ಪಹಲ್ಗಾಮ್ ದಾಳಿ | ಕಾಶ್ಮೀರ ಬುಕಿಂಗ್ ರದ್ದು ಮಾಡಿ ಹಿಮಾಚಲಕ್ಕೆ ತಿರುಗಿದ ಪ್ರವಾಸಿಗರು

Date:

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 28 ಮಂದಿ ಸಾವನ್ನಪ್ಪಿದ ಬಳಿಕ, ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳುವ ಪ್ರವಾಸಿಗರ ಸಂಖ್ಯೆ ತೀವ್ರ ಕುಸಿದಿದೆ. ಕಾಶ್ಮೀರಕ್ಕೆ ತೆರಳಲು ಟಿಕೆಟ್‌ ಬುಕ್ ಮಾಡಿಕೊಂಡಿದ್ದ ಪ್ರವಾಸಿಗರು, ಬುಂಕಿಂಗ್‌ಅನ್ನು ರದ್ದುಗೊಳಿಸುತ್ತಿದ್ದಾರೆ. ತಮ್ಮ ಪ್ರವಾಸವನ್ನು ಹಿಮಾಚಲ ಪ್ರದೇಶಕ್ಕೆ ಸ್ಥಳಾಂತರಿಸಿದ್ದಾರೆ. ಹಿಮಾಚಲಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ.

ದೇಶೀಯ ಮತ್ತು ಅಂತರರಾಷ್ಟ್ರೀಯ ಬುಕಿಂಗ್‌ಗಳಲ್ಲಿ ಸರಿಸುಮಾರು 15-20% ಪ್ರವಾಸಿಗರು ಕಾಶ್ಮೀರ ಪ್ರವಾಸವನ್ನು ಮನಾಲಿ, ಶಿಮ್ಲಾ ಹಾಗೂ ಧರ್ಮಶಾಲಾ ಸೇರಿದಂತೆ ಹಿಮಾಚಲದ ಜನಪ್ರಿಯ ತಾಣಗಳಿಗೆ ಬದಲಾಯಿಸಿದ್ದಾರೆ. ಆದಾಗ್ಯೂ, ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮತ್ತು ಹಗೆತನದ ನಡುವೆ ಪ್ರವಾಸಿಗರು ‘ಕಾದು ನೋಡುವ’ ನೀತಿಯನ್ನು ಅನುಸರಿಸುತ್ತಿದ್ದಾರೆ. ಹೀಗಾಗಿ, ಕಾಶ್ಮೀರಕ್ಕೆ ಪ್ರವಾಸಿಗರ ಸಂಖ್ಯೆಯ ಶೀಘ್ರವೇ ಹೆಚ್ಚುವ ನಿರೀಕ್ಷೆಗಳಿಲ್ಲ.

ಪೆಹಲ್ಗಾಮ್ ಭಯೋತ್ಪಾದನಾ ದಾಳಿಯ ನಂತರ, ಪ್ರವಾಸ ನಿರ್ವಾಹಕರು, ಪ್ರವಾಸಿಗರು ಹಿಮಾಚಲ ಮತ್ತು ಉತ್ತರಾಖಂಡ ಪ್ರವಾಸ ಕರಿತು ಬುಕಿಂಗ್‌ಗಾಗಿ ವಿಚಾರಿಸುತ್ತಿದ್ದಾರೆ. ಪ್ರವಾಸಿಗರ ಸಂಖ್ಯೆ ಗಮನಾರ್ಹವಾಗಿ ಏರಿಕೆಯಾಗುತ್ತಿದೆ ಎಂದು ಕಾಂಗ್ರಾದ ಹೋಟೆಲ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್‌ನ ಅಧ್ಯಕ್ಷ ಅಶ್ವನಿ ಬಂಬಾ ಹೇಳಿರುವುದಾಗಿ ‘ಟಿಎನ್‌ಐಇ’ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ, “ವಾಸ್ತವವಾಗಿ ಕೇವಲ 15-20% ಪ್ರವಾಸಿಗರು ಮಾತ್ರ ಜಮ್ಮು ಮತ್ತು ಕಾಶ್ಮೀರದಿಂದ ಹಿಮಾಚಲಕ್ಕೆ ತಮ್ಮ ಪ್ರವಾಸವನ್ನು ಬದಲಿಸಿದ್ದಾರೆ. ಹೆಚ್ಚಿನವರು ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣ ಈ ಭಾಗದ ಪ್ರವಾಸಕ್ಕೆ ತೆರಳಲು ಹಿಂದೆ ಸರಿದಿದ್ದಾರೆ. ಗುಜರಾತ್ ಮತ್ತು ಇತರ ರಾಜ್ಯಗಳಿಂದ ಪ್ರಯಾಣಿಸುವ ಪ್ರವಾಸಿಗರ ಬುಕಿಂಗ್‌ಗಳನ್ನು ಬದಲಾಯಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ನಿಜಕ್ಕೂ ಜಾತಿಗಣತಿ ನಡೆಸುತ್ತದಾ ಬಿಜೆಪಿ; ಸಿದ್ಧವಿರುವ ವರದಿ ಜಾರಿ ಮಾಡದೆ ವಿಳಂಬ ಮಾಡುತ್ತಿರುವುದೇಕೆ ಕಾಂಗ್ರೆಸ್‌?

“ಎಲ್ಲರ ಮನಸ್ಸಿನಲ್ಲಿ ಒಂದೇ ಒಂದು ಪ್ರಶ್ನೆ ಇದೆ: ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ಏನು ಮಾಡುತ್ತದೆ ಎಂಬ ವಿಚಾರದಲ್ಲಿ ಸಾಮಾನ್ಯ ಜನರು ಎದುರು ನೋಡುತ್ತಿದ್ದಾರೆ. ದುರದೃಷ್ಟಕರ ಘಟನೆಯ ನಂತರ ಕಾಶ್ಮೀರ ಕಣಿವೆಯಿಂದ ಪ್ರವಾಸಿಗರು ಬೇರೆಡೆಗೆ ತಿರುಗಿದ ಕಾರಣ, ಅಲ್ಲಿನ ಬುಕಿಂಗ್‌ಗಳ ಸಂಖ್ಯೆ ತುಂಬಾ ಕಡಿಮೆಯಾಗಿದೆ. ಮೇ ತಿಂಗಳಲ್ಲಿ ಪ್ರವಾಸಿಗರ ಸಂಖ್ಯೆ ಸಾಮಾನ್ಯಕ್ಕಿಂತ 40% ಹೆಚ್ಚಾಗುತ್ತಿತ್ತು. ಆದರೆ, ಈ ಬಾರಿ ತೀವ್ರ ಕುಸಿತವಾಗಿದೆ. ಹೀಗಾಗಿ, ಹಿಮಾಚಲ ಪ್ರದೇಶದಲ್ಲಿ ಪ್ರವಾಸಿಗರ ಸಂಖ್ಯೆ 60-70% ಹೆಚ್ಚಾಗಿದೆ” ಎಂದು ಹಿಮಾಚಲ ಪ್ರದೇಶದ ಪ್ರವಾಸೋದ್ಯಮ ಪಾಲುದಾರರ ಸಂಘದ ಅಧ್ಯಕ್ಷ ಮೊಹಿಂದರ್ ಸೇಠ್ ಹೇಳಿದ್ದಾರೆ.

ಪ್ರವಾಸೋದ್ಯಮವು ಹಿಮಾಚಲ ಪ್ರದೇಶದ ಒಟ್ಟು ಜಿಡಿಪಿಗೆ 7.78% ಕೊಡುಗೆ ನೀಡುತ್ತದೆ. 2024-25ರ ಹಿಮಾಚಲ ಪ್ರದೇಶದ ಆರ್ಥಿಕ ಸಮೀಕ್ಷೆಯ ವರದಿಯ ಪ್ರಕಾರ, 2021ರಲ್ಲಿ 56.32 ಲಕ್ಷ ಇದ್ದ ದೇಶೀಯ ಪ್ರವಾಸಿಗರ ಸಂಖ್ಯೆ 2024ರಲ್ಲಿ 1.8 ಕೋಟಿಗೆ ಏರಿದೆ. 2021ರಲ್ಲಿ 5,000 ಇದ್ದ ವಿದೇಶಿ ಪ್ರವಾಸಿಗರ ಸಂಖ್ಯೆ 2024ರಲ್ಲಿ 83,000ಕ್ಕೆ ಏರಿಕೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...