ಮಣಿಪುರ ಹಿಂಸಾಚಾರ | ಶಂಕಿತ ಬಂಡುಕೋರರ ಹೊಂಚುದಾಳಿ; ಸಿಆರ್‌ಪಿಎಫ್ ಯೋಧ ಹುತಾತ್ಮ

Date:

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಶಂಕಿತ ಬಂಡುಕೋರರು ನಡೆಸಿದ ಹೊಂಚುದಾಳಿಯಿಂದಾಗಿ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿದ್ದಾರೆ. ರಾಜ್ಯ ಪೊಲೀಸರೊಂದಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನ ಯೋಧ ಗಸ್ತು ತಿರುಗುತ್ತಿದ್ದಾಗ ಶಂಕಿತ ಬಂಡುಕೋರರು ದಾಳಿ ನಡೆಸಿದ್ದಾರೆ. ಇಬ್ಬರು ಪೊಲೀಸ್ ಕಮಾಂಡೋಗಳು ಗಾಯಗೊಂಡಿದ್ದಾರೆ.

ಅಸ್ಸಾಂ ಗಡಿಯಲ್ಲಿರುವ ಜಿಲ್ಲೆಯಲ್ಲಿ ಶಂಕಿತ ಬಂಡುಕೋರರು ಭಾರೀ ಗುಂಡಿನ ದಾಳಿ ನಡೆಸಿದ್ದಾರೆ. ಸಿಆರ್‌ಪಿಎಫ್ ಯೋಧ ಗಸ್ತು ತಿರುಗುತ್ತಿದ್ದ ಎಸ್‌ಯುವಿ ಬಳಿ ತೆರಳುತ್ತಿದ್ದಾಗ ಶಂಕಿತ ಉಗ್ರರು ಬಂಡುಕೋರರು ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೊಂಚುದಾಳಿ ನಡೆದ ಪ್ರದೇಶದಲ್ಲಿ ನಿಂತಿದ್ದ ಎಸ್‌ಯುವಿ ಮೇಲೆಯೂ ದಾಳಿ ನಡೆದಿದ್ದು, ವಾಹನದಲ್ಲಿ ಹಲವಾರು ಬುಲೆಟ್‌ ಗುರುತುಗಳಿದೆ. ವಾಹನದೊಳಗಿದ್ದ ಇಬ್ಬರು ಪೊಲೀಸ್ ಕಮಾಂಡೋಗಳು ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಎನ್‌ಡಿಟಿವಿಗೆ ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ನಮ್ಮ ಮೇಲೆ ದಾಳಿಯಾದಾಗ ನಾವು ಪರಿಣಾಮಕಾರಿ ದಾಳಿ ನಡೆಸಿದ್ದೇವೆ. ಬಂಡುಕೋರರು ಅರಣ್ಯಕ್ಕೆ ಓಡಿಹೋಗಿದ್ದಾರೆ. ಸದ್ಯ ಪತ್ತೆ ಕಾರ್ಯಾಚರಣೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ಮಣಿಪುರ ವಿಚಾರವನ್ನು ಇಂಡಿಯಾ ಒಕ್ಕೂಟ ಸಂಸತ್ತಿನಲ್ಲಿ ಮತ್ತೆ ಎತ್ತುತ್ತದೆ: ರಾಹುಲ್ ಗಾಂಧಿ

ಈ ಬಗ್ಗೆ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಎಕ್ಸ್ ಪೋಸ್ಟ್ ಮಾಡಿದ್ದಾರೆ. “ಶಂಕಿತ ಕುಕಿ ಉಗ್ರಗಾಮಿಗಳು” ಎಂದು ಹೇಳಿದ್ದು ಈ ದಾಳಿಯನ್ನು ಖಂಡಿಸಿದ್ದಾರೆ.

ಇನ್ನು ಇತ್ತೀಚೆಗೆ ಜಿರಿಬಾಮ್‌ನಲ್ಲಿ ಮೈತಿ ಮತ್ತು ಹ್ಮಾರ್ ಬುಡಕಟ್ಟುಗಳ ನಡುವಿನ ಘರ್ಷಣೆ ನಡೆದಿದ್ದು, ಕಳೆದ ಒಂದು ವರ್ಷದಿಂದ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ.

2023ರ ಮೇ ತಿಂಗಳಲ್ಲಿ ಮೈತಿ ಮತ್ತು ಕುಕಿ ಜನಾಂಗದ ನಡುವೆ ಹಿಂಸಾಚಾರ ಆರಂಭವಾಗಿದ್ದು, ಇಂದಿನವರೆಗೂ ಹಿಂಸಾಚಾರ ಕೊನೆಯಾಗಿಲ್ಲ. ಈವರೆಗೆ 200ಕ್ಕೂ ಅಧಿಕ ಸಾವನ್ನಪ್ಪಿದ್ದು ಎರಡೂ ಜನಾಂಗದ ಸಾವಿರಾರೂ ಮಂದಿ ನಿರಾಶ್ರಿತರ ಕೇಂದ್ರದಲ್ಲಿ ಜೀವಿಸುತ್ತಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...