ಉಗ್ರನ ರೈಫಲ್‌ ಕಸಿದುಕೊಳ್ಳಲು ಹೋಗಿ ಗುಂಡೇಟಿಗೆ ಸಾವಿಗೀಡಾದ ಕುದುರೆ ರೈಡರ್‌ ಸೈಯದ್ ಹುಸೇನ್

Date:

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಗುಂಡಿನ ದಾಳಿಯಲ್ಲಿ ಸ್ಥಳೀಯ ಕುದುರೆ ರೈಡರ್‌ ಒಬ್ಬರು ಮೃತಪಟ್ಟಿದ್ದಾರೆ.

ಸೈಯದ್ ಆದಿಲ್ ಹುಸೇನ್ ಶಾ ಮೃತಪಟ್ಟ ವ್ಯಕ್ತಿ. ಪ್ರವಾಸಿಗರ ಮೇಲೆ ದಾಳಿ ನಡೆಸುತ್ತಿದ್ದಾಗ ಸೈಯದ್‌ ಧೈರ್ಯ ಮಾಡಿ ಓರ್ವ ಉಗ್ರನಿಂದ ರೈಫಲ್‌ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಸೈಯದ್‌ ಮೇಲೆ ಗುಂಡು ಹಾರಿಸಿದ್ದಾರೆ.

ಸೈಯದ್‌ ಆದಿಲ್‌ ಪಹಲ್ಗಾಮ್‌ ಕಾರು ಪಾರ್ಕಿಂಗ್ ಸ್ಥಳದಿಂದ ಕುದುರೆಯ ಮೇಲೆ ಪ್ರವಾಸಿಗರನ್ನು ಬೈಸರನ್‌ಗೆ ಕರೆದುಕೊಂಡು ಬರುವ ಕೆಲಸ ಮಾಡುತ್ತಿದ್ದರು. ನರಮೇಧದಲ್ಲಿ ಸೈಯದ್‌ ಜೊತೆ 25 ಪುರುಷ ಪ್ರವಾಸಿಗರನ್ನು ಉಗ್ರರು ಹತ್ಯೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಾಶ್ಮೀರ ದಾಳಿ: ಮೃತದೇಹ ಗುರುತಿಸಲು ಕನ್ನಡಿಗರಿಗೆ ಸಚಿವ ಸಂತೋಷ್‌ ಲಾಡ್‌ ನೆರವು

ಕುಟುಂಬದ ಏಕೈಕ ಜೀವನಾಧಾರ ಸೈಯದ್‌ ಆಗಿದ್ದರು. ಇವರು ವೃದ್ಧ ಪೋಷಕರು, ಹೆಂಡತಿ ಮತ್ತು ಮಕ್ಕಳನ್ನು ಅಗಲಿದ್ದಾರೆ.

ಸೈಯದ್‌ ತಂದೆ ಹೈದರ್ ಸುದ್ದಿ ಸಂಸ್ಥೆಯ ಜೊತೆ ಮಾತನಾಡಿ, ನನ್ನ ಮಗ ನಿನ್ನೆ ಕೆಲಸಕ್ಕೆಂದು ಪಹಲ್ಗಾಮ್‌ಗೆ ಹೋಗಿದ್ದ. ಮಧ್ಯಾಹ್ನ 3 ಗಂಟೆ ಸುಮಾರಿಗೆ ದಾಳಿಯ ಬಗ್ಗೆ ನಮಗೆ ತಿಳಿಯಿತು. ನಾವು ಅವನಿಗೆ ಕರೆ ಮಾಡಿದೆವು, ಆದರೆ ಅವನ ಫೋನ್ ಸ್ವಿಚ್ ಆಫ್ ಆಗಿತ್ತು. ನಂತರ ಸಂಜೆ 4.40ಕ್ಕೆ ಅವನ ಫೋನ್ ಆನ್ ಆಯ್ತು. ಆದರೆ ಯಾರೂ ಉತ್ತರಿಸಲಿಲ್ಲ. ನಾವು ಪೊಲೀಸ್ ಠಾಣೆಗೆ ಧಾವಿಸಿದೆವು. ಆಗ ಅವನು ಸಾವಿಗೀಡಾಗಿದ್ದು ಗೊತ್ತಾಯಿತು ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...