ಪಹಲ್ಗಾಮ್‌ ದಾಳಿ | ಭದ್ರತಾ ಲೋಪ ಪ್ರಶ್ನಿಸಿದ ಪತ್ರಕರ್ತನ ಮೇಲೆ ಬಿಜೆಪಿ ಕಾರ್ಯಕರ್ತರ ಹಲ್ಲೆ

Date:

ಪಹಲ್ಗಾಮ್ ದಾಳಿಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯ ವರದಿಗೆ ತೆರಳಿದ್ದ ಪತ್ರಕರ್ತರೊಬ್ಬರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಭದ್ರತಾ ಲೋಪದ ಬಗ್ಗೆ ಪ್ರಶ್ನಿಸಿದ್ದಕ್ಕೆ ಪತ್ರಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ.

ದೈನಿಕ್ ಜಾಗರಣ್ ಪತ್ರಿಕೆಯ ವರದಿಗಾರ ರಾಕೇಶ್ ಶರ್ಮಾ ಮತ್ತು ಇತರ ಪತ್ರಕರ್ತರು ವರದಿಗಾಗಿ ಪ್ರತಿಭಟನಾ ಸ್ಥಳಕ್ಕೆ ತೆರಳಿದ್ದರು. ಈ ವೇಳೆ, “ಜಮ್ಮು-ಕಾಶ್ಮೀರದ ಭದ್ರತಾ ವ್ಯವಸ್ಥೆಯು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿದೆ. ಮಂಗಳವಾರ ನಡೆದ ಭಯೋತ್ಪಾದಕ ದಾಳಿಗೆ ಭದ್ರತಾ ಲೋಪಗಳೂ ಕಾರಣವಲ್ಲವೇ. ಉಗ್ರಗಾಮಿಗಳ ಚಲನವಲನ ಮತ್ತು ಗಡಿಯಾಚೆಯಿಂದ ಒಳನುಸುಳುವಿಕೆಯನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆಯೇ” ಎಂದು ರೇಕೇಶ್‌ ಶರ್ಮಾ ಪ್ರಶ್ನಿಸಿದ್ದಾರೆ. ಅವರ ಪ್ರಶ್ನೆಯಿಂದ ಬಿಜೆಪಿ ಶಾಸಕರು ಸೇರಿದಂತೆ ಪಕ್ಷದ ಕಾರ್ಯಕರ್ತರು ಕುಪಿತಕೊಂಡಿದ್ದಾರೆ. ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.

ಹಿಮಾನ್ಶು ಶರ್ಮಾ, ರವೀಂದರ್ ಸಿಂಗ್, ಅಶ್ವನಿ ಶರ್ಮಾ, ಮಂಜಿತ್ ಸಿಂಗ್, ಟೋನಿ ಮತ್ತು ಪರ್ವೀನ್ ಚುನಾ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಬಿಜೆಪಿ ಶಾಸಕರಾದ ದೇವಿಂದರ್ ಮಾನ್ಯಲ್, ರಾಜೀವ್ ಜಸ್ರೋಟಿಯಾ ಮತ್ತು ಭರತ್ ಭೂಷಣ್ ಕೂಡ ಹಾಜರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪತ್ರಕರ್ತರು ಪ್ರಶ್ನೆ ಕೇಳಿದ್ದಕ್ಕಾಗಿ, ಅವರನ್ನು ‘ಪ್ರತ್ಯೇಕವಾದಿಗಳು’ ಎಂದು ಬಿಜೆಪಿ ಮುಖಂಡ ಹಿಮಾನ್ಶು ಶರ್ಮಾ ಬಣ್ಣಿಸಿದ್ದಾರೆ.

ಹಲ್ಲೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಪತ್ರಕರ್ತರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಖಲಿಸಿಕೊಂಡಿದ್ದಾರೆ. ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಪಕ್ಷವು ಕ್ರಮ ಕೈಗೊಳ್ಳುವವರೆಗೂ ಪಕ್ಷದ ಯಾವುದೇ ಕಾರ್ಯಕ್ರಮವನ್ನು ವರದಿ ಮಾಡುವುದಿಲ್ಲ. ಬಹಿಷ್ಕರಿಸುತ್ತೇವೆ ಎಂದು ಜಮ್ಮು-ಕಾಶ್ಮೀರ ಪತ್ರಕರ್ತರು ಘೋಷಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...