ಯುದ್ಧ ಸ್ಥಿತಿ | ಭಾರತದ ಮೇಲೆ ಎಂಟು ಕ್ಷಿಪಣಿ ಹಾರಿಸಿದ ಪಾಕಿಸ್ತಾನ; ತಡೆದು ನಿಲ್ಲಿಸಿದ ಭಾರತ

Date:

ಭಾರತದ 15 ನಗರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಯತ್ನಿಸಿರುವ ಪಾಕಿಸ್ತಾನದ ಪ್ರಯತ್ನಗಳನ್ನು ವಿಫಲಗೊಳಿಸಿದ ಬೆನ್ನಲ್ಲೇ, ಪಾಕಿಸ್ತಾನ ದೇಶವು ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳ ಮೇಲೆ ಅಗಾಧವಾದ ದಾಳಿಯನ್ನು ಪ್ರಾರಂಭಿಸಿದೆ. ಗಡಿಯಲ್ಲಿ ಯುದ್ಧ ಸ್ಥಿತಿ ನಿರ್ಮಾಣವಾಗಿದೆ.

ನಿಯಂತ್ರಣ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿರುವ ಗಡಿ ಪ್ರದೇಶಗಳಾದ ಆರ್‌ಎಸ್ ಪುರ, ಅರ್ನಿಯಾ, ಸಾಂಬಾ, ಹಿರಾನಗರಗಳು ಭಾರೀ ಶೆಲ್ ದಾಳಿಗೆ ಒಳಗಾಗಿದ್ದರೆ, ಭಾರತೀಯ ವಾಯುಪಡೆ ಪಾಕ್ ದಾಳಿಯನ್ನು ಹೊಡೆದುರುಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಆರ್‌ಎಸ್ ಪುರ, ಅರ್ನಿಯಾ, ಸಾಂಬಾ, ಹಿರಾನಗರ ಭಾರೀ ಮಿಲಿಟರಿ ಹೊಂದಿರುವ ಪ್ರದೇಶಗಳಾಗಿದ್ದು, ಈ ಪ್ರದೇಶಗಳ ಮೇಲೆ ಎಂಟು ಕ್ಷಿಪಣಿಗಳನ್ನು ಹಾರಿಸಲಾಗಿದೆ. ಈ ಎಲ್ಲವನ್ನೂ ಭಾರತೀಯ ವಾಯುಪಡೆ ತಡೆದು ನಿಲ್ಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾತ್ರಿ 9 ಗಂಟೆಗೆ ಸ್ವಲ್ಪ ಮೊದಲು, ಜಮ್ಮುವಿನಿಂದ ಜೋರಾಗಿ ಸ್ಫೋಟಗಳು ಕೇಳಿಬಂದವು. ನಂತರ ಸೈರನ್‌ಗಳ ಕೂಗು ಹಾಕಿ, ಬ್ಲ್ಯಾಕೌಟ್ ಮಾಡಲಾಗಿದೆ.

ಸ್ಥಳೀಯರು ಕಳುಹಿಸಿದ ಸೆಲ್‌ಫೋನ್ ವಿಡಿಯೊಗಳು ಯುದ್ಧದ ಸ್ಥಿತಿಯನ್ನು ವಿವರಿಸುತ್ತಿವೆ.

ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಪಾಕಿಸ್ತಾನ ಮೂಲದ ಡ್ರೋನ್‌ಗಳು ಮತ್ತು ಕ್ಷಿಪಣಿಗಳು ಜಮ್ಮು, ಪಠಾಣ್‌ಕೋಟ್ ಮತ್ತು ಉಧಂಪುರದಲ್ಲಿರುವ ಮಿಲಿಟರಿ ನೆಲೆಗಳನ್ನು ಟಾರ್ಗೆಟ್ ಮಾಡಿವೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಯಾವುದೇ ಸಾವುನೋವುಗಳು ಅಥವಾ ಆಸ್ತಿಪಾಸ್ತಿ ನಾಶವಾದ ಸಂಬಂಧ ವರದಿಯಾಗಿಲ್ಲ. ರಕ್ಷಣಾ ಸಚಿವಾಲಯವು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದು, “ಭಾರತವು ತನ್ನ ಸಾರ್ವಭೌಮತ್ವವನ್ನು ರಕ್ಷಿಸಲು ಮತ್ತು ತನ್ನ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಂಪೂರ್ಣವಾಗಿ ಸಿದ್ಧವಾಗಿದೆ” ಎಂದು ತಿಳಿಸಿದೆ.

ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಪಾಕಿಸ್ತಾನಿ ಡ್ರೋನ್‌ಗಳನ್ನು ತಡೆಹಿಡಿಯಲಾಗಿದೆ. ಸ್ಫೋಟಗಳು ಕೇಳಿಬರುತ್ತಿವೆ.

ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಐಪಿಎಲ್‌ ಪಂದ್ಯವನ್ನೂ ರದ್ದು ಮಾಡಲಾಗಿದೆ. ವಿಶೇಷ ರೈಲಿನ ಮೂಲಕ ಆಟಗಾರರು ಮತ್ತು ಸಿಬ್ಬಂದಿಗಳನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲು ಯೋಜಿಸಲಾಗಿದೆ ಎಂದು ವರದಿಯಾಗಿದೆ. ಮತ್ತೊಂದೆಡೆ ಭಾರತದ ಪ್ರತಿ ದಾಳಿಯ ಸಾಧ್ಯತೆಯಿಂದಾಗಿ ಪಾಕಿಸ್ತಾನದಲ್ಲಿ ಪಿಎಸ್‌ಎಲ್ ಪಂದ್ಯವನ್ನೂ ಮುಂದೂಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...