದ್ದೇನೆ” ಎಂದು ಹೇಳಿದ್ದಾರೆ.

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ)ಯನ್ನು ಜಾರಿಗೊಳಿಸಬೇಕು. ಎಂಎಸ್‌ಪಿಗೆ ಕಾನೂನು ಖಾತರಿ ನೀಡಬೇಕು. ಈ ಹಿಂದೆ ನಡೆದ ರೈತ ಹೋರಾಟದ ಸಮಯದಲ್ಲಿ ಕೇಂದ್ರ ಸರ್ಕಾರವು ರೈತರಿಗೆ ನೀಡಿದ್ದ ಎಲ್ಲ ಭರವಸೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ರೈತರು ‘ದೆಹಲಿ ಚಲೋ’ ಆಂದೋಲನ ನಡೆಸುತ್ತಿದ್ದಾರೆ. ಕಳೆದ 7 ತಿಂಗಳ ಹಿಂದೆ ದೆಹಲಿಗೆ ಹೊರಟಿದ್ದ ರೈತರನ್ನು ಹರಿಯಾಣ ಪೊಲೀಸರು ಶಂಭು ಗಡಿಯಲ್ಲಿ ತಡೆದಿದ್ದು, ಅಂದಿನಿಂದಲೇ ರೈತರು ಅಲ್ಲಿಯೇ ಪ್ರತಿಭಟನೆ ನಡೆಸುತತಿದ್ದಾರೆ. ರೈತ ಹೋರಾಟವನ್ನು 50 ಕೆಜಿ ವಿಭಾಗದಲ್ಲಿ 100 ಗ್ರಾಂ ಅಧಿಕ ತೂಕದ ಕಾರಣಕ್ಕಾಗಿ ಪ್ಯಾರಿಸ್ ಒಲಿಂಪಿಕ್ಸ್ ಫೈನಲ್‌ನಿಂದ ಅನರ್ಹಗೊಂಡ ಫೋಗಟ್ ಅಭಿನಂದಿಸಿದ್ದಾರೆ.

“ರೈತರ ಬೇಡಿಕೆಗಳು ನ್ಯಾಯಸಮ್ಮತವಾಗಿವೆ. ನಾನು ನಿಮ್ಮ ಮಗಳು. ನಿಮ್ಮೊಂದಿಗಿದ್ದೇನೆ. ರೈತರ ಸಮಸ್ಯೆಗಳು ಬಗೆಹರಿಯದೆ ಉಳಿದಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೀವೆಲ್ಲರೂ (ರೈತರು) ಇಷ್ಟು ದಿನ ಪ್ರತಿಭಟನೆ ನಡೆಸುತ್ತಿರುವುದನ್ನು ನೋಡಲು ನೋವಾಗುತ್ತದೆ. ಕೆಲವೊಮ್ಮೆ ನಾವು ನಿಮಗಾಗಿ ಏನನ್ನೂ ಮಾಡಲು ಸಾಧ್ಯವಾಗದೆ ಅಸಹಾಯಕರಾಗಿದ್ದೇವೆ. ನಾವು ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸುತ್ತೇವೆ. ಆದರೆ ನಮ್ಮ ಸ್ವಂತ ಕುಟುಂಬಕ್ಕಾಗಿ ಏನನ್ನೂ ಮಾಡಲು ಸಾಧ್ಯವಾಗುತ್ತಿಲ್ಲ. ರೈತರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಬೇಕು” ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...