ಪಹಲ್ಗಾಮ್ ಉಗ್ರರ ದಾಳಿ; ಕನ್ನಡಿಗರ ಪಾರ್ಥಿವ ಶರೀರ ರಾಜ್ಯಕ್ಕೆ ತರಲು ವ್ಯವಸ್ಥೆ

Date:

ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಡೆದ ಉಗ್ರರ ದಾಳಿಗೆ ಬಲಿಯಾದ ಸಂತ್ರಸ್ತರ ರಕ್ಷಣೆಗೆ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಧಾರವಾಡ ಜಿಲ್ಲಾ ಉಸ್ತುವಾರಿ‌ ಸಚಿವ ಸಂತೋಷ್ ಲಾಡ್ ಹೋಗಿದ್ದು, ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ಶಾ ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಜೊತೆಗೆ ಮಾತನಾಡಿ, ರಕ್ಷಣಾ ಕಾರ್ಯದ ಬಗ್ಗೆ ವಿವರಣೆ ನೀಡಿದ್ದಾರೆ.

ಉಗ್ರರ ದಾಳಿಯಲ್ಲಿ ಮೃತರಾದವರ ಪಾರ್ಥಿವ ಶರೀರವನ್ನು ಶ್ರೀನಗರದಲ್ಲಿ ಇರಿಸಲಾಗಿದ್ದು, ಮೃತದೇಹ ಗುರುತಿಸಲು ಸಂಬಂಧಿಕರಿಗೆ ಸಹಾಯ ಮಾಡಿದ್ದಾರೆ. ಕರ್ನಾಟಕದ ಪ್ರವಾಸಿಗರ ಪಾರ್ಥಿವ ಶರೀರಗಳನ್ನು ರಾಜ್ಯಕ್ಕೆ ತರಲು ಹಾಗೂ ಅವರ ಕುಟುಂಬಗಳನ್ನು ಸಹ ನಾಡಿಗೆ ಕರೆತರುವ ಮತ್ತು ಕಾಶ್ಮೀರದ ವಿವಿಧೆಡೆ ಸಿಲುಕಿರುವ ರಾಜ್ಯದ ಪ್ರವಾಸಿಗರನ್ನು ಸಹ ಮರಳಿ ನಾಡಿಗೆ ಕರೆತರುವ ವ್ಯವಸ್ಥೆಗಳನ್ನು ರಾಜ್ಯ ಸರ್ಕಾರದ ವತಿಯಿಂದ ವ್ಯವಸ್ಥೆ ನಡೆಯುತ್ತಿದೆ.

ದಾಳಿಯಲ್ಲಿ ಬಲಿಯಾದ ಶಿವಮೊಗ್ಗದ ಮಂಜುನಾಥ್ ಪತ್ನಿ ಪಲ್ಲವಿ ಹಾಗೂ ಪುತ್ರನನ್ನು ಮತ್ತು ಬೆಂಗಳೂರಿನ ಭರತ್ ಭೂಷಣ್ ಪತ್ನಿ ಸುಜಾತ ಅವರನ್ನು ಭೇಟಿ ಮಾಡಿ ಸಂತೋಷ್ ಲಾಡ್ ಸಂತೈಸಿದ್ದಾರೆ. ಮೃತ ಮಂಜುನಾಥ್ ಪಾರ್ಥಿವ ಶರೀರವನ್ನು ನೇರವಾಗಿ ಶಿವಮೊಗ್ಗಕ್ಕೆ ಹಾಗೂ ಭರತ್ ಭೂಷಣ್ ಪಾರ್ಥಿವ ಶರೀರವನ್ನು, ಮಧುಸೂದನ್ ರಾವ್ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ರವಾನಿಸುವ ವ್ಯವಸ್ಥೆ ಮಾಡಿದ್ದಾರೆ. ದಾಳಿಯಲ್ಲಿ ಇಬ್ಬರು ವಿದೇಶಿಗರು ಸೇರಿದಂತೆ ಸುಮಾರು 26 ಪ್ರವಾಸಿಗರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾಳಿಯಲ್ಲಿ ಹಲವರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದು, ಅವರನ್ನು ಸಹ ರಾಜ್ಯಕ್ಕೆ ಕರೆತರುವ ವ್ಯವಸ್ಥೆ ನಡೆಯುತ್ತಿದೆ. ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ವ್ಯವಸ್ಥೆಯಾಗಿದೆ ಎಂದು ಸಚಿವ ಸಂತೋಷ್ ಲಾಡ್ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...