ಪಹಲ್ಗಾಮ್ ದುರಂತ; ವಿಶೇಷ ಅಧಿವೇಶನಕ್ಕೆ ಇಂಡಿಯಾ ಬಣ ಆಗ್ರಹ

Date:

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ, ಆಪರೇಷನ್ ಸಿಂಧೂರ್ ಮತ್ತು ನಂತರದ ಬೆಳವಣಿಗೆಗಳು, ಭಾರತ-ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆ ಸಂಬಂಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆಗಳ ಕುರಿತು ಚರ್ಚಿಸಲು ಸಂಸತ್ತಿನ ವಿಶೇಷ ಅಧಿವೇಶ ಕರೆಯುವಂತೆ ಆಗ್ರಹಿಸಿ ಇಂಡಿಯಾ ಬಣದ ನಾಯಕರು ಆಗ್ರಹಿಸಿದ್ದಾರೆ.

ಇಂದು ದೆಹಲಿಯಲ್ಲಿ ಸಭೆ ನಡೆದಿದ್ದು, ಇಂಡಿಯಾ ಬಣದ ಪಕ್ಷಗಳು ತಮ್ಮ ಬೇಡಿಕೆಗಳ ಕುರಿತು ಸರ್ಕಾರಕ್ಕೆ ಒಗ್ಗಟ್ಟಿನ ಸಂದೇಶ ರವಾನಿಸಿವೆ. ವಿಶೇಷ ಅಧಿವೇಶನಕ್ಕೆ ಒತ್ತಾಯಿಸಿ ಪ್ರತಿಪಕ್ಷಗಳು ಮೋದಿಯವರಿಗೆ ಪತ್ರ ಬರೆದಿವೆ. ಮಾಧ್ಯಮಗಳ ಮೂಲಕ ಪತ್ರವನ್ನು ರವಾನಿಸಿವೆ. ಬಹುಪಕ್ಷ ನಿಯೋಗಗಳು ವಿದೇಶಗಳಿಗೆ ಮಾಹಿತಿ ನೀಡುತ್ತಿರುವ ಬಗ್ಗೆ ನಾಯಕರು ಪ್ರಶ್ನೆಗಳನ್ನು ಎತ್ತಿದ್ದಾರೆ. ಆದರೆ ಸರ್ಕಾರ ಸಂಸತ್ತಿನ ಅಧಿವೇಶನವನ್ನು ಕರೆಯಲು ಹಿಂಜರಿಯುತ್ತಿದೆ.

ಇಂಡಿಯಾ ಒಕ್ಕೂಟದ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಉದ್ಧವ್ ಠಾಕ್ರೆ ಬಣದ ಸಂಜಯ್ ರಾವತ್, “ನಾವು ಪ್ರಧಾನಿ ಮೋದಿಗೆ ಕಳುಹಿಸಿದ ಪತ್ರಕ್ಕೆ ಪ್ರಧಾನ ವಿರೋಧ ಪಕ್ಷಗಳು ಸಹಿ ಹಾಕಿವೆ. ಇದು ಸಾಮಾನ್ಯ ಪತ್ರವಲ್ಲ. ವಿರೋಧ ಪಕ್ಷಗಳು ಜನರ ಧ್ವನಿ. ಪಹಲ್ಗಾಮ್‌ನಲ್ಲಿ ಏನಾಯಿತು ಎಂಬುದರ ಕುರಿತು ನಾವು ವಿಶೇಷ ಅಧಿವೇಶನ ನಡೆಸಿದರೆ, ದೇಶದ ಪ್ರತಿಷ್ಠೆ ಹಾಗೆಯೇ ಉಳಿಯುತ್ತದೆ. ನಾಗರಿಕರಿಗೆ ಉತ್ತರಗಳು ಸಿಗುತ್ತವೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಆದೇಶದ ಮೇರೆಗೆ ಕದನ ವಿರಾಮ ಘೋಷಿಸಲು ಸಾಧ್ಯವಾಗುವುದಾದರೆ, ಪ್ರತಿಪಕ್ಷಗಳ ಕೋರಿಕೆಯ ಮೇರೆಗೆ ಅವರು ವಿಶೇಷ ಅಧಿವೇಶನವನ್ನೂ ಕರೆಯಬಹುದು. ಇದಕ್ಕಾಗಿಯೂ ನಾವು ಟ್ರಂಪ್ ಅವರ ಬಳಿಗೆ ಹೋಗಬೇಕೇ?” ಎಂದು ಕುಟುಕಿದ್ದಾರೆ.

ಕಾಂಗ್ರೆಸ್ ನಾಯಕ ದೀಪೇಂದರ್ ಸಿಂಗ್ ಹೂಡಾ ಪ್ರತಿಕ್ರಿಯಿಸಿದ್ದು, “ಹದಿನಾರು ವಿರೋಧ ಪಕ್ಷಗಳು ಪ್ರಧಾನಿ ಮೋದಿಗೆ ಪತ್ರ ಬರೆದಿವೆ. ನಮ್ಮ ಸಶಸ್ತ್ರ ಪಡೆಗಳಿಗೆ ಕೃತಜ್ಞತೆ ಸಲ್ಲಿಸಲು ವಿಶೇಷ ಅಧಿವೇಶನವನ್ನು ಕರೆಯುವಂತೆ ಪಕ್ಷಗಳು ಒತ್ತಾಯಿಸಿವೆ. ಪಹಲ್ಗಾಮ್‌ನಿಂದ ಆಪರೇಷನ್ ಸಿಂಧೂರ್‌ವರೆಗೆ, ಕದನ ವಿರಾಮ ಘೋಷಣೆಯಿಂದ ಹಿಡಿದು ಇತರ ದೇಶಗಳಿಗೆ ಭೇಟಿ ನೀಡುವ ನಿಯೋಗಗಳವರೆಗೆ, ಈ ಎಲ್ಲ ವಿಷಯಗಳನ್ನು ನಾವು ಸಂಸತ್ತಿನಲ್ಲಿ ಚರ್ಚಿಸಬೇಕು” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...