ಪೋಷಕರಿಂದಲೇ ಪೈಶಾಚಿಕ ಕೃತ್ಯ: ಮಗಳನ್ನು ವೇಶ್ಯಾವಾಟಿಕೆಗೆ ದೂಡಿ ದೌರ್ಜನ್ಯ

Date:

ವಿಕೃತ ಮನಸ್ಥಿತಿಯುಳ್ಳ ಪೋಷಕರು ತಮ್ಮ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ್ದು, ಆಕೆಯ ಅಶ್ಲೀಲ ಫೋಟೋಗಳು ಮತ್ತು ವಿಡಿಯೋಗಳನ್ನು ಚಿತ್ರೀಕರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಸಂತ್ರಸ್ತ ಅಪ್ರಾಪ್ತ ಬಾಲಕಿಯನ್ನು ರಕ್ಷಿಸಲಾಗಿದ್ದು, ಆಕೆಯ ತಂದೆ-ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ಚೆನ್ನೈನಲ್ಲಿ ಘಟನೆ ನಡೆದಿದೆ. ಹಣ ಸಂಪಾದಿಸುವುದಕ್ಕಾಗಿ ತಮ್ಮ ಮಗಳ ಅಶ್ಲೀಲ ಫೋಟೋಗಳು ಮತ್ತು ವಿಡಿಯೋಗಳನ್ನು ಚಿತ್ರೀಕರಿಸಿ, ಇಂಟರ್‌ನೆಟ್‌ನಲ್ಲಿ ಅಪ್‌ಲೋಡ್‌ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ದಂಪತಿಗಳು ಅಪ್ರಾಪ್ತ ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಇಂಟರ್‌ನೆಟ್‌ನಲ್ಲಿ ಅಪ್‌ಲೋಡ್ ಮಾಡುತ್ತಿರುವ ಬಗ್ಗೆ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಪೊಲೀಸರಿಗೆ ದೂರು ನೀಡಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ದಂಪತಿಯನ್ನು ಬಂಧಿಸಿದ್ದಾರೆ. ಅವರ ಪೋನ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಫೋನ್‌ಗಳಲ್ಲಿ ಅಪ್ರಾಪ್ತ ಮಕ್ಕಳ ಅಶ್ಲೀಲ ವಿಡಿಯೋಗಳು ಕಂಡುಬಂದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಪ್ರಾಪ್ತ ಹೆಣ್ಣು ಮಕ್ಕಳ ಒಪ್ಪಿಗೆ ಇಲ್ಲದೆ, ವಿಡಿಯೋಗಳನ್ನು ಚಿತ್ರೀಕರಿಸಿದ್ದಾರೆ. ಹೆಚ್ಚಿನ ತನಿಖೆಯಲ್ಲಿ, ದಂಪತಿಗಳು ತಮ್ಮ ಸ್ವಂತ ಮಗಳನ್ನೂ ವೇಶ್ಯಾವಾಟಿಕೆಗೆ ದೂಡಿರುವುದು ಬೆಳಕಿಗೆ ಬಂದಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ದಂಪತಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತ ಬಾಲಕಿಯನ್ನು ಸರ್ಕಾರಿ ಆರೈಕೆ ಕೇಂದ್ರದಲ್ಲಿ ಇರಿಸಲಾಗಿದೆ. ಕೌನ್ಸೆಲಿಂಗ್ ಜೊತೆಗೆ ಇತರ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...