ಆಪರೇಷನ್ ಸಿಂಧೂರ | ಕಾರ್ಯಾಚರಣೆ ಮಾಹಿತಿ ವಿವರಿಸಿದ ಸೋಫಿಯಾ ಖುರೇಶಿ ಬೆಳಗಾವಿಯ ಸೊಸೆ

Date:

ಪಾಕಿಸ್ತಾನದಲ್ಲಿನ ಭಯೋತ್ಪಾದಕರ ನೆಲೆಗಳ ಮೇಲೆ ಭಾರತ ಸೇನೆಯು ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ಕುರಿತು ಬುಧವಾರ ಸುದ್ದಿಗೋಷ್ಟಿಯಲ್ಲಿ ವಿವರಿಸಿದವರಲ್ಲಿ ಕರ್ನಲ್ ಸೋಫಿಯಾ ಖುರೇಶಿ ಕೂಡ ಒಬ್ಬರು. ಹೆಮ್ಮೆಯ ಸಂಗತಿ ಎಂದರೆ, ಅವರು ಕರ್ನಾಟಕದ ಬೆಳಗಾವಿ ಜಿಲ್ಲೆಯ ಸೊಸೆ.

ಸೋಫಿಯಾ ಅವರ ಪತಿ ತಾಜುದ್ದೀನ್ ಬಾಗೇವಾಡಿ ಅವರು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರು ಗ್ರಾಮದವರು ಅವರು ತಿಳಿದುಬಂದಿದೆ. ಸೋಫಿಯಾ ಮತ್ತು ತಾಜುದ್ದೀನ್ ಇಬ್ಬರೂ ಕೂಡ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಸೋಫಿಯಾ ಅವರು ಮೂಲತಃ ಗುಜರಾತ್ ರಾಜ್ಯದ ಬರೋಡಾದವರು. ಸೋಫಿಯಾ ಮತ್ತು ತಾಜುದ್ದೀನ್ ಪರಿಸ್ಪರ ಪ್ರೀತಿಸಿ, 2015ರಲ್ಲಿ ವಿವಾಹವಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೋಫಿಯಾ ಅವರು ಭಾರತೀಯ ಸೇನಾ ತರಬೇತಿ ತುಕಡಿಯನ್ನು ಮುನ್ನಡೆಸಿದ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ಕಾರ್ಪ್ಸ್ ಆಫ್ ಸಿಗ್ನಲ್ಸ್‌ನ ಲೆಫ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಷಿ ಅವರು 2016ರಲ್ಲಿ ಈ ಇತಿಹಾಸವನ್ನು ಬರೆದಿದ್ದಾರೆ. ಏಷ್ಯನ್ ಪ್ಲಸ್ ಬಹುರಾಷ್ಟ್ರೀಯ ಕ್ಷೇತ್ರ ತರಬೇತಿಯಲ್ಲಿ ಭಾಗಿಯಾದ ಮಹಿಳಾ ಅಧಿಕಾರಿ ಖುರೇಷಿ. ಈ ತರಬೇತಿಯಲ್ಲಿ ವಿವಿಧ ದೇಶಗಳ ಪ್ರತಿನಿಧಿಗಳು ಭಾಗಿಯಾಗಿದ್ದರು. ಆದರೆ ಏಕೈಕ ಮಹಿಳಾ ಕಮಾಂಡರ್ ಖುರೇಷಿ ಆಗಿದ್ದರು. ಆಗ ಅವರ ವಯಸ್ಸು 35 ಆಗಿತ್ತು. ಶಾಂತಿಪಾಲನಾ ಕಾರ್ಯಾಚರಣೆಗಳಿಗೆ ತರಬೇತಿ ಮಾಹಿತಿಗಳನ್ನು ಒದಗಿಸುವಲ್ಲಿ ಅವರ ಪಾತ್ರ ಮಹತ್ತರ. ಕರ್ನಲ್ ಸೋಫಿಯಾ ಖುರೇಷಿ ಹಲವು ವರ್ಷಗಳ ಕಾಲ ಸೇನೆಯಲ್ಲಿ ತರಬೇತಿ ಅನುಭವ ಹೊಂದಿದ್ದಾರೆ.

ಪಹಲ್ಗಾಮ್ ದಾಳಿ ನಡೆಸಿದ ಭಯೋತ್ಪಾದಕರು ಧರ್ಮವನ್ನು ಕೇಳಿ ಪತ್ನಿ, ಮಕ್ಕಳ ಎದುರೇ ಪುರುಷರನ್ನು ಕೊಂದಿದ್ದಾರೆ. ಈ ದಾಳಿಯ ಬಳಿಕ ನವವಿಹಾಹಿತೆ ಸೇರಿ 25 ಮಹಿಳೆಯರು ವಿಧವೆಯರಾಗಿದ್ದಾರೆ. ಈ ಮಹಿಳೆಯರ ಸಿಂಧೂರವನ್ನು ಅಳಿಸಲಾಗಿದೆ ಎಂಬ ಬಿಂಬವಾಗಿ ಈ ಕಾರ್ಯಾಚರಣೆಗೆ ಆಪರೇಷನ್ ಸಿಂಧೂರ ಎಂದು ಹೆಸರಿಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...