ಜಮ್ಮು| ಬೆಂಗಾವಲು ವಾಹನದ ಮೇಲೆ ಉಗ್ರರಿಂದ ದಾಳಿ: ಗಾಯಗೊಂಡ ಐವರಲ್ಲಿ ಓರ್ವ ಐಎಎಫ್ ಅಧಿಕಾರಿ ಹುತಾತ್ಮ

Date:

ಶನಿವಾರ ಸಂಜೆ ಜಮ್ಮುವಿನ ಪೂಂಚ್ ಜಿಲ್ಲೆಯಲ್ಲಿ ಬೆಂಗಾವಲು ವಾಹನದ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡಿದ್ದ ಐವರು ಐಎಎಫ್ ಅಧಿಕಾರಿಗಳ ಪೈಕಿ ಓರ್ವ ಐಎಎಫ್ ಅಧಿಕಾರಿ ಹುತಾತ್ಮರಾಗಿದ್ದಾರೆ.

ಐಎಎಫ್ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಎರಡು ವಾಹನಗಳು ಸಂಜೆ 6 ಗಂಟೆ ಸುಮಾರಿಗೆ ಶಾಸಿತಾರ್ ಬಳಿ ಇದ್ದಾಗ ಭಯೋತ್ಪಾದಕರು ಗುಂಡಿನ ದಾಳಿಯನ್ನು ನಡೆಸಿದ್ದರು. ಈ ಪ್ರದೇಶವು ಗಡಿ ಜಿಲ್ಲೆಯ ಸುರನ್‌ಕೋಟೆಯ ಸನೈ ಟಾಪ್ ಮತ್ತು ಮೆಂಧರ್‌ನ ಗುರ್ಸಾಯ್ ಪ್ರದೇಶದ ನಡುವೆ ಇದೆ.

ಇದನ್ನು ಓದಿದ್ದೀರಾ?  ಜಮ್ಮು | ಬೆಂಗಾವಲು ವಾಹನದ ಮೇಲೆ ಉಗ್ರರಿಂದ ದಾಳಿ: ಐವರು ಐಎಎಫ್ ಅಧಿಕಾರಿಗಳಿಗೆ ಗಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಾಯಗೊಂಡ ಸಿಬ್ಬಂದಿಯನ್ನು ಐಎಎಫ್ ಹೆಲಿಕಾಪ್ಟರ್‌ಗಳಲ್ಲಿ ಚಿಕಿತ್ಸೆಗಾಗಿ ಉಧಮ್‌ಪುರಕ್ಕೆ ಸ್ಥಳಾಂತರಿಸಲಾಗಿದ್ದು ಚಿಕಿತ್ಸೆ ವೇಳೆ ಓರ್ವ ಅಧಿಕಾರಿ ಸಾವನ್ನಪ್ಪಿದ್ದಾರೆ.

“ಭಯೋತ್ಪಾದಕರ ಗುಂಡಿನ ದಾಳಿಗೆ ಪ್ರತಿಯಾಗಿ ಏರ್ ವಾರಿಯರ್ಸ್ ಗುಂಡಿನ ದಾಳಿಯ ಮೂಲಕ ಹೋರಾಡಿದ್ದಾರೆ. ಈ ಪ್ರಕ್ರಿಯೆಯಲ್ಲಿ, ಐವರು ಐಎಎಫ್ ಸಿಬ್ಬಂದಿಗೆ ಬುಲೆಟ್ ತಗುಲಿ ಗಾಯಗಳಾಗಿದೆ. ತಕ್ಷಣವೇ ಚಿಕಿತ್ಸೆಗಾಗಿ ಹತ್ತಿರದ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಬಳಿಕ ಗಾಯಗೊಂಡ ಒರ್ವ ಏರ್ ವಾರಿಯರ್ ಸಾವನ್ನಪ್ಪಿದ್ದಾರೆ. ಸ್ಥಳೀಯ ಭದ್ರತಾ ಪಡೆಗಳಿಂದ ಹೆಚ್ಚಿನ ಕಾರ್ಯಾಚರಣೆಗಳು ನಡೆಯುತ್ತಿವೆ” ಎಂದು ಐಎಎಫ್ ಮಾಹಿತಿ ನೀಡಿದೆ.

ಇದನ್ನು ಓದಿದ್ದೀರಾ?  ಲೋಕಸಭೆ ಚುನಾವಣೆ ಗೆಲ್ಲಲು ಮತ್ತೆ’ಪುಲ್ವಾಮಾ, ಬಾಲಕೋಟ್’ ರೀತಿಯ ದಾಳಿ?

ಉಗ್ರರ ಬಗ್ಗೆ ಮಾಹಿತಿ ತಿಳಿದ ಬಳಿಕ ಕಳೆದ ಕೆಲವು ದಿನಗಳಿಂದ ಮೆಂಧರ್ ಮತ್ತು ಸುರನ್‌ಕೋಟೆ ನಡುವಿನ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮಾಡಲಾಗುತ್ತಿದೆ. ಈ ಶೋಧದ ವೇಳೆ ಬೆಂಗಾವಲು ವಾಹನದ ಮೇಲೆ ಉಗ್ರರಿಂದ ದಾಳಿ ನಡೆದಿದೆ. ಐಎಎಫ್ ಅಧಿಕಾರಿಗಳು ಕೂಡಾ ಪ್ರತಿದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಪೂಂಚ್ ಜಿಲ್ಲೆ ಅನಂತನಾಗ್-ರಾಜೌರಿ ಲೋಕಸಭಾ ಕ್ಷೇತ್ರದ ಭಾಗವಾಗಿದ್ದು, ಮೇ 25 ರಂದು ಚುನಾವಣೆ ನಡೆಯಲಿದೆ. ಕಳೆದ ಎರಡು ವಾರಗಳಲ್ಲಿ ರಾಜೌರಿ ಮತ್ತು ಪೂಂಚ್ ಜಿಲ್ಲೆಗಳಲ್ಲಿ ಇರುವ ಪಿರ್ ಪಂಜಾಲ್ ಪ್ರದೇಶದಲ್ಲಿ ಇದು ಮೂರನೇ ಉಗ್ರಗಾಮಿ ದಾಳಿಯಾಗಿದೆ.

ಇದನ್ನು ಓದಿದ್ದೀರಾ? ನಿರ್ಲಕ್ಷ್ಯವೇ ಅಥವಾ ಪಿತೂರಿಯೇ? ಪುಲ್ವಾಮಾದ ಸಂಪೂರ್ಣ ಸತ್ಯ ದೇಶ ಕೇಳುತ್ತಿದೆ…

ಇನ್ನು ಈ ಹಿಂದೆ “ಬಿಜೆಪಿ ಸರ್ಕಾರ ಈಗ ಮತ್ತೆ ನಮ್ಮ ದೇಶದ ಮೇಲೆ ಭಯೋತ್ಪಾದನಾ ದಾಳಿ ಮಾಡಿಸಿ ಅದರ ಲಾಭವನ್ನು ಚುನಾವಣೆಯಲ್ಲಿ ಪಡೆಯಲು ತಯಾರಿ ನಡೆಸುತ್ತಿದೆ. ಪುಲ್ವಾಮಾ ಮತ್ತು ಬಾಲಕೋಟ್ ರೀತಿಯಲ್ಲೇ ದಾಳಿ ಮಾಡಿಸಲು ನಡೆಯುತ್ತಿರುವ ತಯಾರಿ ಬಗ್ಗೆ ತಿಳಿದಿರುವ ವ್ಯಕ್ತಿಯೊಬ್ಬರು ತನಗೆ ಮಾಹಿತಿ ನೀಡಿದ್ದಾರೆ. ಆದರೆ ನಾನು ಆ ವ್ಯಕ್ತಿ ಹೆಸರು ಹೇಳಲಾಗುವುದಿಲ್ಲ” ಎಂದು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...