ಅರೆಸೇನಾ ಪಡೆ ಸಿಬ್ಬಂದಿಗಳ ಆತ್ಮಹತ್ಯೆ ಸಂಖ್ಯೆ ಹೆಚ್ಚಳ; 55,000ಕ್ಕೂ ಅಧಿಕ ಸಿಬ್ಬಂದಿಗಳು ಸ್ವಯಂ ನಿವೃತ್ತಿ

Date:

2020 ರಿಂದ 2024ರ ನಡುವೆ ರಾಷ್ಟ್ರೀಯ ಭದ್ರತಾ ಪಡೆ(ಎನ್ಎಸ್‌ಜಿ) ಮತ್ತು ಅಸ್ಸಾಂ ರೈಫಲ್ಸ್ (ಎಆರ್) ಸೇರಿದಂತೆ ಏಳು ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (ಸಿಎಪಿಎಫ್) ಒಟ್ಟು 730 ಮಂದಿ ಸಿಬ್ಬಂದಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲದೆ, ಇದೇ ಅವಧಿಯಲ್ಲಿ ಬರೋಬ್ಬರಿ 55,555 ಸಿಬ್ಬಂದಿಗಳು ಸ್ವಯಂ ನಿವೃತ್ತಿ ಅಥವಾ ರಾಜೀನಾಮೆ ನೀಡಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.

ಪ್ರಸ್ತುತ ನಡೆಯುತ್ತಿರುವ ಸಂಸತ್‌ ಅಧಿವೇಶನದಲ್ಲಿ ಅರೆಸೇನಾ ಸಿಬ್ಬಂದಿಗಳ ಆತ್ಮಹತ್ಯೆ ಮತ್ತು ಸ್ವಯಂ ನಿವೃತ್ತಿ ಬಗ್ಗೆ ಕಾಂಗ್ರೆಸ್ ಸಂಸದ ಮುಕುಲ್ ವಾಸ್ನಿಕ್ ಪ್ರಶ್ನೆ ಕೇಳಿದ್ದರು. ಅವರ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಉತ್ತರ ನೀಡಿದ್ದಾರೆ. ಅವರು ನೀಡಿರುವ ಅಂಕಿಅಂಶಗಳ ಪ್ರಕಾರ, ಕಳೆದ ಐದು ವರ್ಷಗಳಲ್ಲಿ ಅರೆಸೇನಾ ಪಡೆಗಳ 47,891 ಸಿಬ್ಬಂದಿಗಳು ಸ್ವಯಂ ನಿವೃತ್ತಿ ಪಡೆದಿದ್ದಾರೆ. 7,664 ಸಿಬ್ಬಂದಿಗಳು ರಾಜೀನಾಮೆ ನೀಡಿದ್ದಾರೆ. ಅಲ್ಲದೆ, 730 ಸಿಬ್ಬಂದಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಿಆರ್‌ಪಿಎಫ್‌ನಲ್ಲಿ 2020ರಲ್ಲಿ 7,684, 2021ರಲ್ಲಿ 12,013, 2022ರಲ್ಲಿ 12,371, 2023ರಲ್ಲಿ 12,302 ಹಾಗೂ 2024ರಲ್ಲಿ ಈವರೆಗೆ 11,185 ಸಿಬ್ಬಂದಿಗಳು ಸ್ವಯಂ ನಿವೃತ್ತಿ ಅಥವಾ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, 2020ರಲ್ಲಿ 144 ಮಂದಿ, 2021ರಲ್ಲಿ 157 ಮಂದಿ, 2022ರಲ್ಲಿ 138 ಮಂದಿ, 2023ರಲ್ಲಿ 157 ಮಂದಿ ಹಾಗೂ 2024ರ ಈವರೆಗೆ 134 ಸಿಬ್ಬಂದಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಜ್ಯಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ಉಲ್ಲೇಖಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...