ಸಾವಯವ ಕೃಷಿಗೆ ಹೆಸರುವಾಸಿಯಾದ ಪದ್ಮಶ್ರೀ ಪುರಸ್ಕೃತೆ ಕಮಲಾ ಪೂಜಾರಿ ನಿಧನ

Date:

ಸಾವಯವ ಕೃಷಿಗೆ ಹೆಚ್ಚು ಉತ್ತೇಜನ ನೀಡಿ ಹೆಸರುವಾಸಿಯಾದ ಪದ್ಮಶ್ರೀ ಪುರಸ್ಕೃತೆ ಕಮಲಾ ಪೂಜಾರಿ ಶನಿವಾರ ಬೆಳಗ್ಗೆ 5.45ಕ್ಕೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಕಮಲಾ ಗುರುವಾರದಿಂದ ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

74 ವರ್ಷದ ಕಮಲಾ ಪೂಜಾರಿ ಅವರು ಜ್ವರ ಮತ್ತು ವಯೋಸಹಜ ಕಾಯಿಲೆಯಿಂದ ಮಂಗಳವಾರ ಕೊರಾಪುಟ್ ಜಿಲ್ಲೆಯ ಜೇಪೋರ್‌ನಲ್ಲಿರುವ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಗುರುವಾರ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಕಮಲಾ ಪೂಜಾರಿ ಒಡಿಶಾದ ಪರಾಜ ಬುಡಕಟ್ಟು ಸಮುದಾಯದವರಾಗಿದ್ದಾರೆ. ಒಡಿಶಾದ ಜೇಪೋರ್ ಬ್ಲಾಕ್‌ನ ಪತ್ರಾಪುಟ್ ಗ್ರಾಮದವರಾದ ಪೂಜಾರಿ ಕೃಷಿ ಕ್ಷೇತ್ರಕ್ಕೆ ನೀಡಿದ ಮಹತ್ವದ ಕೊಡುಗೆಗಳಿಗಾಗಿ 2019ರಲ್ಲಿ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದರು. ನೂರಾರು ಸ್ಥಳೀಯ ಭತ್ತದ ತಳಿಗಳನ್ನು ಸಂರಕ್ಷಿಸುವಲ್ಲಿ ಕಮಲಾ ಪೂಜಾರಿ ಹೆಸರುವಾಸಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಎರಡು ವರ್ಷದ ಹಿಂದೆ ಪದ್ಮಶ್ರೀ ಪ್ರಶಸ್ತಿ ಪಡೆದ ಕಲಾವಿದ ಇಂದು ದಿನಗೂಲಿ ನೌಕರ

2002ರಲ್ಲಿ ಕಮಲಾ ಪೂಜಾರಿ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ಈಕ್ವಟರ್ ಇನಿಶಿಯೇಟಿವ್ ಪ್ರಶಸ್ತಿಯನ್ನು ಪಡೆದಿದ್ದಾರೆ.

ಕಮಲಾ ಪೂಜಾರಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಕೋರಾಪುಟ್ ಜಿಲ್ಲಾಧಿಕಾರಿ ಕೀರ್ತಿ ವಾಸನ್ ವಿ, “ಪೂಜಾರಿ ಅವರ ಕುಟುಂಬ ಸದಸ್ಯರಿಗೆ ತಿಳಿಸಲಾಗಿದ್ದು, ಕುಟುಂಬದವರ ಇಚ್ಛೆ ಮತ್ತು ರಾಜ್ಯ ಸರ್ಕಾರದ ನಿರ್ದೇಶನದಂತೆ ಅಂತ್ಯಕ್ರಿಯೆಗೆ ಅಗತ್ಯ ವ್ಯವಸ್ಥೆ ಮಾಡಲಾಗುವುದು” ಎಂದು ತಿಳಿಸಿದ್ದಾರೆ.

“ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರ ಅಂತ್ಯಸಂಸ್ಕಾರಕ್ಕೆ ಯಾವುದೇ ನಿರ್ದಿಷ್ಟ ಮಾರ್ಗಸೂಚಿಯಿಲ್ಲ. ಸರ್ಕಾರದ ನಿರ್ದೇಶನದಂತೆ ವ್ಯವಸ್ಥೆ ಮಾಡಲಾಗುವುದು” ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಕಮಲಾ ಪೂಜಾರಿ ನಿಧನಕ್ಕೆ ಮುಖ್ಯಮಂತ್ರಿ ಮೋಹನ್ ಮಾಝಿ ಸಂತಾಪ ಸೂಚಿಸಿದ್ದಾರೆ. “ಪರಿಸರ ಸಂರಕ್ಷಣೆ ಕ್ಷೇತ್ರದಲ್ಲಿ ಅವರ ಕೊಡುಗೆಯನ್ನು ರಾಜ್ಯ ಮತ್ತು ದೇಶ ಮರೆಯಲು ಸಾಧ್ಯವಿಲ್ಲ. ದೇಶಿ ತಳಿಯ ಭತ್ತ ಹಾಗೂ ಇತರೆ ಧಾನ್ಯಗಳನ್ನು ಸಂರಕ್ಷಿಸುವ ನಿಸ್ವಾರ್ಥ ಕಾರ್ಯ ಶ್ಲಾಘನೀಯ” ಎಂದರು.

ಕಮಲಾ ಪೂಜಾರಿ

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...