ನಿಯಮಗಳ ವಿರುದ್ಧ ಮದ್ರಾಸ್ ಹೈಕೋರ್ಟ್‌ಗೆ ಮೊರೆ ಹೋದ ಆನ್‌ಲೈನ್ ಗೇಮಿಂಗ್ ಕಂಪನಿಗಳು

Date:

ತಮಿಳುನಾಡು ಆನ್‌ಲೈನ್ ಗೇಮಿಂಗ್ ಪ್ರಾಧಿಕಾರ (ರಿಯಲ್ ಮನಿ ಗೇಮ್ಸ್) ನಿಯಮಗಳು, 2025ರ ಕೆಲವು ನಿಬಂಧನೆಗಳನ್ನು ಅಸಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಆನ್‌ಲೈನ್ ಗೇಮಿಂಗ್ ಕಂಪನಿಗಳು ಬುಧವಾರ ಮದ್ರಾಸ್ ಹೈಕೋರ್ಟ್‌ಗೆ ಮೊರೆ ಹೋಗಿವೆ.

ನವದೆಹಲಿಯ ಹೆಡ್ ಡಿಜಿಟಲ್ ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರ ಎರಡು ಕಂಪನಿಗಳು ಸಲ್ಲಿಸಿದ ಅರ್ಜಿಗಳನ್ನು ವಿಚಾರಣೆಗೆ ತೆಗೆದುಕೊಂಡ ನ್ಯಾಯಮೂರ್ತಿಗಳಾದ ಎಸ್ ಎಂ ಸುಬ್ರಮಣಿಯಂ ಮತ್ತು ಕೆ ರಾಜಶೇಖರ್ ಅವರನ್ನೊಳಗೊಂಡ ವಿಭಾಗೀಯ ಪೀಠವು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರತಿ ಅಫಿಡವಿಟ್‌ಗಳನ್ನು ಸಲ್ಲಿಸಲು ಅನುವು ಮಾಡಿಕೊಟ್ಟು ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದೆ.

ಇದನ್ನು ಓದಿದ್ದೀರಾ? ಹಾಸನ | ಆನ್‌ಲೈನ್ ಗೇಮಿಂಗ್; ಲಕ್ಷಾಂತರ ಹಣ ಕಳೆದುಕೊಂಡ ಯುವಕ ಅತ್ಮಹತ್ಯೆ 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಧಾರ್ ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಮಾಡಲಾದ ಫೋನ್ ಸಂಖ್ಯೆಗೆ ಕಳುಹಿಸಲಾಗುವ ಒಟಿಪಿಯೊಂದಿಗೆ ಲಾಗಿನ್ ಮಾಡಲು ಕೆವೈಸಿ ಪರಿಶೀಲನೆ ಕಡ್ಡಾಯ ಎಂದು ಹೇಳುವ ನಿಯಮ 4 (iii) ಮತ್ತು ರಿಯಲ್ ಮನಿ ಆಟಗಳಿಗೆ ಮಧ್ಯರಾತ್ರಿ 12ರಿಂದ ಬೆಳಿಗ್ಗೆ 5 ರವರೆಗೆ ನಿರ್ಬಂಧ ವಿಧಿಸಲಾಗುವ ನಿಯಮ 4 (viii) ಅನ್ನು ಕಂಪನಿಗಳು ಪ್ರಶ್ನಿಸಿವೆ.

ಹಾಗೆಯೇ ಕೆಲವು ನಿಯಮಗಳ ಬಗ್ಗೆ ಸಂಪೂರ್ಣ ಸ್ಪಷ್ಟತೆಯನ್ನು ನೀಡದ ಕಾರಣ, ಆ ಬಗ್ಗೆ ಸ್ಪಷ್ಟಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಲಾಗಿದೆ.

ಈ ಹಿಂದೆ ಎರಡು ಸಂದರ್ಭಗಳಲ್ಲಿ ತಮಿಳುನಾಡು ಸರ್ಕಾರವು ಕಾನೂನುಬದ್ಧವಾಗಿ ಅನುಮತಿಸಲಾದ ಆಟಗಳನ್ನು ನಿಷೇಧಿಸಿದೆ. ಆದರೆ ನ್ಯಾಯಾಲಯವು ನಿಷೇಧ ರದ್ದುಗೊಳಿಸಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಆನ್‌ಲೈನ್ ಬೆಟ್ಟಿಂಗ್, ಗೇಮಿಂಗ್‌ಗಳಿಂದ ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡು ಜನರು ಆತ್ಮಹತ್ಯೆಯಂತಹ ಕಠಿಣ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರಗಳು ಆನ್‌ಲೈನ್‌ ಗೇಮಿಂಗ್‌ಗೆ ಕೆಲವು ನಿಯಮಗಳನ್ನು ರೂಪಿಸಿದೆ. ಆದರೆ ಈ ನಿಯಮಗಳನ್ನು ಇನ್ನಷ್ಟು ಬಲಪಡಿಸುವ ಮತ್ತು ಜನರ ಹಣ ದೂಚಿ ಬೀದಿಗೆ ತಳ್ಳುವ ಗೇಮಿಂಗ್‌ ಅನ್ನು ಮಟ್ಟ ಹಾಕುವ ಅಗತ್ಯವಿದೆ. ಜೊತೆಗೆ ಜನರು ಕೂಡಾ ಈ ಅಪಾಯದ ಬಗ್ಗೆ ಅರಿತು ಈ ಮೋಸಕ್ಕೆ ಬಲಿಯಾಗದಿರುವಂತೆ ಎಚ್ಚರ ವಹಿಸಬೇಕು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...