ಹದಗೆಟ್ಟ ರಸ್ತೆ| 600ಕ್ಕೂ ಹೆಚ್ಚು ತ್ರಿಪುರಾ ಬುಡಕಟ್ಟು ಮತದಾರರಿಂದ ಚುನಾವಣೆ ಬಹಿಷ್ಕಾರ

Date:

ತ್ರಿಪುರಾ ಪೂರ್ವ ಲೋಕಸಭಾ ಕ್ಷೇತ್ರದ ಭಾಗವಾದ ಧಲೈ ಜಿಲ್ಲೆಯ ದೂರದ ಬುಡಕಟ್ಟು ಗ್ರಾಮದ 600 ಕ್ಕೂ ಹೆಚ್ಚು ಮತದಾರರು ಶುಕ್ರವಾರ ಚುನಾವಣೆ ಬಹಿಷ್ಕಾರ ಮಾಡಿದ್ದಾರೆ. ಗ್ರಾಮದ 7 ಕಿ.ಮೀ ರಸ್ತೆ ದುರಸ್ತಿಯಾಗದ ಕಾರಣ ಚುನಾವಣೆ ಬಹಿಷ್ಕರಿಸಲಾಗಿದೆ ಎಂದು ಚುನಾವಣಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುಮಾರು 900 ಗ್ರಾಮಸ್ಥರು ತಮ್ಮ ಸಮುದಾಯಕ್ಕೆ ರಸ್ತೆಯು ಅತೀ ಮುಖ್ಯ ಎಂದಿದ್ದಾರೆ. ಹಾಗೆಯೇ ಹಲವಾರು ತಿಂಗಳುಗಳಿಂದ ಈ ರಸ್ತೆಯ ದುರಸ್ತಿಗಾಗಿ ಒತ್ತಾಯಿಸುತ್ತಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಗದಿಯಂತೆ, ತ್ರಿಪುರಾ ಪೂರ್ವ ಲೋಕಸಭಾ ಕ್ಷೇತ್ರದ ರೈಮಾ ವ್ಯಾಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಸದೈ ಮೋಹನ್ ಪಾರಾ ಮತಗಟ್ಟೆಗೆ ಚುನಾವಣಾ ತಂಡವು ತಲುಪಿದೆ” ಎಂದು ಗಂಡಚೆರಾ (ರೈಮಾ ವ್ಯಾಲಿ) ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಅರಿಂದಮ್ ದಾಸ್ ಪಿಟಿಐಗೆ ತಿಳಿಸಿದರು.

ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರು ಪ್ರತಿಭಟಿಸಿದ್ದು ಮತಗಟ್ಟೆಯ ಹೊರಗೆ ನಿಂತಿದ್ದಾರೆ. ಆದರೆ ಮತ ಚಲಾಯಿಸಲು ಮತಗಟ್ಟೆಗೆ ಬಂದಿಲ್ಲ ಎಂದು ಅಧಿಕಾರಿ ಹೇಳಿದರು. ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆಯ ಬಗ್ಗೆಯೂ ದೂರು ನೀಡಿದ್ದಾರೆ. ಈ ಬಗ್ಗೆ ತಿಳಿದ ಬಳಿಕ ಅಧಿಕಾರಿಗಳ ತಂಡ ಸದಾಯಿ ಮೋಹನ್ ಪಾರಾಕ್ಕೆ ಧಾವಿಸಿ ಮತದಾರರ ಮನವೊಲಿಸಿ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ.

ಇದನ್ನು ಓದಿದ್ದೀರಾ?  ರಾಯಚೂರು | ಏಮ್ಸ್ ಮಂಜೂರು ಮಾಡದಿದ್ದರೆ ಚುನಾವಣೆ ಬಹಿಷ್ಕಾರ; ಎಚ್ಚರಿಕೆ

“ಪ್ರಜಾಪ್ರಭುತ್ವದ ಹಬ್ಬದಲ್ಲಿ ಗ್ರಾಮಸ್ಥರು ಸೇರುತ್ತಾರೆ ಎಂದು ನಾವು ಭಾವಿಸುತ್ತೇವೆ ಮತ್ತು ಆಡಳಿತವು ಅವರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸುತ್ತದೆ” ಎಂದು ಚುನಾವಣಾಧಿಕಾರಿ ತಿಳಿಸಿದರು.

“ಧಲೈ ಜಿಲ್ಲೆಯ ಮಲ್ದಪರ (ಸದಾಯಿ ಮೋಹ ಪಾರಾ) ಮತ್ತು ಗುಮತಿ ಜಿಲ್ಲೆಯ ಅಂಪಿಯಲ್ಲಿ ಎರಡು ಮತಗಟ್ಟೆಗಳ ಮತದಾರರು ತಮ್ಮ ರಸ್ತೆ ಮತ್ತು ನೀರಿನ ಪೂರೈಕೆಯ ಬೇಡಿಕೆಯನ್ನು ಪರಿಹರಿಸದ ಕಾರಣ ಮತದಾನ ಮಾಡುವುದಿಲ್ಲ ಎಂಬ ಮಾಹಿತಿ ಲಭಿಸಿದೆ. ಅಧಿಕಾರಿಗಳು ಮತದಾನ ಮಾಡುವಂತೆ ಗ್ರಾಮಸ್ಥರ ಮನವೊಲಿಸಲು ಅಲ್ಲಿಗೆ ಹೋಗಿದೆ” ಎಂದು ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ರತನ್ ಲಾಲ್ ನಾಥ್ ಮಾಧ್ಯಮಗಳಿಗೆ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...