ಓಂ ಬಿರ್ಲಾ vs ಕೆ ಸುರೇಶ್: ಇಂದು ಲೋಕಸಭೆ ಸ್ಪೀಕರ್ ಚುನಾವಣೆ, ಗೆಲ್ಲಲು ಎಷ್ಟು ಮತ ಅಗತ್ಯ?

Date:

ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ಇಂದು ಬಿಜೆಪಿ ಸಂಸದ ಓಂ ಬಿರ್ಲಾ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಕೆ ಸುರೇಶ್ ನಡುವೆ ತೀವ್ರ ಪೈಪೋಟಿ ನಡೆಯಲಿದೆ.

ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ವಿಪಕ್ಷಗಳ ಇಂಡಿಯಾ ಒಕ್ಕೂಟದ ನಡುವೆ ಸ್ಪೀಕರ್ ಸ್ಥಾನದ ಬಗ್ಗೆ ಒಮ್ಮತಕ್ಕೆ ಬರಲು ಸಾಧ್ಯವಾಗದ ಕಾರಣ ಇಂಡಿಯಾ ಒಕ್ಕೂಟವು ತನ್ನ ಅಭ್ಯರ್ಥಿಯನ್ನು ಸ್ಪೀಕರ್ ಚುನಾವಣೆಗೆ ನಿಲ್ಲಿಸಲು ನಿರ್ಧರಿಸಿದೆ.

ಪ್ರತಿಪಕ್ಷಗಳಿಗೆ ಉಪಸಭಾಪತಿ ಸ್ಥಾನ ನೀಡಲು ಸರ್ಕಾರ ಒಪ್ಪದ ಕಾರಣ ಮಾತುಕತೆ ಮುರಿದು ಬಿದ್ದಿದೆ. ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ಇಂದು (ಬುಧವಾರ) ಬೆಳಗ್ಗೆ 11 ಗಂಟೆಗೆ ಚುನಾವಣೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಲೋಕಸಭೆ ಸ್ಪೀಕರ್ ಸ್ಥಾನ : ವಿಪಕ್ಷದಿಂದ ಕಾಂಗ್ರೆಸ್‌ನ ಕೆ ಸುರೇಶ್, ಎನ್‌ಡಿಎನಿಂದ ಓಂ ಬಿರ್ಲಾ ಪುನಃ ಕಣಕ್ಕೆ

ಗೆಲ್ಲಲು ಎಷ್ಟು ಮತ ಅಗತ್ಯ?

ಎನ್‌ಡಿಎ ಲೋಕಸಭೆಯಲ್ಲಿ ಬಹುಮತವನ್ನು ಹೊಂದಿದೆ. ಹೀಗಿರುವಾಗ ಓಂ ಬಿರ್ಲಾ ಅವರನ್ನು ಆಯ್ಕೆ ಮಾಡುವಲ್ಲಿ ಎನ್‌ಡಿಎ ತೊಂದರೆ ಇದ್ದಂತಿಲ್ಲ. ಆದರೆ ಇಂಡಿಯಾ ಒಕ್ಕೂಟಕ್ಕೆ ಸವಾಲಿನ ಹಾದಿಯಿದೆ. ಚುನಾವಣೆಯಲ್ಲಿ ಗೆಲ್ಲಲು 271 ಮತಗಳು ಅಗತ್ಯವಾಗಿದೆ. ಅಂದರೆ 542 ಸಂಸದರ ಅರ್ಧ ಭಾಗದಷ್ಟು ಮತಗಳು ಪಡೆಯುವುದು ಅಗತ್ಯ. ಕೆಳಮನೆಯಲ್ಲಿ ಎನ್‌ಡಿಎ 293 ಸದಸ್ಯರನ್ನು ಹೊಂದಿದ್ದರೆ, ಇಂಡಿಯಾ ಒಕ್ಕೂಟ 233 ಸದಸ್ಯರನ್ನು ಹೊಂದಿದೆ.

ಇಂಡಿಯಾ ಮೈತ್ರಿಕೂಟದ 5 ಮಂದಿ ಸೇರಿದಂತೆ ಇನ್ನೂ 7 ಸಂಸದರು ಪ್ರಮಾಣ ವಚನ ಸ್ವೀಕರಿಸಬೇಕಿದೆ. ಸ್ಪೀಕರ್ ಆಯ್ಕೆಯಾದ ನಂತರ ಈ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇದಲ್ಲದೆ ರಾಹುಲ್ ಗಾಂಧಿ ರಾಯ್‌ಬರೇಲಿ ಮತ್ತು ವಯನಾಡು ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ರಾಯ್‌ಬರೇಲಿಯಲ್ಲಿ ಸಂಸದರಾಗುವ ನಿರ್ಧಾರ ಮಾಡಿದ್ದರಿಂದ ವಯನಾಡು ಲೋಕಸಭಾ ಸ್ಥಾನವು ಈಗ ಖಾಲಿಯಾಗಿದೆ. ವಯನಾಡು ಲೋಕಸಭೆ ಕ್ಷೇತ್ರಕ್ಕೆ ಉಪಚುನಾವಣೆ ಇನ್ನಷ್ಟೇ ನಡೆಯಬೇಕಿದೆ.

ಇದನ್ನು ಓದಿದ್ದೀರಾ?  ಭರ್ತೃಹರಿ ಮಹತಾಬ್ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ: ವಿಪಕ್ಷಗಳ ವಿರೋಧ

ಆಡಳಿತಾರೂಢ ಎನ್‌ಡಿಎ ಅಥವಾ ವಿರೋಧ ಪಕ್ಷದ ಇಂಡಿಯಾ ಒಕ್ಕೂಟದ ಭಾಗವಲ್ಲದ ವೈಎಸ್‌ಆರ್‌ಸಿಪಿ ಚುನಾವಣೆಯಲ್ಲಿ ಓಂ ಬಿರ್ಲಾ ಅವರನ್ನು ಬೆಂಬಲಿಸಲು ನಿರ್ಧರಿಸಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಇದಲ್ಲದೆ ಟಿಎಂಸಿ ಜೊತೆ ಸ್ಪೀಕರ್ ಸ್ಥಾನಕ್ಕೆ ಕೆ ಸುರೇಶ್ ಅವರನ್ನು ಕಣಕ್ಕಿಳಿಸುವ ಮೊದಲು ಸಮಾಲೋಚನೆ ನಡೆಸದಿರುವ ಬಗ್ಗೆ ಅಸಮಾಧಾನವಿದೆ.

ಇದು ಕಾಂಗ್ರೆಸ್ ಪಕ್ಷದ ಏಕಪಕ್ಷೀಯ ನಿರ್ಧಾರ ಎಂದು ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ. “ಈ ಬಗ್ಗೆ ನಮ್ಮನ್ನು ಸಂಪರ್ಕಿಸಿಲ್ಲ, ಯಾವುದೇ ಚರ್ಚೆ ನಡೆದಿಲ್ಲ. ದುರದೃಷ್ಟವಶಾತ್ ಇದು ಏಕಪಕ್ಷೀಯ ನಿರ್ಧಾರ” ಎಂದು ಬ್ಯಾನರ್ಜಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...