ಜಮ್ಮು ಕಾಶ್ಮೀರ ಮುಖ್ಯಮಂತ್ರಿಯಾಗಿ ಒಮರ್‌ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ

Date:

ಜಮ್ಮು ಮತ್ತು ಕಾಶ್ಮೀರದ ನೂತನ ಸಿಎಂ ಆಗಿ ಒಮರ್ ಅಬ್ದುಲ್ಲಾ ಇಂದು ಪ್ರಮಾಣವಚನ ಸ್ವೀಕರಿಸಿದರು. ಶೇರ್ ಇ ಕಾಶ್ಮೀರ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ 11:30ಕ್ಕೆ ನಡೆದ ಸಮಾರಂಭದಲ್ಲಿ ಒಮರ್ ಅಬ್ದುಲ್ಲಾ ಎರಡನೇ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು. ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಅವರು ಪ್ರಮಾಣ ವಚನ ಬೋಧಿಸಿದರು.

370 ವಿಧಿ ರದ್ಧತಿಯ ಬಳಿಕ ನಡೆದ ಮೊದಲ ವಿಧಾನಸಭೆಯಲ್ಲಿ ಗೆಲುವು ಸಾಧಿಸಿದ ನ್ಯಾಷನಲ್ ಕಾನ್ಫರೆನ್ಸ್‌ನ ನಾಯಕರಾದ ಒಮರ್ ಅಬ್ದುಲ್ಲಾ ಮೊದಲ ಮುಖ್ಯಮಂತ್ರಿಯಾಗಿ ಸ್ಥಾನಕ್ಕೇರಲಿದ್ದಾರೆ. ಇದಕ್ಕೂ ಮುನ್ನ 2009-2014 ರಲ್ಲಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚಿಸಲು ಉಮರ್ ಅಬ್ದುಲ್ಲಾ ಅಕ್ಟೋಬರ್ 11ರಂದು ಹಕ್ಕು ಮಂಡಿಸಿದ್ದರು. 42 ಮಂದಿ ನ್ಯಾಷನಲ್ ಕಾನ್ಫರೆನ್ಸ್ ಶಾಸಕರು, ನಾಲ್ವರು ಪಕ್ಷೇತರರು, ಕಾಂಗ್ರೆಸ್ ಪಕ್ಷದ ಆರು ಮಂದಿ ಹಾಗೂ ಸಿಪಿಐ(ಎಂ)ನ ಒಬ್ಬ ಶಾಸಕರ ಬೆಂಬಲ ತಮಗಿದೆ ಎಂದು ಅಬ್ದುಲ್ಲಾ ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಮರ್ ಅಬ್ದುಲ್ಲಾ ಅವರ ಮಂತ್ರಿಮಂಡಳಿಯು ಒಟ್ಟು 10 ಸಚಿವರನ್ನು ಹೊಂದಿರುತ್ತದೆ. ಇವರಲ್ಲಿ ಸಕೀನಾ ಇಟ್ಟು, ಸೈಫುಲ್ಲಾ ಮಿರ್, ಅಬ್ದುಲ್ ರಹೀಮ್ ರಾಥರ್, ಅಲಿ ಮೊಹಮ್ಮದ್ ಸಾಗರ್, ಸುರಿಂದರ್ ಸಿಂಗ್, ಅಜಯ್ ಸಾಧೋತ್ರಾ, ಪಿರ್ಜಾದಾ ಮೊಹಮ್ಮದ್ ಸೈಯದ್ ಮತ್ತು ಕೆಲವು ಸ್ವತಂತ್ರರು ಸೇರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಾತಿ ಗಣತಿ | ಬಿಜೆಪಿ ತನ್ನ ನಿಲುವು ಹೇಳಲಿ: ಡಿ ಕೆ ಶಿವಕುಮಾರ್‌

ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಎಸ್‌ಪಿ ನಾಯಕ ಅಖಿಲೇಶ್ ಯಾದವ್, ಆಪ್ ಮುಖಸ್ಥ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

ವಿಧಾನಸಭೆಯ ಒಟ್ಟು 90 ಸ್ಥಾನಗಳಲ್ಲಿ ಎನ್‌ಸಿ 42 ಸ್ಥಾನಗಳನ್ನು ಗೆದಿದ್ದರೆ, ಕಾಂಗ್ರೆಸ್ 6 ಸ್ಥಾನಗಳಲ್ಲಿ ವಿಜಯ ಸಾಧಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...