ಸಲ್ಮಾನ್ ಖಾನ್ ಮನೆಗೆ ಗುಂಡಿನ ದಾಳಿ ಪ್ರಕರಣ: ಇನ್ನೋರ್ವ ಆರೋಪಿ ಬಂಧನ

Date:

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ಮನೆಯ ಹೊರಗೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣದ ಮತ್ತೊಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ವರದಿಗಳ ಪ್ರಕಾರ, ಬಂಧಿತ ವ್ಯಕ್ತಿ ಈ ಪ್ರಕರಣದಲ್ಲಿ ಇದುವರೆಗೆ ಬಂಧಿಸಿರುವ ಇತರ ಇಬ್ಬರೊಂದಿಗೆ ಸಂಬಂಧ ಹೊಂದಿದ್ದಾರೆ.

ಆರೋಪಿಗಳು ಮುಂಗಡವಾಗಿ 1 ಲಕ್ಷ ರೂಪಾಯಿ ಪಡೆದು ಈ ದಾಳಿಯನ್ನು ನಡೆಸಿದ್ದಾರೆ. ಮಂಗಳವಾರ ಮುಂಜಾನೆ ಮುಂಬೈ ಪೊಲೀಸರು ಗುಜರಾತ್‌ನ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಹಾರ ಮೂಲದ ವಿಕ್ಕಿ ಸಾಹಬ್ ಗುಪ್ತಾ ಮತ್ತು ಸಾಗರ್ ಶ್ರೀಜೋಗೇಂದ್ರ ಪಾಲ್ ಅವರನ್ನು ಸೋಮವಾರ ಸಂಜೆ ಗುಜರಾತ್‌ನ ಭುಜ್‌ನಲ್ಲಿ ಬಂಧಿಸಲಾಗಿದೆ.

ಇದನ್ನು ಓದಿದ್ದೀರಾ?  ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ: ಇಬ್ಬರ ಬಂಧನ

ಭಾನುವಾರ ಮುಂಜಾನೆ 4:55 ಕ್ಕೆ, ನಟ ವಾಸವಾಗಿರುವ ಮುಂಬೈನ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗೆ ಮೋಟಾರ್‌ಸೈಕಲ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಐದು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಇಬ್ಬರು ಶಂಕಿತರ ಪೈಕಿ ಒಬ್ಬನಾದ ಸಾಗರ್ ಶ್ರೀಜೋಗೇಂದ್ರ ಪಾಲ್ ಎಂಬಾತನಿಗೆ ಘಟನೆ ನಡೆಯುವ ಕೆಲವೇ ಗಂಟೆಗಳ ಮೊದಲು ಬಂದೂಕು ನೀಡಲಾಗಿತ್ತು ಎಂದು ಹೇಳಲಾಗಿದೆ.

ಏಪ್ರಿಲ್ 13ರ ರಾತ್ರಿ ಬಾಂದ್ರಾ ಪ್ರದೇಶದಲ್ಲಿ ಬಂದೂಕು ನೀಡಲಾಗಿದ್ದು, ಈ ಬಂದೂಕು ನೀಡಿದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ಮುಂಬೈ | ಬೆಳ್ಳಂಬೆಳಗ್ಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಮುಂದೆ ಗುಂಡಿನ ದಾಳಿ; ಬಿಗಿ ಬಂದೋಬಸ್ತ್

ಪೊಲೀಸ್ ಮೂಲಗಳ ಪ್ರಕಾರ, ಪಾಲ್ ಮತ್ತು ಅವನ ಸಹಚರ ವಿಕ್ಕಿ ಗುಪ್ತಾ ಇಬ್ಬರಿಗೂ ಗುಂಡಿನ ದಾಳಿ ನಡೆಸಲು 4 ಲಕ್ಷ ರೂಪಾಯಿ ಸುಪಾರಿ ನೀಡಲಾಗಿದ್ದು, ಈ ಪೈಕಿ ಒಂದು ಲಕ್ಷ ರೂಪಾಯಿ ಮುಂಗಡವಾಗಿ ಪಾವತಿಸಲಾಗಿದೆ. ಬರೀ ಬೆದರಿಸುವ ಉದ್ದೇಶ ಆರೋಪಿಗಳದ್ದಾಗಿತ್ತು, ಕೊಲ್ಲುವುದು ಅಲ್ಲ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...