ಭಯೋತ್ಪಾದಕ ನೆಲೆಗಳ ಮೇಲೆ ದಾಳಿ, ನಾಗರಿಕರು ಸಾವನಪ್ಪಿಲ್ಲ: ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ

Date:

ದೇಶದಲ್ಲಿ ಕೋಮು ದಂಗೆ ಸೃಷ್ಟಿಸುವ ಉದ್ದೇಶದಿಂದಲೇ ಪಹಲ್ಗಾಮ್ ದಾಳಿ ನಡೆದಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಸ್ರಿ ಹೇಳಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ವಿಕ್ರಂ ಮಿಸ್ರಿ ಈ ಮಾಹಿತಿ ನೀಡಿದರು.

ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ವಿಕ್ರಮ್ ಮಿಸ್ರಿ, “ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಯಾವುದೇ ಪಾಕಿಸ್ತಾನದ ನಾಗರಿಕರು ಸಾವನ್ನಪ್ಪಿಲ್ಲ” ಎಂದು ಸ್ಪಷ್ಟಪಡಿಸಿದರು.

ಇದನ್ನು ಓದಿದ್ದೀರಾ? ಆಪರೇಷನ್ ಸಿಂಧೂರ | ಸೇನೆಯೊಂದಿಗೆ ನಾವಿದ್ದೇವೆ ಎಂದ ಕಾಂಗ್ರೆಸ್, ಶಿವಸೇನೆ, ಆರ್‌ಜೆಡಿ ನಾಯಕರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಹಲ್ಗಾಮ್ ದಾಳಿಯು ಭಾರತಕ್ಕೆ ಸಂದೇಶ ನೀಡುವ ಉದ್ದೇಶವನ್ನು ಹೊಂದಿಲ್ಲ. ಬದಲಾಗಿ ಜಮ್ಮು ಕಾಶ್ಮೀರದ ಆರ್ಥಿಕತೆಯನ್ನು ಗುರಿಯಾಗಿಸಿ ಮಾಡಿದ ದಾಳಿಯಾಗಿದೆ. ದೇಶದಲ್ಲಿ ಕೋಮು ದಂಗೆಯನ್ನು ಸೃಷ್ಟಿಸುವ ಉದ್ದೇಶದಿಂದ ಈ ದಾಳಿ ನಡೆಸಲಾಗಿದೆ. ಆದರೆ ಈ ಪ್ರಯತ್ನ ವಿಫಲವಾಗಿದೆ” ಎಂದು ಹೇಳಿದರು.

“ಆಪರೇಷನ್ ಸಿಂಧೂರ ಕೇವಲ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿ. ಯಾವುದೇ ಪಾಕಿಸ್ತಾನ ನಾಗರಿಕರ ಮೇಲೆ ದಾಳಿ ನಡೆದಿಲ್ಲ. ಪಹಲ್ಗಾಮ್‌ನಲ್ಲಿ ನಡೆದ ದಾಳಿಯಲ್ಲಿ ಅಮಾಯಕ ಭಾರತೀಯರ ಜೀವ ಬಲಿ ಪಡೆದ ಉಗ್ರರ ವಿರುದ್ಧ ಮುಂದಿನ ದಿನಗಳಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು” ಎಂದೂ ಮಿಸ್ರಿ ಹೇಳಿದ್ದಾರೆ.

ಆಪರೇಷನ್‌ ಸಿಂಧೂರದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ನೀಡಿದರು. “ಇದು ಪಾಕಿಸ್ತಾನಕ್ಕೆ ನಾವು ನೀಡಿದ ಸಂದೇಶ. ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಶಿಬಿರಗಳು ಭಾರತ ವಿರುದ್ಧ ಚಟುವಟಿಕೆ ನಡೆಸುತ್ತಿದ್ದು, ಇದರ ಮೇಲೆ ಭಾರತೀಯ ಸೇನೆ ತೀವ್ರ ನಿಗಾ ಇರಿಸಿದೆ” ಎಂದು ತಿಳಿಸಿದ್ದಾರೆ.

“ಪಹಲ್ಗಾಮ್‌ ದಾಳಿಯ ಬಳಿಕ ಒಟ್ಟು 9 ಭಯೋತ್ಪಾದಕರ ನೆಲೆ ಮೇಲೆ ಕ್ಷಿಪಣಿ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಭಯೋತ್ಪಾದಕ ಸಂಘಟನೆಗಳ ಪ್ರಮುಖ ಕಚೇರಿಗಳು ಸಂಪೂರ್ಣವಾಗಿ ಧ್ವಂಸಗೊಂಡಿದೆ” ಎಂದು ಕರ್ನಲ್‌ ಸೋಫಿಯಾ ಖುರೇಷಿ ಮಾಹಿತಿ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...