ಪಶ್ಚಿಮ ಬಂಗಾಳ | ಎಸ್‌ಐಆರ್ ಒತ್ತಡ: ಮತ್ತೋರ್ವ ಬಿಎಲ್‌ಒ ಆತ್ಮಹತ್ಯೆ

Date:

ಪಶ್ಚಿಮ ಬಂಗಾಳದಲ್ಲಿ ಮತ್ತೋರ್ವ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಕೆಲಸದ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಎಸ್‌ಐಆರ್ ಕೆಲಸದ ಹೊರೆಯಿಂದಾಗಿ ಅವರು ತೀವ್ರ ಒತ್ತಡದಲ್ಲಿದ್ದರು ಎಂದು ಇಸ್ಲಾಂ ಅವರ ಕುಟುಂಬ ಆರೋಪಿಸಿದೆ.

ಮುರ್ಷಿದಾಬಾದ್ ಜಿಲ್ಲೆಯ ಪೈಕ್ಮರಿಚಾರ್‌ನಲ್ಲಿರುವ ರಾಜ್ಯ ಸರ್ಕಾರಿ ಅನುದಾನಿತ ಬಾಲಕರ ಮಾಧ್ಯಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ 47 ವರ್ಷದ ಹಮೀಮುಲ್ ಇಸ್ಲಾಂ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖೋರಿಬೋನಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೂರ್ವ ಅಲೈಪುರ್ ಮತಗಟ್ಟೆಯ ಬಿಎಲ್‌ಒ ಆಗಿದ್ದರು.

ಇದನ್ನು ಓದಿದ್ದೀರಾ? ರಾಜಸ್ಥಾನ | SIR ಒತ್ತಡ?: ಕುಸಿದುಬಿದ್ದ ಬಿಎಲ್‌ಒ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಹಮೀಮುಲ್ ಇಸ್ಲಾಂ ಹಿರಿಯ ಸಹೋದರ ಫಾರ್ಮಾನುಲ್ ಇಸ್ಲಾಂ, “ಮತದಾರರ ಪಟ್ಟಿ ಪರಿಷ್ಕರಣೆ ಕೆಲಸದಲ್ಲಿ ಉಂಟಾದ ಕೆಲಸದ ಹೊರೆಯಿಂದಾಗಿ ಹಮೀಮುಲ್ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಅವರ ದೈನಂದಿನ ಕೆಲಸದ ಹೊರೆಯ ಜೊತೆಗೆ, ಕಳೆದ ಎರಡು ತಿಂಗಳುಗಳಿಂದ ಕಠಿಣ SIR ಕೆಲಸಗಳನ್ನೂ ಮಾಡಬೇಕಾಗಿತ್ತು. ಇದರಿಂದಾಗಿ ಆತ್ಮಹತ್ಯೆ ಮಾಡಿಕೊಂಡರು” ಎಂದು ತಿಳಿಸಿದ್ದಾರೆ.

ಇನ್ನೊಂದೆಡೆ SIR ಕೆಲಸದ ಒತ್ತಡದಿಂದ ಅನಾರೋಗ್ಯಕ್ಕೆ ಒಳಗಾಗಿ ಮಾಲ್ಡಾ ಜಿಲ್ಲೆಯ ಇಂಗ್ಲಿಷ್‌ಬಜಾರ್‌ನ ಮತ್ತೋರ್ವ ಬಿಎಲ್‌ಒ ಸಂಪ್ರೀತಾ ಚೌಧರಿ ಸನ್ಯಾಲ್ ಜನವರಿ 7ರಂದು ನಿಧನರಾಗಿದ್ದಾರೆ.

ದೇಶದಲ್ಲಿ ಬಿಎಲ್‌ಒಗಳ ಸಾವು

ನವೆಂಬರ್ 4ರಿಂದ ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಪ್ರಕ್ರಿಯೆ ಆರಂಭವಾಗಿದ್ದು, ಈವರೆಗೆ ಸುಮಾರು 8 ಬಿಎಲ್‌ಒಗಳು ಸಾವನ್ನಪ್ಪಿದ್ದಾರೆ. ಈ ಪೈಕಿ ಐವರು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಉಳಿದವರು ಹೃದಯಾಘಾತದಂತಹ ಇತರೆ ಕಾರಣಗಳಿಂದ ಮೃತಪಟ್ಟಿದ್ದಾರೆ. ಈ ಸಾವುಗಳು ತೃಣಮೂಲ ಕಾಂಗ್ರೆಸ್ (TMC) ಮತ್ತು ಬಿಜೆಪಿ ನಡುವೆ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿವೆ.

ದೇಶದಲ್ಲಿ 2025ರ ನವೆಂಬರ್‌ನಿಂದ ಈವರೆಗೆ ಸುಮಾರು 33ಕ್ಕೂ ಹೆಚ್ಚು ಬಿಎಲ್‌ಒಗಳು ಮೃತಪಟ್ಟಿದ್ದಾರೆ. ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಗುಜರಾತ್, ರಾಜಸ್ಥಾನ ಮತ್ತು ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂತಹ ಘಟನೆಗಳು ಸಂಭವಿಸಿವೆ. ಬಿಎಲ್‌ಒಗಳ ಸರಣಿ ಸಾವಿನ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಈಗಾಗಲೇ ಕಳವಳ ವ್ಯಕ್ತಪಡಿಸಿದೆ. ಹಾಗೆಯೇ ಕೆಲಸದ ಹೊರೆ ಕಡಿಮೆ ಮಾಡಲು ಹೆಚ್ಚುವರಿ ಸಿಬ್ಬಂದಿಯನ್ನು ನೇಮಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಇನ್ನೊಂದೆಡೆ ಭಾರತೀಯ ಚುನಾವಣಾ ಆಯೋಗ ಬಿಎಲ್‌ಒಗಳ ಸಾವು ದುರದೃಷ್ಟಕರ ಎಂದರೂ ಕೆಲಸದ ಹೊರೆ ಅಧಿಕವಾಗಿರಲಿಲ್ಲ ಎಂದು ಸಮರ್ಥಿಸಿಕೊಂಡಿದೆ.

ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...