ಭಾರತದಲ್ಲಿ 40%ಗೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ತಾರತಮ್ಯ-ಒತ್ತಡ ಎದುರಿಸುತ್ತಿದ್ದಾರೆ: ವರದಿ

Date:

ಭಾರತದ ಪ್ರಮುಖ ವೈದ್ಯಕೀಯ ಕಾಲೇಜುಗಳಲ್ಲಿ ಅಧ್ಯಯನ ಮಾಡುತ್ತಿರುವ ಸುಮಾರು 40%ಗೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಕೆಲಸದ ಸ್ಥಳದಲ್ಲಿ ತಾರತಮ್ಯ ಮತ್ತು ಒತ್ತಡದ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂದು ‘ಅಖಿಲ ಭಾರತ ವೈದ್ಯಕೀಯ ಸಂಘಗಳ ಒಕ್ಕೂಟ’ (FAIMA) ವರದಿ ಹೇಳಿದೆ.

ಒಕ್ಕೂಟವು 28 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಹಲವು ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳನ್ನು ಸಮೀಕ್ಷೆಗೆ ಒಳಪಡಿಸಿದೆ. ಸುಮಾರು 2,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಅಭಿಪ್ರಾಯ ಸಂಗ್ರಹಿಸಿದೆ. ಈ ಪೈಕಿ, ಅರ್ಧದಷ್ಟು ವಿದ್ಯಾರ್ಥಿಗಳು ತಾವು ವೈದ್ಯಕೀಯ ಕಾಲೇಜುಗಳಲ್ಲಿ ಜ್ವಲಂತ ಸಮಸ್ಯೆ ಎದುರಿತ್ತಿದ್ದು, ಕಡಿಮೆ ವೇತನ, ಒತ್ತಡ, ಕಿರಿಕಿರಿಯನ್ನು ಎದುರುತ್ತಿರುವುದಾಗಿ ಹೇಳಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಆತಂಕಕಾರಿಯಾಗಿ, AIIMS, PGI ಚಂಡೀಗಢ, JIPMER ಹಾಗೂ ಇತರ ಸಂಸ್ಥೆಗಳ ವಿದ್ಯಾರ್ಥಿಗಳು ಸೇರಿದಂತೆ 73.9% ವೈದ್ಯಕೀಯ ವಿದ್ಯಾರ್ಥಿಗಳು ಅತಿಯಾದ ಕ್ಲೆರಿಕಲ್ ಕೆಲಸದ ಹೊರೆಗಳನ್ನು ಎದುರಿಸುತ್ತಿದ್ದಾರೆ. ಜೊತೆಗೆ, 55.2% ವಿದ್ಯಾರ್ಥಿಗಳು ಸಿಬ್ಬಂದಿ ಕೊರತೆಯು ತಮ್ಮ ಕಲಿಕೆಗೆ ಅಡ್ಡಿಯಾಗಿದೆ ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ನಿತೀಶ್ ಅಲ್ಲ, ತೇಜಸ್ವಿ ಅಲ್ಲ, ಮೋದಿಯೂ ಅಲ್ಲ- ಬಿಹಾರದ ಭವಿಷ್ಯ ನಿರ್ಧರಿಸಲಿವೆ 11 ಶಕ್ತಿಗಳು

ಹೊಸದಾಗಿ ಸ್ಥಾಪನೆಯಾದ ವೈದ್ಯಕೀಯ ಸಂಸ್ಥೆಗಳಲ್ಲಿ ಮೂಲಸೌಕರ್ಯ ಸಮಸ್ಯೆ, ಅಧ್ಯಾಪಕರ ಕೊರತೆ ಮತ್ತು ಒಟ್ಟಾರೆ ತರಬೇತಿ ಮಾನದಂಡಗಳಲ್ಲಿನ ಗಂಭೀರ ಕೊರತೆಗಳು ಹೆಚ್ಚಾಗಿವೆ. ಕೇವಲ 29.5% ಸಂಸ್ಥೆಗಳು ಮಾತ್ರ ಸ್ಥಿರ ಕೆಲಸದ ಸಮಯವನ್ನು ಒಳಗೊಂಡಿವೆ. ಉಳಿದ ಸಂಸ್ಥೆಗಳಲ್ಲಿ ರಚನಾತ್ಮಕ ಮತ್ತು ಆಡಳಿತಾತ್ಮಕ ಶಿಸ್ತಿನ ಕೊರತೆ ಹೆಚ್ಚಾಗಿದೆ ಎಂದು ಹೇಳಿದೆ.

ಇದಲ್ಲದೆ, ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ 89.4% ವಿದ್ಯಾರ್ಥಿಗಳು ಕಳಪೆ ಮೂಲಸೌಕರ್ಯವು ವೈದ್ಯಕೀಯ ಶಿಕ್ಷಣದ ಗುಣಮಟ್ಟದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ ಎಂದು ಭಾವಿಸಿದ್ದಾರೆ.

FAIMAದ ರಾಷ್ಟ್ರೀಯ ಅಧ್ಯಕ್ಷ ಡಾ. ಅಕ್ಷಯ್ ಡೊಂಗರ್ಡಿವ್ ಅವರ ಪ್ರಕಾರ, ಸಮೀಕ್ಷೆಗೆ ಒಳಪಟ್ಟ ವಿದ್ಯಾರ್ಥಿಗಳಲ್ಲಿ 90.4% ಸರ್ಕಾರಿ ಸಂಸ್ಥೆಗಳಲ್ಲಿ ಅಧ್ಯಯನ ಮಾಡುತ್ತಿದ್ದರೆ, 7.8% ಜನರು ಖಾಸಗಿ ಕಾಲೇಜುಗಳಿಗೆ ಸೇರಿದವರಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...