ಅಸ್ಸಾಂ ಪ್ರವಾಹ ಸ್ಥಿತಿ ಗಂಭೀರ: 29 ಜಿಲ್ಲೆಗಳ 16 ಲಕ್ಷ ಮಂದಿಗೆ ಆಪತ್ತು

Date:

ಅಸ್ಸಾಂ ಪ್ರವಾಹ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ರಾಜ್ಯದ 29 ಜಿಲ್ಲೆಗಳ 16.50 ಲಕ್ಷ ಮಂದಿ ತೊಂದರೆಗೊಳಗಾಗಿದ್ದಾರೆ. ರಾಜ್ಯದಾದ್ಯಂತ ಎಲ್ಲ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ ಎಂದು ಅಧಿಕೃತ ವರದಿಗಳು ತಿಳಿಸಿವೆ.

ಕಾಮರೂಪಿ ಜಿಲ್ಲೆಯ ಬ್ರಹ್ಮಪುತ್ರ, ದಿಗರು ಹಾಗೂ ಕೊಲ್ಲಾಂಗ್‌ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿರುವುದರಿಂದ ಜನವಸತಿ ಹಾಗೂ ಕೃಷಿ ಭೂಮಿಗಳು ಜಲಾವೃತವಾಗಿವೆ.

ಪರಿಸ್ಥಿತಿಯ ಗಂಭೀರತೆಯನ್ನು ಅರಿಯಲು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಗುವಾಹಟಿಯ ಪ್ರವಾಹ ಪೀಡಿತ ಪ್ರದೇಶಗಳಾದ ಮಲಿಗಾವ್‌, ಪಂಡು ಬಂದರು ಹಾಗೂ ದೇಗುಲ ಘಟ್ಟಗಳ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಮಂತ ಬಿಸ್ವಾ ಶರ್ಮಾ ಅವರು ಪ್ರವಾಹ ಪರಿಸ್ಥಿತಿಗಳ ಬಗ್ಗೆ ಅವಲೋಕಿಸಲು ಬುಧವಾರ ರಾತ್ರಿ ಎಲ್ಲ ಜಿಲ್ಲೆಗಳ ಆಯುಕ್ತರೊಂದಿಗೆ ಸಭೆ ನಡೆಸಿದ್ದು, ನಿಯಮಾವಳಿಗಳ ಪ್ರಕಾರ ಪರಿಹಾರ ನೀಡಬೇಕೆಂದು ನಿರ್ದೇಶಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಸ್ಸಾಂ ಪ್ರವಾಹದಿಂದ 26 ಸಾವು, 1.61 ಲಕ್ಷ ಮಂದಿ ನಿರಾಶ್ರಿತ

ಆಗಸ್ಟ್‌ ತಿಂಗಳೊಳಗೆ ಎಲ್ಲ ಪುನರ್ವಸತಿ ಶಿಬಿರಗಳನ್ನು ಪೂರ್ಣಗೊಳಿಸಬೇಕು ಹಾಗೂ ಪರಿಹಾರ ನೀಡಿಕೆಯ ಬಗ್ಗೆ ಮುಖ್ಯ ಕಚೇರಿಗೆ ಖಚಿತ ಮಾಹಿತಿ ಒದಗಿಸಬೇಕು ಎಂದು ತಿಳಿಸಿದ್ದಾರೆ.

ಮುಂದಿನ ಮೂರು ದಿನಗಳಲ್ಲಿ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಂಪುಟ ದರ್ಜೆ ಸಚಿವರು ವಾಸ್ತವ್ಯ ಹೂಡಲಿದ್ದಾರೆ.

ಅಸ್ಸಾಂನಲ್ಲಿ ಪ್ರವಾಹ, ಭೂಕುಸಿತ ಹಾಗೂ ಚಂಡ ಮಾರುತದಿಂದ ಸಾವಿನ ಸಂಖ್ಯೆ 56ಕ್ಕೆ ಏರಿಕೆಯಾಗಿದೆ. ಧಿಬ್ರು ಅತ್ಯಂತ ಹೆಚ್ಚು ತೊಂದರೆಗೊಳಗಾದ ಜಿಲ್ಲೆಯಾಗಿದ್ದು, 2.23 ಲಕ್ಷ ಮಂದಿ ಅಪಾಯದ ಸ್ಥಿತಿ ಎದುರಿಸುತ್ತಿದ್ದಾರೆ. ದರಾಂಗ್‌ನಲ್ಲಿ 1.84 ಲಕ್ಷ ಹಾಗೂ ಲಕೀಂಪುರದಲ್ಲಿ 1.66 ಲಕ್ಷ ಜನರಿಗೆ ತೊಂದರೆಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...