ಕ್ರಿಕೆಟಿಗ ಶೋಯೆಬ್‌ ಅಖ್ತರ್ ಒಳಗೊಂಡು ಪಾಕಿಸ್ತಾನದ ಯೂಟ್ಯೂಬ್‌ ಚಾನೆಲ್‌ಗಳನ್ನು ನಿಷೇಧಿಸಿದ ಕೇಂದ್ರ

Date:

ಕಾಶ್ಮೀರದ ಪಹಲ್ಗಾಮ್‌ ದಾಳಿಯ ನಂತರ ಪಾಕಿಸ್ತಾನದ ಮೇಲೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರವು ಮಾಜಿ ಕ್ರಿಕೆಟಿಗ ಶೋಯೆಬ್‌ ಅಖ್ತರ್ ಒಳಗೊಂಡು 16 ಪಾಕಿಸ್ತಾನಿಯರ ಯೂಟ್ಯೂಬ್‌ ಚಾನೆಲ್‌ಗಳನ್ನು ಇಂದಿನಿಂದ ನಿಷೇಧಿಸಿದೆ.

ಪಾಕ್‌ ಮೂಲದ ಯೂಟ್ಯೂಬ್‌ ಚಾನಲ್‌ಗಳನ್ನು ತೆರೆಯಲು ಹೋದರೆ “ಕೇಂದ್ರ ಸರ್ಕಾರದ ರಾಷ್ಟ್ರೀಯ ಭದ್ರತೆ ಅಥವಾ ಸಾರ್ವಜನಿಕ ಸುವ್ಯವಸ್ಥೆಯ ಸಂಬಂಧ ಸರ್ಕಾರದ ಆದೇಶದ ಅನುಸಾರ ಈ ದೇಶದಲ್ಲಿ ಈ ಚಾನೆಲ್ ಲಭ್ಯವಿರುವುದಿಲ್ಲ. ಸರ್ಕಾರದ ಸ್ಥಗಿತದ ಹೆಚ್ಚಿನ ಮಾಹಿತಿಗಾಗಿ ಗೂಗಲ್‌ನ transparencyreport.google.com ಜಾಲತಾಣಕ್ಕೆ ಭೇಟಿ ನೀಡಿ” ಎಂಬ ಸಂದೇಶ ಕಾಣಿಸಿಕೊಳ್ಳುತ್ತಿದೆ.

ಅದೇ ರೀತಿ ಡಾನ್ ನ್ಯೂಸ್, ಎಆರ್‌ವೈ ನ್ಯೂಸ್, ಸಮಾ ಟಿವಿ ಮತ್ತು ಜಿಯೋ ನ್ಯೂಸ್ ಸೇರಿದಂತೆ ಹಲವಾರು ಸುದ್ದಿ ವಾಹಿನಿಗಳ ಆನ್‌ಲೈನ್ ಸ್ಟ್ರೀಮಿಂಗ್ ಅನ್ನು ಸಹ ನಿಷೇಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಹ್ಯ ಭಯೋತ್ಪಾದನೆಗೆ ಆಂತರಿಕ ಮುಸ್ಲಿಂ ವಿರೋಧ ಉತ್ತರವಲ್ಲ

ಕೇಂದ್ರದ ನಿಷೇಧದಿಂದ ಪಾಕಿಸ್ತಾನದ ಶೋಯೆಬ್‌ ಅಖ್ತರ್, ಆರ್ಜೊ ಕಮ್ಜಿ, ಸಯ್ಯದ್‌ ಮುಜಮಿಲ್‌ ಸೇರಿದಂತೆ ಮುಂತಾದ ಪ್ರಖ್ಯಾತರ ಯೂಟ್ಯೂಬ್‌ ಚಾನೆಲ್‌ಗಳು ಭಾರತದಲ್ಲಿ ಲಭ್ಯವಾಗುವುದಿಲ್ಲ.

ಏಪ್ರಿಲ್‌ 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ದಾಳಿ ನಡೆಸಿದ ಪರಿಣಾಮ 26 ಮಂದಿ ನಾಗರಿಕರು ಮೃತಪಟ್ಟಿದ್ದರು. ಈ ಘಟನೆಯ ನಂತರ ಎರಡೂ ದೇಶಗಳಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಅಂದಿನಿಂದ ಎರಡೂ ದೇಶಗಳಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...