ಎರಡನೇ ಬಾರಿಗೆ ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

Date:

ಬಿಜೆಪಿ ಸಂಸದ ಓಂ ಬಿರ್ಲಾ ಲೋಕಸಭೆ ಸ್ಪೀಕರ್ ಆಗಿ ಮರು ಆಯ್ಕೆಯಾಗಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಸುಮಾರಿಗೆ ಧ್ವನಿ ಮತದ ಮೂಲಕ ಚುನಾವಣೆ ನಡೆಸಲಾಗಿದ್ದು ಹೆಚ್ಚಿನ ಮತ ಪಡೆದ ಓಂ ಬಿರ್ಲಾ ಅವರು ಲೋಕಸಭೆ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.

ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ವಿಪಕ್ಷಗಳ ಇಂಡಿಯಾ ಒಕ್ಕೂಟದ ನಡುವೆ ಸ್ಪೀಕರ್ ಸ್ಥಾನದ ಬಗ್ಗೆ ಒಮ್ಮತಕ್ಕೆ ಬರಲು ಸಾಧ್ಯವಾಗದ ಕಾರಣ ಇಂಡಿಯಾ ಒಕ್ಕೂಟವು ತನ್ನ ಅಭ್ಯರ್ಥಿಯನ್ನು ಸ್ಪೀಕರ್ ಚುನಾವಣೆಗೆ ಇಳಿಸಿತ್ತು. ಕಾಂಗ್ರೆಸ್ ಹಿರಿಯ ನಾಯಕ ಕೆ ಸುರೇಶ್ ಚುನಾವಣೆಗೆ ಸ್ಪರ್ಧಿಸಿದ್ದರು.

ಇದನ್ನು ಓದಿದ್ದೀರಾ?  ಓಂ ಬಿರ್ಲಾ vs ಕೆ ಸುರೇಶ್: ಇಂದು ಲೋಕಸಭೆ ಸ್ಪೀಕರ್ ಚುನಾವಣೆ, ಗೆಲ್ಲಲು ಎಷ್ಟು ಮತ ಅಗತ್ಯ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಪಕ್ಷಗಳಿಗೆ ಉಪಸಭಾಪತಿ ಸ್ಥಾನ ನೀಡಲು ಸರ್ಕಾರ ಒಪ್ಪದ ಕಾರಣ ಮಾತುಕತೆ ಮುರಿದು ಬಿದ್ದು 48 ವರ್ಷಗಳ ನಂತರ ಲೋಕ ಸಭಾಧ್ಯಕ್ಷ ಸ್ಥಾನಕ್ಕೆ ಇಂದು ಸ್ಪರ್ಧೆ ನಡೆದಿದೆ. ಇನ್ನು ಬಿಜೆಪಿ ಮತ್ತು ಕಾಂಗ್ರೆಸ್‌ ಎಲ್ಲ ಸದಸ್ಯರಿಗೆ ಹಾಜರಾಗುವಂತೆ ಮಂಗಳವಾರ ವಿಪ್‌ ಜಾರಿ ಮಾಡಿದ್ದವು.

61 ವರ್ಷದ ಓಂ ಬಿರ್ಲಾ ಅವರು ರಾಜಸ್ಥಾನದ ಕೋಟಾ ಕ್ಷೇತ್ರದಿಂದ ಸಂಸದರಾಗಿದ್ದು, ಆರ್‌ಎಸ್‌ಎಸ್‌ಗೆ ಸೇರಿದವರಾಗಿದ್ದಾರೆ. ಇದಕ್ಕೂ ಮುನ್ನ ಅವರು ರಾಜಸ್ಥಾನ ವಿಧಾನಸಭೆಯಲ್ಲಿ ಶಾಸಕರಾಗಿದ್ದರು.

ಇಂಡಿಯಾ ಮೈತ್ರಿಕೂಟದ 5 ಮಂದಿ ಸೇರಿದಂತೆ ಇನ್ನೂ 7 ಸಂಸದರು ಪ್ರಮಾಣ ವಚನ ಸ್ವೀಕರಿಸಬೇಕಿದೆ. ಸ್ಪೀಕರ್ ಆಯ್ಕೆಯಾದ ನಂತರ ಈ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...