ಸಂಸತ್ತಿನ ಭದ್ರತಾ ಮುಖ್ಯಸ್ಥರ ಹುದ್ದೆ 45 ದಿನಗಳಿಂದ ಖಾಲಿ; ಶೇ.40 ಸಿಬ್ಬಂದಿ ಕೊರತೆ

Date:

ಡಿ.13 ರಂದು ಲೋಕಸಭೆ ಹಾಗೂ ಸಂಸತ್ ಆವರಣದಲ್ಲಿ ನಡೆದ ಭದ್ರತಾ ಲೊಪ ಘಟನೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾದವು. ಕಲಾಪದೊಳಗೆ ನುಗ್ಗಿದ ಇಬ್ಬರು ಸೇರಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆದರೆ ಸಂಸತ್ತಿನಲ್ಲಾದ ಭದ್ರತಾ ಲೋಪಕ್ಕೆ ಕೇಂದ್ರದ ನಿರ್ಲಕ್ಷ್ಯವೇ ಕಾರಣ ಎನ್ನುವ ವ್ಯಾಪಕ ಟೀಕೆ ಕೇಳಿಬಂದಿದೆ. ವರದಿಗಳ ಪ್ರಕಾರ ಇಡೀ ಸಂಸತ್ತಿನ ಭದ್ರತೆಯ ಮೇಲ್ವಿಚಾರಣೆಯ ಜವಾಬ್ದಾರಿ ಹೊಂದಿರುವ ಜಂಟಿ ಕಾರ್ಯದರ್ಶಿ (ಭದ್ರತೆ) ಸ್ಥಾನವು ಕಳೆದ 45 ದಿನಗಳಿಂದ ಖಾಲಿಯಿದೆ.

ಹಿಂದಿನ ಅಧಿಕಾರಿ ರಘುಬೀರ್ ಲಾಲ್ ಅವರನ್ನು ನವೆಂಬರ್ ಆರಂಭದಲ್ಲಿ ಕಾನೂನು ಇಲಾಖೆಯ ಹೆಚ್ಚುವರಿ ಮಹಾನಿರ್ದೇಶಕರಾಗಿ ಅವರ ತವರು ರಾಜ್ಯ ಉತ್ತರ ಪ್ರದೇಶಕ್ಕೆ ವರ್ಗಾಯಿಸಲಾಗಿದೆ. ಈ ಮಧ್ಯೆ  ನಿರ್ದೇಶಕ ಮಟ್ಟದ ಅಧಿಕಾರಿ ಬ್ರಿಜೇಶ್ ಸಿಂಗ್ ಅವರು ತಾತ್ಕಾಲಿಕವಾಗಿ ಅಧಿಕಾರ ನಿರ್ವಹಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅತ್ಯಾಚಾರ ಆರೋಪಿ ಇನ್ನೂ ಏಕೆ ಶಾಸಕರಾಗಿದ್ದಾರೆ?: ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ಆಕ್ರೋಶ

ಇನ್ನೂ ಮುಖ್ಯವಾದ ವಿಚಾರವೆಂದರೆ, ನೂತನ ಸಂಸತ್ತಿನಲ್ಲಿ ಶೇ.40 ರಷ್ಟು ಭದ್ರತಾ ಸಿಬ್ಬಂದಿ ಕೊರತೆಯಿದೆ. ಇದು ಸಂಸತ್ತಿನ ಭದ್ರತಾ ವ್ಯವಸ್ಥೆಯಲ್ಲಿ ಗಮನಾರ್ಹ ಕೊರತೆಯಾಗಿದೆ. ಪ್ರಸ್ತುತ ನೂತನ ಸಂಸತ್ತಿನಲ್ಲಿ 230 ಸಿಬ್ಬಂದಿ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ.

ಇದಲ್ಲದೆ, ಲೋಕಸಭೆಯ ಚೇಂಬರ್ ಒಳಗೆ ಇಬ್ಬರು ವ್ಯಕ್ತಿಗಳು ಅನಿಲ ಕ್ಯಾನ್‌ಗಳನ್ನು ಸಿಡಿಸಿದ ಇತ್ತೀಚಿನ ಉಲ್ಲಂಘನೆಯ ಸಮಯದಲ್ಲಿ, ಹೊಗೆ ಪತ್ತೆ ಹಚ್ಚುವ ಅಲಾರಂಗಳು ಸಕ್ರಿಯವಾಗಿಲ್ಲ ಎಂಬುದು ಗಮನಿಸಬೇಕಾದ ಸಂಗತಿ.

ವಿಶೇಷವಾಗಿ ಸಂಸತ್ತಿನ ಸದಸ್ಯರು ಶಿಫಾರಸು ಮಾಡಿದ ಕಾರಣದಿಂದ ಹೆಚ್ಚಿನ ಸಂಖ್ಯೆಯ ಸಂದರ್ಶಕರು ಹಾಜರಾಗುತ್ತಿದ್ದು, ಇದರ ಸಂಪೂರ್ಣ ಪರಿಶೀಲನೆಯ ಕಾರ್ಯವಿಧಾನಗಳನ್ನು ನಡೆಸುವುದು ಸವಾಲಾಗಿದೆ. ಈ ಕಾರಣದಿಂದಲೇ ಇಬ್ಬರು ಸಂದರ್ಶಕರು ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...