ಯುದ್ಧ ಬೇಡ ಎಂದು ಹೇಳಿಕೆ; ಪಾಕ್​ ಮಾಧ್ಯಮಗಳಲ್ಲಿ ಸುದ್ದಿಯಾದ ಸಿಎಂ ಸಿದ್ದರಾಮಯ್ಯ

Date:

ಹಲ್ಗಾಮ್ ಉಗ್ರರ ದಾಳಿ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಕಿಸ್ತಾನ ಮಾಧ್ಯಮಗಳಲ್ಲೂ ಸುದ್ದಿಯಾಗಿದ್ದಾರೆ. ಪಾಕಿಸ್ತಾನದ ಮೇಲೆ ಭಾರತ ಯುದ್ಧ ಮಾಡಬಾರದು ಎಂದು ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದಾರೆ. ಇದನ್ನು ಪಾಕಿಸ್ತಾನ ಮಾಧ್ಯಮಗಳು ಸುದ್ದಿ ಪ್ರಸಾರ ಮಾಡಿವೆ.

ನಿನ್ನೆ (ಏಪ್ರಿಲ್ 26) ಮೈಸೂರಲ್ಲಿ ಪಹಲ್ಗಾಮ್ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಪಾಕಿಸ್ತಾನದ ಜೊತೆ ಯುದ್ಧ ಮಾಡುವ ಅಗತ್ಯತೆ ಇಲ್ಲ. ಆದರೆ, ಅನಿವಾರ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಪಹಲ್ಗಾಮ್ ಅದೊಂದು ಯಾತ್ರಾರ್ಥಿಗಳ ಸ್ಥಳ. ಅಲ್ಲಿ ಭದ್ರತೆಯನ್ನು ಕೈಗೊಳ್ಳಬೇಕಿತ್ತು. ಈ ಹಿಂದೆ ಪುಲ್ವಾಮಾ ದಾಳಿಯಲ್ಲೂ ಘೋರ ದುರಂತ ಸಂಭವಿಸಿತ್ತು. ಕೇಂದ್ರ ಸರ್ಕಾರವೇ ಭದ್ರತಾ ವೈಫಲ್ಯ ಆಗಿದೆ. ಅದೊಂದು ಗುಪ್ತಚರ ಹಾಗೂ ಭದ್ರತಾ ವೈಫಲ್ಯ​. ಕೇಂದ್ರ ಸರ್ಕಾರಕ್ಕೆ ಭದ್ರತಾ ಕ್ರಮ ತೆಗೆದುಕೊಂಡಿಲ್ಲ. ಈಗ ಯಾವುದೇ ಕ್ರಮ ತೆಗೆದುಕೊಂಡರೂ 26 ಜನ ವಾಪಸ್ ಬರುವುದಿಲ್ಲ ಎಂದಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಹ್ಯ ಭಯೋತ್ಪಾದನೆಗೆ ಆಂತರಿಕ ಮುಸ್ಲಿಂ ವಿರೋಧ ಉತ್ತರವಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಒದೇ ವೇಳೆ ಪಾಕಿಸ್ತಾನದ ಮೇಲೆ ಯುದ್ಧ ಸಾರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಯುದ್ಧದ ಅಗತ್ಯತೆ ಇಲ್ಲ. ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಅಷ್ಟೇ. ಭದ್ರತಾ ವ್ಯಸಸ್ಥೆ ಮಾಡಬೇಕು. ಯುದ್ಧದ ಪರ ನಾವು ಇಲ್ಲ. ಶಾಂತಿ ಇರಬೇಕು. ಜನರಿಗೆ ಭದ್ರತೆ ಇರಬೇಕು. ಕೇಂದ್ರ ಸರ್ಕಾರ ಭದ್ರತಾ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಹೇಳಿದ್ದರು. ಈ ಹೇಳಿಕೆಯನ್ನು ಪಾಕ್‌ನ ಜಿಯೋ ಟಿವಿ ಸೇರಿದಂತೆ ಹಲವು ಮಾಧ್ಯಮಗಳು ಪ್ರಸಾರ ಮಾಡಿವೆ.

ಸಿದ್ದರಾಮಯ್ಯ ಪಾಕ್ ಮಾಧ್ಯಮಗಳಲ್ಲಿ ಸುದ್ದಿಯಾಗುವಂತೆ ಹೇಳಿಕೆ ನೀಡಿದ ಬೆನ್ನಲ್ಲೇ ಇತ್ತ ಬಿಜೆಪಿ ನಾಯಕರು ಟೀಕೆ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ವಿರೋಧ ಪಕ್ಷದ ನಾಯಕ ಆರ್‌. ಅಶೋಕ್, ಶಾಸಕ ಜನಾರ್ದನ ರೆಡ್ಡಿ ಸೇರಿದಂತೆ ಬಹುತೇಕ ಬಿಜೆಪಿ ನಾಯಕರು ಪಾಕ್ ಟಿವಿ ಪ್ರಸಾರ ಮಾಡಿರುವ ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...