ಹೆಣ್ಣು ಮಕ್ಕಳ ಅಗೌರವದ ಹೇಳಿಕೆ; ನಟ ಚಿರಂಜೀವಿ ವಿರುದ್ಧ ಆಕ್ರೋಶ

Date:

ಹೆಣ್ಣು ಮಕ್ಕಳ ವಿಚಾರದಲ್ಲಿ ತೆಲುಗು ಚಿತ್ರರಂಗದ ಸ್ಟಾರ್ ನಟ ಚಿರಂಜೀವಿ ಹೊಂದಿರುವ ಧೋರಣೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಹೆಣ್ಣು ಮಕ್ಕಳನ್ನು ಚಿರಂಜೀವಿ ಈಗಲೂ ಎರಡನೇ ದರ್ಜೆಯ ಪ್ರಜೆಗಳಂತೆ ನೋಡುತ್ತಿದ್ದಾರೆ ಎಂದು ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದೆ.

ಇತ್ತೀಚೆಗೆ, ಚಿರಂಜೀವಿ ನೀಡಿರುವ ಹೇಳಿಕೆಯು ಆಕ್ರೋಶ-ಟೀಕೆಗೆ ಗುರಿಯಾಗಿದೆ. ‘ಬ್ರಹ್ಮಾಆನಂದಂ’ ಸಿನಿಮಾದ ಪ್ರೀ-ರಿಲೀಸ್‌ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಚಿರಂಜೀವಿ, ತಮ್ಮ ಮಗ, ರಾಮ್‌ಚರಣ್‌ಗೆ ಎರಡನೇ ಮಗುವಾದರೂ ಗಂಡು ಮಗು ಆಗಬೇಕು. ಆ ಮಗುವಿನಿಂದ ನಮ್ಮ ಲೆಗಸಿ ಮುಂದುವರೆಯಬೇಕು” ಎಂದು ಹೇಳಿದ್ದಾರೆ.

ಮುಂದುವರೆದು ಮಾತನಾಡಿರುವ ಚಿರಂಜೀವಿ, “ನಾನು ಮನೆಯಲ್ಲಿ ಮೊಮ್ಮಕ್ಕಳ ಜೊತೆ ಇದ್ದಾಗ, ಲೇಡಿಸ್ ಹಾಸ್ಟೆಲ್‌ನ ವಾರ್ಡನ್ ಆಗಿದ್ದೀನೇನೋ ಎಂಬಂತೆ ಭಾಸವಾಗುತ್ತದೆ. ಸುತ್ತಲೂ ಹೆಣ್ಣುಮಕ್ಕಳೇ ಇರುತ್ತಾರೆ. ಚರಣ್ ಈ ಬಾರಿ ಒಂದು ಗಂಡು ಮಗು ಬೇಕು ಕಣೋ. ನಮ್ಮ ಲೆಗಸಿ ಮುಂದುವರೆಯಬೇಕು ಎಂಬುದು ನನ್ನ ಕೋರಿಕೆ. ಆದರೆ, ಚರಣ್‌ಗೆ ಮತ್ತೊಂದು ಹೆಣ್ಣು ಮಗು ಆಗುತ್ತದೆಯಾ ಎಂಬ ಭಯವಿದೆ” ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಒಬ್ಬ ಸ್ಟಾರ್‌ ನಟ ಹೆಣ್ಣು ಮಕ್ಕಳ ಬಗ್ಗೆ ಎಂಥಹ ಧೋರಣೆ ಹೊಂದಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ. ಹೆಣ್ಣು ಮಕ್ಕಳಿದ್ದರೆ ಅವರ ಲೆಗಸಿ ಮುಂದುವರೆಯುವುದಿಲ್ಲವೇ. ಅವರ ವಂಶವನ್ನು ಮುಂದುವರೆಸಲು ಗಂಡೇ ಆಗಬೇಕೇ? ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವವರು, ತಮ್ಮನ್ನ ಫಾಲೋ ಮಾಡುವವರಿಗೆ ಮಾದರಿಯಾಗಿ ಇರಬೇಕಿರುವವರು ಗಂಡು-ಹೆಣ್ಣು ಎಂಬ ಭೇದ ಹೊಂದಿದ್ದರೆ, ಅವರು ಯಾವ ರೀತಿಯ ಮಾದರಿಯಾಗಬಲ್ಲರು.ಸಮಾಜಕ್ಕೆ ಎಂಥಹ ಸಂದೇಶ ನೀಡುವರು ಎಂದು ಟೀಕೆಗಳು ವ್ಯಕ್ತವಾಗಿವೆ.

ಹೆಣ್ಣು ಮಕ್ಕಳು ಎಲ್ಲ ಕ್ಷೇತ್ರಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಸಾಧನೆ ಮಾಡುತ್ತಿದ್ದಾರೆ. ಎಲ್ಲ ಕ್ಷೇತ್ರಗಳಲ್ಲಿಯೂ ಗಂಡಿಗೆ ಸಮಾನಳಾಗಿ ಗುರುತಿಸಿಕೊಂಡಿದ್ದಾರೆ. ಆದರೂ, ಸ್ಟಾರ್ ನಟನೊಬ್ಬ ಗಂಡು ಅಹಮ್ಮಿಕೆಗೆ ಬಲಿಯಾಗಿರುವುದು ವಿಷಾಧನೀಯ ಎಂದು ಹಲವರು ಆಕ್ರೋಶ ವ್ಯಕ್ತಪಡಿದ್ದಾರೆ.

ಅಂದಹಾಗೆ, ಚಿರಂಜೀವಿ ಅವರ ಪುತ್ರ ರಾಮ್‌ಚರಣ್‌ ಮತ್ತು ಉಪಾಸನಾ ದಂಪತಿಗೆ ಹೆಣ್ಣು ಮಗುವಿದ್ದು, ಆಕೆಗೆ ಕ್ಲಿಂಕಾರ ಎಂದು ಹೆಸರಿಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...