ಪಹಲ್ಗಾಮ್ ದಾಳಿ | ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಘೋಷಿಸಿದ ಜಮ್ಮು ಕಾಶ್ಮೀರ ಸರ್ಕಾರ

Date:

ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಜಮ್ಮು ಕಾಶ್ಮೀರ ಸರ್ಕಾರವು ತಲಾ ಹತ್ತು ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ. ಈ ಭಯೋತ್ಪಾದಕ ದಾಳಿಯಿಂದ 28 ಪ್ರವಾಸಿಗರು ಮೃತಪಟ್ಟಿದ್ದಾರೆ.

ಪರಿಹಾರದ ಬಗ್ಗೆ ಘೋಷಣೆ ಮಾಡಿದ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, “ನಿನ್ನೆ ಪಹಲ್ಗಾಮ್‌ನಲ್ಲಿ ನಡೆದ ಹೇಯ ಭಯೋತ್ಪಾದಕ ದಾಳಿಯಿಂದ ತೀವ್ರ ಆಘಾತ ಮತ್ತು ದುಃಖವಾಗಿದೆ. ಅಮಾಯಕ ನಾಗರಿಕರ ವಿರುದ್ಧದ ಈ ಅನಾಗರಿಕ ಮತ್ತು ಅರ್ಥಹೀನ ಕ್ರೌರ್ಯದ ಕೃತ್ಯಕ್ಕೆ ನಮ್ಮ ಸಮಾಜದಲ್ಲಿ ಯಾವುದೇ ಸ್ಥಾನವಿಲ್ಲ. ನಾವು ಈ ದಾಳಿಯನ್ನು ಪ್ರಬಲವಾಗಿ ಖಂಡಿಸುತ್ತೇವೆ. ಮೃತರಾದ ಅಮೂಲ್ಯ ಜೀವಗಳಿಗೆ ನಾವು ಶೋಕ ವ್ಯಕ್ತಪಡಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಪಹಲ್ಗಾಮ್ ದಾಳಿ | ಮೂವರು ಭಯೋತ್ಪಾದಕರ ರೇಖಾಚಿತ್ರ ಬಿಡುಗಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರೀತಿಪಾತ್ರರ ನಷ್ಟಕ್ಕೆ ನಾವು ಹಣ ನೀಡಿ ಸರಿದೂಗಿಸಲು ಎಂದಿಗೂ ಸಾಧ್ಯವಿಲ್ಲ. ಆದರೆ ಆದರೆ ಬೆಂಬಲ ಮತ್ತು ಒಗ್ಗಟ್ಟಿನ ಸಂಕೇತವಾಗಿ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸುತ್ತೇವೆ” ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಇನ್ನು ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ. ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 1 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಘೋಷಿಸಿದರು. ಮೃತದೇಹಗಳನ್ನು ಗೌರವಯುತವಾಗಿ ಅವರ ಮನೆಗಳಿಗೆ ಸಾಗಿಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದೂ ಅಬ್ದುಲ್ಲಾ ಹೇಳಿದರು.

“ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಲಾಗುತ್ತಿದೆ. ದುಃಖಿತ ಕುಟುಂಬಗಳಿಗೆ ಸಂತಾಪಗಳು. ನಿಮ್ಮ ದುಃಖದಲ್ಲಿ ನಾವು ಭಾಗಿಯಾಗುತ್ತೇವೆ. ಈ ಕರಾಳ ಸಮಯದಲ್ಲಿ ನಿಮ್ಮೊಂದಿಗೆ ನಿಲ್ಲುತ್ತೇವೆ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...