ಪಹಲ್ಗಾಮ್ ದಾಳಿ | ಸಂಸತ್ ವಿಶೇಷ ಅಧಿವೇಶನಕ್ಕೆ ಸರ್ಕಾರ ಚಿಂತನೆ

Date:

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ನಿರ್ಣಯ ಅಂಗೀಕರಿಸಲು ಹಾಗೂ ಭಯೋತ್ಪಾದನೆ ವಿರುದ್ಧದ ಕ್ರಮಗಳ ಕುರಿತು ಚರ್ಚಿಸಲು ಸಂಸತ್ ವಿಶೇಷ ಅಧಿವೇಶನ ಕರೆಯಬೇಕೆಂಬ ಆಗ್ರಹಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ, ಮಿತ್ರಪಕ್ಷಗಳು ಮತ್ತು ವಿಪಕ್ಷಗಳ ಸಲಹೆಗಳನ್ನು ಪಡೆಯಲು ಮತ್ತು ಚರ್ಚಿಸಲು ವಿಶೇಷ ಅಧಿವೇಶನ ಕರೆಯಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ.

ಶುಕ್ರವಾರ ಪಹಲ್ಗಾಮ್ ದಾಳಿಯ ಬಗ್ಗೆ ಮಾತನಾಡಿದ್ದ ಹಿರಿಯ ವಕೀಲ, ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್, “ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಇಡೀ ಜಗತ್ತಿಗೆ ಒಗ್ಗಟ್ಟಿನ ಸಂದೇಶ ಸಾರಬೇಕಿತ್ತು. ಅದಕ್ಕಾಗಿ, ಸಂಸತ್ತಿನ ವಿಶೇಷ ಅಧಿವೇಶನ ಕರೆಯಬೇಕು ಮತ್ತು ದೇಶದ ಭಾವನೆಯನ್ನು ವಿಶ್ವದ ಮುಂದೆ ವ್ಯಕ್ತಪಡಿಸಲು ಸಂಸತ್ತಿನಲ್ಲಿ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಬೇಕು” ಎಂದು ಒತ್ತಾಯಿಸಿದ್ದರು.

“ಸರ್ಕಾರ ಮತ್ತು ವಿಪಕ್ಷಗಳ ಸಂಸದರ ನಿಯೋಗಗಳನ್ನು ರಚಿಸಿ, ಆ ನಿಯೋಗಗಳನ್ನು ವಿವಿಧ ದೇಶಗಳಿಗೆ ಕಳಿಸಿ, ಪಾಕಿಸ್ತಾನದ ಮೇಲೆ ರಾಜತಾಂತ್ರಿಕ ಒತ್ತಡ ಹೇರಬೇಕಿದೆ. ಅಮೆರಿಕ ನಿರ್ಬಂಧ ವಿಧಿಸಿರುವ ರೀತಿಯಲ್ಲಿ ಪಾಕಿಸ್ತಾನಕ್ಕೆ ಭಾರತ ನಿರ್ಬಂಧ ಹೇರಬೇಕು. ಜೊತೆಗೆ, ಪಾಕಿಸ್ತಾನನೊಂದಿಗೆ ವ್ಯಾಪಾರ ವ್ಯವಹಾರ ಇರುವ ಎಲ್ಲ ಪ್ರಮುಖ ರಾಷ್ಟ್ರಗಳಿಗೂ ನಮ್ಮ ಮಾರುಕಟ್ಟೆಗೆ ಬರಲು ಸಾಧ್ಯವಿಲ್ಲ ಎಂಬ ಸಂದೇಶ ರವಾನಿಸಬೇಕಿದೆ” ಎಂದು ಆಗ್ರಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಬಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕರು, ಸರ್ಕಾರ ಈ ಬಗ್ಗೆ ಚಿಂತನೆ ನಡೆಸಲಿದೆ ಎಂದಿದ್ದಾರೆ. “ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾಮೂಹಿಕ ಏಕತೆಯನ್ನು ಬಯಸುತ್ತಾರೆ. ಅವರು ಸಾಮೂಹಿಕ ಏಕತೆಯೊಂದಿಗೆ ರಾಷ್ಟ್ರಕ್ಕಾಗಿ ಕಾರ್ಯನಿರ್ವಹಿಸುವ ಗುರಿ ಹೊಂದಿದ್ದಾರೆ. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಬಿಕ್ಕಟ್ಟಿನ ಕಾರಣದಿಂದಾಗಿ, ಸರ್ಕಾರ ಇದನ್ನು ಪರಿಗಣಿಸುವ ಸಾಧ್ಯತೆ ಇದೆ” ಎಂದು ಹೇಳಿರುವುದಾಗಿ ವರದಿಯಾಗಿದೆ.

ಸರ್ಕಾರವು ವಿಶೇಷ ಅಧಿವೇಶನ ಕರೆಯಲು ಶೀಘ್ರವೇ ದಿನಾಂಕ ನಿಗದಿ ಮಾಡಲಾಗಿದೆ. ರಾಷ್ಟ್ರಪತಿಗಳ ಅನುಮೋದನೆ ಪಡೆದು, ಅಧಿವೇಶನ ಕರೆಯಲಿದೆ ಎಂದು ಬಿಜೆಪಿ ಹೇಳಿರುವುದಾಗಿ ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...