‘ನಮ್ಮ ಮಕ್ಕಳು ಗುಲಾಮರಂತೆ ಕೆಲಸ ಮಾಡುತ್ತಿದ್ದಾರೆ’; ರಾಹುಲ್ ಬಳಿ ಮೃತ EY ಉದ್ಯೋಗಿಯ ತಾಯಿ ಅಳಲು

Date:

ತೀವ್ರ ಕೆಲಸದ ಒತ್ತಡದಿಂದ ಸಾವನ್ನಪ್ಪಿದ 26 ವರ್ಷದ ‘ಅರ್ನ್ಸ್ಟ್ ಅಂಡ್‌ ಯಂಗ್’ (EY) ಕಂಪನಿಯ ಉದ್ಯೋಗಿ ಅನ್ನಾ ಸೆಬಾಸ್ಟಿಯನ್ ಪೆರೈಲ್ ಅವರ ಪೋಷಕರೊಂದಿಗೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಿಡಿಯೋ ಕರೆಯಲ್ಲಿ ಮಾತುಕತೆ ನಡೆಸಿದ್ದಾರೆ.

“ನಾನು ನೋವಿನಲ್ಲಿರುವ ಅನ್ನಾ ಸೆಬಾಸ್ಟಿಯನ್ ಅವರ ಪೋಷಕರೊಂದಿಗೆ ಮಾತನಾಡಿದ್ದೇನೆ. ದೇಶದ ಭವಿಷ್ಯವಾಗಿದ್ದ, ಮಹತ್ವಾಕಾಂಕ್ಷೆಯ ಯುವ ಉದ್ಯೋಗಿಗಳ ಜೀವನವು ಇಂತಹ ಕಲಸದ ಒತ್ತಡದ ಪರಿಸ್ಥಿತಿಗಳಿಂದ ದುರಂತವಾಗಿ ಮೊಟಕುಗೊಂಡಿದೆ” ಎಂದು ರಾಹುಲ್‌ ಗಾಂಧಿ ‘ಎಕ್ಸ್‌‘ನಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಅನ್ನಾ ಅವರ ತಾಯಿ ಧೈರ್ಯ ಮತ್ತು ನಿಸ್ವಾರ್ಥತೆಯನ್ನು ತೋರಿಸಿದ್ದಾರೆ. ವೃತ್ತಿಪರರ ಕೆಲಸದ ಪರಿಸ್ಥಿತಿಗಳನ್ನು ಸುಧಾರಿಸುವ ಬಗ್ಗೆ ಮಾತನಾಡಿದ್ದಾರೆ. ತಮ್ಮ ಮಗಳನ್ನು ಕಳೆದುಕೊಂಡಿದ್ದರ ಹೊರತಾಗಿಯೂ ಅವರು ಇತರ ಉದ್ಯೋಗಿಗಳ ಪರಿಸ್ಥಿತಿ ಸುಧಾರಿಸಬೇಕೆಂದು ಹೇಳಿದ್ದಾರೆ” ಎಂದು ರಾಹುಲ್ ಶ್ಲಾಘಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತನಗೆ ಹೆಚ್ಚು ಕೆಲಸದ ಒತ್ತಡವಿರುವುದಾಗಿ ಅನ್ನಾ ಯಾವಾಗಲೂ ಹೇಳುತ್ತಿದ್ದಳು. ಆಕೆ ನಿರಂತರವಾಗಿ ಕೆಲಸ ಮಾಡಬೇಕಿತ್ತು. ಶನಿವಾರ, ಭಾನುವಾರವೂ ಕೆಲಸ ಮಾಡುತ್ತಿದ್ದಳು. ಹೊಸಬರು, ಯುವ ಉದ್ಯೋಗಿಗಳಿಂದ ಹೆಚ್ಚು ದುಡಿಸಿಕೊಳ್ಳಲಾಗುತ್ತಿದೆ. ಈ ಉದ್ಯೋಗಿಗಳು ತಮ್ಮ ವೈಯಕ್ತಿಕ ವಿಚಾರಗಳ ಬಗ್ಗೆ ಗಮನ ಹರಿಸಲು ಕೂಡ ಸಮಯ ದೊರೆಯುತ್ತಿಲ್ಲ” ಎಂದು ಅನ್ನಾ ಅವರ ತಾಯಿ ರಾಹುಲ್ ಬಳಿ ವಿವರಿಸಿದ್ದಾರೆ.

“ಅನ್ನಾ ಪ್ರತಿದಿನ ಕರೆ ಮಾಡುತ್ತಿದ್ದಳು. ‘ಅಮ್ಮಾ, ನಾನು ಮಾತನಾಡಲು ಸಾಧ್ಯವಿಲ್ಲ, ನಾನು ಸುಸ್ತಾಗಿದ್ದೇನೆ, ನಾನು ಮಲಗುತ್ತೇನೆ’ ಎನ್ನುತ್ತಿದ್ದಳು. ನಮ್ಮ ಮಕ್ಕಳಿಗೆ ಕೆಲಸದ ಜಾಗದಲ್ಲಿ ಚಿತ್ರಹಿಂಸೆ ನೀಡಲಾಗುತ್ತಿದೆ. ಗುಲಾಮರಂತೆ ಕೆಲಸ ಮಾಡಿಸಲಾಗುತ್ತಿದೆ” ಎಂದು ಅನ್ನಾ ಅವರ ತಾಯಿ ಹೇಳಿದ್ದಾರೆ.

“ರಾಹುಲ್ ಜೀ, ನಾನು ಹೇಳಬೇಕಾಗಿರುವುದು ಭಾರತದಲ್ಲಿ ಮಾತ್ರ ಮಕ್ಕಳು ಇಂತಹ ಚಿತ್ರಹಿಂಸೆಗೆ ಒಳಗಾಗುತ್ತಿದ್ದಾರೆ. ಬೇರೆ ದೇಶಗಳಲ್ಲಿ ಕಂಪನಿಗಳು ತಮ್ಮ ಉದ್ಯೋಗಿಗಳನ್ನು ಈ ರೀತಿ ಕೆಲಸ ಮಾಡಲು ಕೇಳುತ್ತಾರೆಯೇ? ಅವರು ನಮಗೆ 1947ರಲ್ಲಿ ಸ್ವಾತಂತ್ರ್ಯ ಸಿಕ್ಕಿತು ಎಂದು ಹೇಳುತ್ತಾರೆ. ಆದರೆ ನಮ್ಮ ಮಕ್ಕಳು ಈಗಲೂ ಜೀತದಾಳುಗಳಂತೆ ದುಡಿಯುತ್ತಿದ್ದಾರೆ” ಎಂದು ಅನ್ನಾ ಅವರ ತಾಯಿ ಹೇಳಿರುವುದು ವಿಡಿಯೋದಲ್ಲಿದೆ.

“ಈ ವಿಷಯವನ್ನು ಸಂಸತ್ತಿನಲ್ಲಿ ನೀವು ಪ್ರಸ್ತಾಪಿಸುತ್ತಿರಾ” ಎಂದು ರಾಹುಲ್ ಅವರನ್ನು ಅವರು ಹೇಳಿದ್ದಾರೆ. ಅದಕ್ಕೆ, ರಾಹುಲ್‌ ಗಾಂಧಿ, “ಹೌದು” ಎಂದು ಪ್ರತಿಕ್ರಿಯಿಸಿದ್ದಾರೆ.

“ನಾವು ಸಂಪೂರ್ಣವಾಗಿ ನಿಮ್ಮೊಂದಿಗೆ ಇದ್ದೇವೆ. ನಿಮ್ಮ ಮಾತುಗಳು ಸರಿಯಾಗಿವೆ. ಅವುಗಳನ್ನು ಮಾಡಲು ನಿಮ್ಮೊಂದಿಗೆ ನಾವಿದ್ದೇವೆ” ಎಂದು ಅನ್ನಾ ಪೋಷಕರಿಗೆ ರಾಹುಲ್‌ ಭರವಸೆ ನೀಡಿದ್ದಾರೆ.

‘ಅರ್ನ್ಸ್ಟ್ ಅಂಡ್‌ ಯಂಗ್’ ಇಂಡಿಯಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ಚಾರ್ಟರ್ಡ್ ಅಕೌಂಟೆಂಟ್ ಅನ್ನಾ ಪೆರಾಯಿಲ್ ಅವರು ಕೆಲಸ-ಸಂಬಂಧಿತ ಒತ್ತಡದ ಕಾರಣದಿಂದ ಸಾವನ್ನಪ್ಪಿದ್ದಾರೆ. ಅವರ ಸಾವು ಕೆಲಸ ಮತ್ತು ಜೀವನದಲ್ಲಿನ ಸಮತೋಲನ ಮತ್ತು ಕಾರ್ಪೊರೇಟ್ ಹೊಣೆಗಾರಿಕೆಯ ಬಗ್ಗೆ ರಾಷ್ಟ್ರವ್ಯಾಪಿ ಚರ್ಚೆ ಹುಟ್ಟುಹಾಕಿದೆ.

ಅನ್ನಾ ಅವರ ಸಾವಿಗೆ ಕಾರಣವಾದ ಸಂದರ್ಭಗಳ ಕುರಿತು ಕೇಂದ್ರ ಕಾರ್ಮಿಕ ಸಚಿವಾಲಯವು ತನಿಖೆ ನಡೆಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...