ಉತ್ತರ ಪ್ರದೇಶ | ಬೀದಿ ನಾಯಿಗಳ ದಾಳಿಗೆ ಮಹಿಳೆ ಬಲಿ

Date:

ಸುಮಾರು 30 ವರ್ಷದ ಮಹಿಳೆ ಮೇಲೆ ಬೀದಿ ನಾಯಿಗಳ ಗುಂಪೊಂದು ದಾಳಿ ನಡೆಸಿ ಕೊಂದ ಘಟನೆ ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಅರ್ಜುನ್ ದುಮ್ರಿ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

ಮೃತ ಮಹಿಳೆಯನ್ನು ಮಾಧುರಿ ಎಂದು ಗುರುತಿಸಲಾಗಿದೆ. ಹಾಗೆಯೇ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಹೇಳಲಾಗಿದೆ. ಮಾಧುರಿಯ ಶವವು ಗ್ರಾಮ ಪಂಚಾಯತ್ ಕಟ್ಟಡದ ಬಳಿಯ ಭತ್ತದ ಗದ್ದೆಯಲ್ಲಿ ಬಿದ್ದಿದ್ದು, ಬೀದಿ ನಾಯಿಗಳು ದಾಳಿ ನಡೆಸುತ್ತಿರುವುದು ಕಂದುಬಂದಿದೆ. ಈ ಬಗ್ಗೆ ನನಗೆ ಕರೆ ಬಂದಿತ್ತು ಎಂದು ಹಟಾ ಎಸ್‌ಎಚ್‌ಒ ರಾಮ್‌ಸಹಾಯ್ ಚೌಹಾಣ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಹಾಸನ l ಬೀದಿ ನಾಯಿಗಳ ಹಾವಳಿ: ಬಾಲಕನ ಮೇಲೆ ದಾಳಿ 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಧಾವಿಸಿದ್ದು, ಕೋಲುಗಳಿಂದ ನಾಯಿಗಳನ್ನು ಓಡಿಸಿ ಶವವನ್ನು ವಶಕ್ಕೆ ಪಡೆದಿದ್ದಾರೆ. ಮಹಿಳೆ ಆಗಾಗ್ಗೆ ಗ್ರಾಮದಲ್ಲಿ ಸುತ್ತಾಡುತ್ತಿದ್ದಳು ಮತ್ತು ಸೋಮವಾರ ನಾಪತ್ತೆಯಾಗಿದ್ದಳು. ಆಕೆಯ ಕುಟುಂಬಸ್ಥರು ಹುಡುಕಾಡಿದಾಗ ಆಕೆ ಪತ್ತೆಯಾಗಿಲ್ಲ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಆಕೆಯ ಮೃತದೇಹ ಭತ್ತದ ಗದ್ದೆಯಲ್ಲಿ ಪತ್ತೆಯಾಗಿದೆ. ಆಕೆಯ ದೇಹದ ಕೆಲವು ಭಾಗಗಳನ್ನು ನಾಯಿಗಳು ತಿಂದು ಹಾಕಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಹಾಗೆಯೇ ಈ ಪ್ರದೇಶದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ಒಂದು ವರ್ಷದ ಹಿಂದೆ ಹಸುವನ್ನು ಮತ್ತು ಎಂಟು ತಿಂಗಳ ಹಿಂದೆ ಮೇಕೆಯನ್ನು ನಾಯಿಗಳು ಸೇರಿ ದಾಳಿ ನಡೆಸಿ ಕೊಂದು ಹಾಕಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು ವರದಿಯ ಬಳಿಕ ಸಾವಿಗೆ ನಿಖರವಾಗಿ ಕಾರಣ ತಿಳಿದುಬರಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...