2022ರಲ್ಲಿ ಒಂದು ಸಾವಿರಕ್ಕೂ ಅಧಿಕ ಬಾಲ್ಯ ವಿವಾಹ ಪ್ರಕರಣ; ಕರ್ನಾಟಕದಲ್ಲೇ ಅಧಿಕ!

Date:

ಭಾರತ ಬಾಲ್ಯವಿವಾಹಗಳನ್ನು ನಿಷೇಧಿಸಿದ್ದರೂ ಕೂಡಾ 2022ರಲ್ಲಿ ದೇಶದಲ್ಲಿ ಒಂದು ಸಾವಿರಕ್ಕೂ ಅಧಿಕ ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ಗುರುವಾರ ಬಿಡುಗಡೆ ಮಾಡಿದ ಡೇಟಾದ ಪ್ರಕಾರ ಕರ್ನಾಟಕದಲ್ಲೇ ಅಧಿಕ ಬಾಲ್ಯ ವಿವಾಹ ನಡೆದಿದೆ. 2022ರಲ್ಲಿ ಕರ್ನಾಟಕದಲ್ಲಿ 215 ಬಾಲ್ಯ ವಿವಾಹಗಳು ನಡೆದಿವೆ.

ಕರ್ನಾಟಕ ಬಳಿಕ ಎರಡನೇ ಸ್ಥಾನದಲ್ಲಿ ಅಸ್ಸಾಂ ಇದೆ. ಬಾಲ್ಯ ವಿವಾಹ ನಿಷೇಧ ಕಾಯ್ದೆ 2006ರ ಅಡಿಯಲ್ಲಿ ಅಸ್ಸಾಂನಲ್ಲಿ 163 ಬಾಲ್ಯ ವಿವಾಹಗಳು ನಡೆದಿದೆ. ದೇಶದಲ್ಲಿ ಒಟ್ಟಾರೆಯಾಗಿ 2022ರಲ್ಲಿ 1,002 ವಿವಾಹಗಳು ನಡೆದಿವೆ ಎಂದು ವರದಿ ತಿಳಿಸಿದೆ. ಕರ್ನಾಟಕ ಮತ್ತು ಅಸ್ಸಾಂ ನಂತರದ ಸ್ಥಾನದಲ್ಲಿ ತಮಿಳುನಾಡು ಇದ್ದು ಅಲ್ಲಿ 2022ರಲ್ಲಿ 155 ಬಾಲ್ಯ ವಿವಾಹಗಳು ವರದಿಯಾಗಿವೆ.

ಇದನ್ನು ಓದಿದ್ದೀರಾ? ಬಹುಪತ್ನಿತ್ವ, ಬಾಲ್ಯ ವಿವಾಹ ತ್ಯಜಿಸಿ: ಬಾಂಗ್ಲಾದೇಶಿ ಮುಸ್ಲಿಂಮರಿಗೆ ಅಸ್ಸಾಂ ಸಿಎಂ ಷರತ್ತು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಶ್ಚಿಮ ಬಂಗಾಳ (121), ಮಹಾರಾಷ್ಟ್ರ (99), ತೆಲಂಗಾಣ (53), ಒಡಿಶಾ (46), ಹರಿಯಾಣ (37), ಆಂಧ್ರಪ್ರದೇಶ (26), ಉತ್ತರ ಪ್ರದೇಶ (17), ಬಿಹಾರ (13), ಜಮ್ಮು ಮತ್ತು ಕಾಶ್ಮೀರ (2) ಮತ್ತು ದೆಹಲಿ (1) ನಂತರದ ಸ್ಥಾನಗಳಲ್ಲಿದೆ.

ದೇಶದಲ್ಲಿ 18 ವರ್ಷದೊಳಗಿನ ಅಂದಾಜು 1.5 ಮಿಲಿಯನ್ ಬಾಲಕಿಯರು ವಿವಾಹವಾಗುತ್ತಿದ್ದಾರೆ. 15-19 ವರ್ಷ ವಯಸ್ಸಿನ ಸುಮಾರು ಶೇಕಡ 16ರಷ್ಟು ಬಾಲಕಿಯರು ಪ್ರಸ್ತುತ ವಿವಾಹವಾಗಿದ್ದಾರೆ. 2005-2006 ಮತ್ತು 2015-2016ರ ನಡುವೆ ಬಾಲ್ಯ ವಿವಾಹ ಪ್ರಮಾಣ ಶೇಕಡ 47ರಿಂದ ಶೇಕಡ 27ಕ್ಕೆ ಕಡಿಮೆಯಾದರೂ ಕೂಡಾ ಬಾಲ್ಯ ವಿವಾಹ ಇಂದಿಗೂ ನಡೆಯುತ್ತಿದೆ.

ಇದನ್ನು ಓದಿದ್ದೀರಾ? ಬಾಲ್ಯ ವಿವಾಹ | ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಳವಳ

ಈ ನಿಟ್ಟಿನಲ್ಲಿ ಶಾಲೆ ಬಿಟ್ಟ, ಶಾಲೆಯಿಂದ ಹೊರಗುಳಿದ ಅಥವಾ ನಿಯಮಿತವಾಗಿ ಶಾಲೆಗೆ ಹಾಜರಾಗದ ಮಕ್ಕಳನ್ನು ಗುರುತಿಸುವಂತೆ ಎನ್‌ಸಿಪಿಸಿಆರ್ ರಾಜ್ಯಗಳಿಗೆ ಹೇಳಿದೆ. ಮಾಹಿತಿಯಿಲ್ಲದೆ ಮಕ್ಕಳು ಗೈರುಹಾಜರಾಗಿರುವ ಶಾಲೆಗಳ ನಕ್ಷೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅಪಾಯದಲ್ಲಿರುವ ಮಕ್ಕಳನ್ನು ಗುರುತಿಸುವುದು ಮತ್ತು ಅವರ ಬಾಲ್ಯ ವಿವಾಹಗಳನ್ನು ತಡೆಯುವುದು ಇದರ ಉದ್ದೇಶವಾಗಿದೆ. 280,289 ಗ್ರಾಮಗಳು ಮತ್ತು ಬ್ಲಾಕ್‌ಗಳನ್ನು ಗುರಿಯಾಗಿಟ್ಟುಕೊಂಡು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...