ಬಿಹಾರದಲ್ಲಿ 35 ಲಕ್ಷ ಮತದಾರರು ಮೃತರು ಅಥವಾ ಸ್ಥಳಾಂತರಗೊಂಡಿದ್ದಾರೆ: ಚುನಾವಣಾ ಆಯೋಗ

Date:

ಬಿಹಾರದಲ್ಲಿ ಕನಿಷ್ಠ 35.68 ಲಕ್ಷ ಮತದಾರರು ಮೃತಪಟ್ಟಿದ್ದಾರೆ ಅಥವಾ ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಅಥವಾ ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಅವರ ದಾಖಲಾಗಿದೆ ಎಂದು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುತ್ತಿರುವ ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ದತ್ತಾಂಶವು ತೋರಿಸಿದೆ.

ಈಗಾಗಲೇ ಮತದಾರರ ಪಟ್ಟಿಯಲ್ಲಿರುವ 7.89 ಕೋಟಿ ಮತದಾರರಲ್ಲಿ ಶೇ 11.82 ರಷ್ಟು ಅಥವಾ 93.34 ಲಕ್ಷ ಜನರು ಇನ್ನೂ ತಮ್ಮ ಗಣತಿ ನಮೂನೆಗಳನ್ನು ಸಲ್ಲಿಸದ ಕಾರಣ ಈ ಸಂಖ್ಯೆ ಹೆಚ್ಚಾಗಬಹುದು. ಸಲ್ಲಿಕೆಗೆ ಜುಲೈ 25 ಕೊನೆಯ ದಿನವಾಗಿದೆ. ಗಣತಿ ನಮೂನೆಗಳನ್ನು ಸಲ್ಲಿಸಿದ ಎಲ್ಲರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಇರುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಚುನಾವಣಾ ಆಯೋಗದ ಹೇಳಿಕೆಯ ಪ್ರಕಾರ, ಜೂನ್ 25 ರಂದು ಮತದಾರರ ಪಟ್ಟಿಯ ಪರಿಷ್ಕರಣೆ ಆರಂಭವಾದಾಗಿನಿಂದ ಬಿಎಲ್‌ಒಗಳು ಎರಡು ಸುತ್ತಿನ ಮನೆ ಮನೆ ಭೇಟಿಯ ಸಮಯದಲ್ಲಿ 7.89 ಕೋಟಿ ಮತದಾರರ ಪೈಕಿ 6.60 ಕೋಟಿ ಅಥವಾ ಕೇ 83.66 ರಷ್ಟು ಗಣತಿ ನಮೂನೆಗಳನ್ನು ಸಂಗ್ರಹಿಸಿದ್ದಾರೆ. 2003ರ ನಂತರ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಗೆ ವಿಪಕ್ಷಗಳಿಂದ ಭಾರಿ ಟೀಕೆ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಲ್ಲದೆ, ಶೇ.1.59 ಮತದಾರರು ಸಾವಿಗೀಡಾಗಿದ್ದು, ಶೇ 2.2 ರಷ್ಟು ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಮತ್ತು ಶೇ 0.73 ರಷ್ಟು ಮತದಾರರ ಹೆಸರು ಹಲವು ಬಾರಿ ದಾಖಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದ್ವೀಪದ ಜನರ ಬದುಕನ್ನು ಪ್ರತಿನಿಧಿಸಲಿ ‘ತೂಗು ಸೇತುವೆ’

ಇದರರ್ಥ ಸುಮಾರು 12.55 ಲಕ್ಷ ಮತದಾರರು ಮೃತಪಟ್ಟಿದ್ದರೆ, 17.37 ಲಕ್ಷ ಮತದಾರರು ಶಾಶ್ವತವಾಗಿ ಬಿಹಾರದಿಂದ ಹೊರಗೆ ಸ್ಥಳಾಂತರಗೊಂಡಿದ್ದಾರೆ ಮತ್ತು ಇನ್ನೂ 5.76 ಲಕ್ಷ ಮತದಾರರು ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಹೆಸರುಗಳನ್ನು ದಾಖಲಿಸಿದ್ದಾರೆ. ಇದು ಕಾನೂನುಬಾಹಿರವಾಗಿದೆ ಎಂದು ಆಯೋಗ ಹೇಳಿದೆ.

ಬಿಹಾರದಿಂದ ತಾತ್ಕಾಲಿಕವಾಗಿ ವಲಸೆ ಹೋಗಿರುವ ಮತದಾರರನ್ನು ಸಂಪರ್ಕಿಸಲು ಪತ್ರಿಕಾ ಜಾಹೀರಾತುಗಳು ಮತ್ತು ನೇರ ಸಂಪರ್ಕದ ಮೂಲಕ ಕೇಂದ್ರೀಕೃತ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಆಗಸ್ಟ್ 1ರಂದು ಪ್ರಕಟಿಸಲಾಗುವ ಕರಡು ಮತದಾರರ ಪಟ್ಟಿಯಲ್ಲಿ ಅವರ ಹೆಸರುಗಳನ್ನು ಸೇರಿಸಲು ಮತ್ತು ಗಣತಿ ನಮೂನೆಗಳನ್ನು ಸಮಯಕ್ಕೆ ಸರಿಯಾಗಿ ಭರ್ತಿ ಮಾಡಲು ಅವರಿಗೆ ತಿಳಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

ತಾತ್ಕಾಲಿಕ ವಲಸೆಯಲ್ಲಿರುವ ಮತದಾರರು ತಮ್ಮ ಮೊಬೈಲ್ ಫೋನ್‌ಗಳನ್ನು ECINet ಅಪ್ಲಿಕೇಶನ್ ಮೂಲಕ ಅಥವಾ https://voters.eci.gov.in ನಲ್ಲಿನ ಆನ್‌ಲೈನ್ ಫಾರ್ಮ್ ಮೂಲಕ ಗಣತಿ ನಮೂನೆಗಳನ್ನು ಆನ್‌ಲೈನ್‌ನಲ್ಲಿ ಸುಲಭವಾಗಿ ಭರ್ತಿ ಮಾಡಬಹುದು. ಅವರು ತಮ್ಮ ಕುಟುಂಬ ಸದಸ್ಯರ ಮೂಲಕ ಅಥವಾ ವಾಟ್ಸ್ ಆ್ಯಪ್ ಅಥವಾ ಅಂತಹುದೇ ಅಪ್ಲಿಕೇಶನ್‌ಗಳು ಸೇರಿದಂತೆ ಯಾವುದೇ ಆನ್‌ಲೈನ್ ವಿಧಾನಗಳ ಮೂಲಕ ಸಂಬಂಧಪಟ್ಟ ಬಿಎಲ್‌ಒಗಳಿಗೆ ತಮ್ಮ ಫಾರ್ಮ್‌ಗಳನ್ನು ಕಳುಹಿಸಬಹುದು ಎಂದು ಆಯೋಗ ಹೇಳಿದೆ.

ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಮತ್ತು ಇಎಫ್‌ಗಳನ್ನು ಭರ್ತಿ ಮಾಡುವುದನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಹೇಳಿದೆ. ಸುಮಾರು ಒಂದು ಲಕ್ಷ ಬಿಎಲ್‌ಗಳು ಶೀಘ್ರದಲ್ಲೇ ತಮ್ಮ ಮೂರನೇ ಸುತ್ತಿನ ಮನೆ ಮನೆ ಭೇಟಿಗಳನ್ನು ಆರಂಭಿಸಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...